ಜಿದ್ದಾಜಿದ್ದಿನ ಹೋರಾಟದಲ್ಲಿ ಗೆಲುವು ಸಾಧಿಸಲು ಯಶಸ್ವಿಯಾದ ಜಿಗ್ನೇಶ್ ಮೇವಾನಿ
ಮೀಸಲು ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧೆ ನೀಡಿದ ಬಿಜೆಪಿ ಅಭ್ಯರ್ಥಿ
Team Udayavani, Dec 8, 2022, 4:42 PM IST
ಗಾಂಧಿನಗರ : ಗುಜರಾತ್ ನಲ್ಲಿ ಬಿಜೆಪಿ ಭಾರಿ ಅಲೆಯ ನಡುವೆಯೂ ವಡಗಾಮ್ ಎಸ್ ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿಗ್ನೇಶ್ ಮೇವಾನಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೇವಾನಿ 82170 ಮತಗಳನ್ನು ಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಮಣಿಭಾಯ್ ಜೇತಭಾಯಿ ವಘೇಲಾ 78240 ಮತಗಳು ಆಪ್ ನ ದಲಪತಭಾಯಿ ದಹ್ಯಾಭಾಯಿ ಭಾಟಿಯಾ 4096 ಮತಗಳು , ಓವೈಸಿ ಅವರ ಎಐಎಐಎಮ್ ನ ಸುಂಧಿಯಾ ಕಲ್ಪೇಶಕುಮಾರ್ 1871 ಮತಗಳನ್ನು ಪಡೆದಿದ್ದಾರೆ.
ಬನಸ್ಕಾಂತ ಜಿಲ್ಲೆಯ ವಡಗಾಮ್ ಕ್ಷೇತ್ರದಲ್ಲಿ 40,000 ಕ್ಕೂ ಹೆಚ್ಚು ಎಸ್‌ಸಿ ಮತದಾರರಿದ್ದು, ಸುಮಾರು 10,000 ಎಸ್‌ಟಿ ಮತದಾರರು ನಿರ್ಣಾಯಕರಾಗಿದ್ದರು.ಅಂದಾಜಿನ ಪ್ರಕಾರ, 2,70,000 ಮತದಾರರನ್ನು ಹೊಂದಿದೆ. 64 % ಮತದಾನ ನಡೆದಿತ್ತು.
ಗುಜರಾತ್ 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಹಿಂತೆಗೆದುಕೊಂಡು ಮೇವಾನಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದವು. ಅವರು ಗೆಲುವು ಸಾಧಿಸಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದರು. ವಡ್ಗಾಮ್ ಕ್ಷೇತ್ರದಿಂದ ಪಕ್ಷೇತರರಾಗಿ ಗೆದ್ದಿದ್ದ ಮೇವಾನಿ,ವಕೀಲರಾಗಿ, ಪತ್ರಕರ್ತರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ( ರಾಜ್ಯ ದಲಿತ ಹಕ್ಕುಗಳ ವೇದಿಕೆ) ಸಂಚಾಲಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.