ಜನಾಂಗೀಯ ನಿಂದನೆ : ಜಮೀರ್ ಅಹಮ್ಮದ್ ಖಾನ್ ವಿರುದ್ಧ ಜೆಡಿಎಸ್ ದೂರು
Team Udayavani, Apr 5, 2021, 7:45 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ವರ್ಣ ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ದೂರು ನೀಡಿದೆ.
ಬೆಂಗಳೂರು ಮಹಾನಗರ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಎ.ಎಂ. ಪ್ರವೀಣ್ ಕುಮಾರ್ ನೇತೃತ್ವದ ನಿಯೋಗ ಸೋಮವಾರ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ಸಲ್ಲಿಸಿದೆ.
ಮಾ. 30ರಂದು ಬಸವಕಲ್ಯಾಣ ಕ್ಷೇತ್ರದ ಉಪಚುನಾವಣಾ ಪ್ರಚಾರ ಸಂದರ್ಭದಲ್ಲಿ ಜಮೀರ್ ಅಹಮ್ಮದ್ ಖಾನ್ ಅವರು ಎಚ್.ಡಿ.ಕುಮಾರಸ್ವಾಮಿಯವರ ಬಗ್ಗೆ ಉರ್ದು ಭಾಷೆಯಲ್ಲಿ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯೊಬ್ಬರ ಬಗ್ಗೆ ಈ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಕದಡಲು ಮುಂದಾಗಿರುವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿದೆ.
ಇದನ್ನೂ ಓದಿ :ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್: ICUನಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.