ಶಿರ್ವ: ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ
Team Udayavani, Nov 28, 2021, 6:03 PM IST
ಶಿರ್ವ: ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ 26ನೇ ವರ್ಷದ ಶಿರ್ವ ನಡಿಬೆಟ್ಟು ಸೂರ್ಯ - ಚಂದ್ರ ಸಂಪ್ರದಾಯ ಬದ್ಧ ಕಂಬಳವು ರವಿವಾರ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು.
ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ ಜೋಡುಕರೆಗೆ ಕಾಯಿ ಒಡೆಯುವುದರ ಮೂಲಕ ಕಂಬಳವನ್ನು ಉದ್ಘಾಟಿಸಿದರು.
ಶತಮಾನಗಳಿಂದ ನಡೆದು ಬರುತ್ತಿರುವ ಧಾರ್ಮಿಕ ಹಿನ್ನೆಲೆಯನ್ನು ಹೊಂದಿರುವ ಶಿರ್ವ ನಡಿಬೆಟ್ಟು ಕಂಬಳವು ನಡಿಬೆಟ್ಟು ಚಾವಡಿಯ ದೈವ ಜುಮಾದಿಗೆ ಪೂಜೆ ಪುರಸ್ಕಾರ ನಡೆದ ಬಳಿಕ ಬಂಟ ಕೋಲ ನಡೆದು ಮೆರವಣಿಗೆಯಲ್ಲಿ ಕೊಂಬು, ವಾದ್ಯ ಘೋಷಗಳೊಂದಿಗೆ ಕೋಣಗಳನ್ನು ಗದ್ದೆಗಿಳಿಸಲಾಯಿತು. ಶಿರ್ವದ ದೈವ ದೇವರುಗಳ ಉತ್ಸವಗಳಲ್ಲಿ ಒಂದಕ್ಕೊಂದು ಸಂಬಂಧವಿದ್ದು ಸಂಪ್ರದಾಯ ಬದ್ಧವಾಗಿ ಕಂಬಳ ನಡೆಯುತ್ತದೆ.
ಹಗ್ಗ ಕಿರಿಯ ವಿಭಾಗದಲ್ಲಿ 30 ಜತೆ ಕೋಣಗಳು ಮತ್ತು ಸಬ್‌ಜೂನಿಯರ್ ವಿಭಾಗದಲ್ಲಿ 15 ಜತೆ ಒಟ್ಟು 45ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸಿದ್ದವು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನಗೊಂಡಿತು.
ಕಾರ್ಯಕ್ರಮದಲ್ಲಿ ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್. ಪಾಟ್ಕರ್, ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರು ರೆ|ಫಾ| ಡೆನ್ನಿಸ್ ಡೇಸಾ,ಸಹಾಯಕ ಧರ್ಮಗುರು ಫಾ| ರೋಲ್ವಿನ್ ಅರಾನ್ಹಾ, ಅಟ್ಟಿಂಜ ಶಂಭು ಶೆಟ್ಟಿ, ಮನೋಜ್ ಹೆಗ್ಡೆ,ಸೊರ್ಕಳ ಸಚ್ಚಿದಾನಂದ ಹೆಗ್ಡೆ, ಎಸ್.ಕೆ.ಸಾಲ್ಯಾನ್, ಸೂಡ ಪ್ರಶಾಂತ್ ಕುಮಾರ್ ಶೆಟ್ಟಿ, ಕೋಡು ಸದಾನಂದ ಶೆಟ್ಟಿ, ಸುಂದರ ಶೆಟ್ಟಿ,ಶೇಕರ ಶೆಟ್ಟಿ,ಕಾನಬೆಟ್ಟು ಬಡ್ಡು ಪೂಜಾರಿ,ಗ್ರಾ.ಪಂ. ಸದಸ್ಯ ಪ್ರವೀಣ್ ಸಾಲಿಯಾನ್, ರಾಜೇಶ್ ನಾಯ್ಕ,ಸುರೇಂದ್ರ ಪೂಜಾರಿ ಕೊಪ್ಪಲ, ವೀರೇಂದ್ರ ಪೂಜಾರಿ, ಹಿರಿಯರಾದ ಶಿರ್ವ ನಡಿಬೆಟ್ಟು ದಾಮೋದರ ಚೌಟ, ರತ್ನವರ್ಮ ಹೆಗ್ಡೆ, ಕಿಶೋರ್‌ಚಂದ್ರ ಹೆಗ್ಡೆ, ರಘುರಾಮ ನಾಯ್ಕ,ಚಂದ್ರಶೇಖರ ಹೆಗ್ಡೆ, ಕಂಬಳ ವ್ಯವಸ್ಥಾಪಕ ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು
Asia Cup Hockey: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 11-0 ಅಂತರದ ಜಯ
Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ
Singapore: ವಿಶ್ವ ಚೆಸ್ ಚಾಂಪಿಯನ್‌ಶಿಪ್: ಮೂರನೇ ಪಂದ್ಯದಲ್ಲಿ ಗುಕೇಶ್ ಗೆಲುವು
Badminton: ಸಯ್ಯದ್ ಮೋದಿ ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.