ಜೂ. ಖರ್ಗೆ ಮಣಿಸಲು ಬಿಜೆಪಿ ಪಡೆ ರಣತಂತ್ರ


Team Udayavani, May 5, 2023, 8:10 AM IST

KHARGE

ಕಲಬುರಗಿ: ಜಿಲ್ಲೆಯ ಚಿತ್ತಾಪುರ ಮೀಸಲು ಕ್ಷೇತ್ರ ಮೂರು ಕಾರಣಗಳಿಂದ ಗಮನ ಸೆಳೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್‌ ಖರ್ಗೆ ಅಭ್ಯರ್ಥಿಯಾಗಿರುವುದು, ರಾಜ್ಯ ಸರಕಾರ ವಿರುದ್ಧ ಪ್ರಖರವಾದ ಹೇಳಿಕೆಗಳಿಂದ ಟೀಕೆ ಮಾಡುತ್ತಿರುವುದು ಹಾಗೂ ಬಿಜೆಪಿ ಅಭ್ಯರ್ಥಿ ರೌಡಿ ಶೀಟರ್‌ ಎಂಬ ಕಾರಣಕ್ಕೆ ಚುನಾವಣೆಗೆ ಏಲ್ಲಿಲ್ಲದ ಮೆರುಗು ಬಂದಿದೆ.

ಕ್ಷೇತ್ರ ಕೈ ಬಿಟ್ಟು ಹೋಗಬಾರದು ಎಂದು ಕಾಂಗ್ರೆಸ್‌ ಚುನಾವಣೆ ಯನ್ನು ಒಂದು ಯುದ್ಧದ ರೀತಿಯಲ್ಲಿ ಪರಿಗಣಿಸಿದೆ. ಚುನಾ ವಣೆಯ ಎಲ್ಲ ಬೆಳವಣಿಗೆ ಹಾಗೂ ಸಂಘಟನಾತ್ಮಾಕ ಕ್ರಮಗಳ ಮೇಲೆ ಬಿಜೆಪಿ ವರಿಷ್ಠ ಮಂಡಳಿ ಅದರಲ್ಲೂ ಸ್ವಯಂ ಸೇವಕ ಸಂಘಟನೆಯವರು ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಬಿಜೆಪಿ ರೌಡಿಶೀಟರ್‌ಗೆ ಟಿಕೆಟ್‌ ಕೊಟ್ಟಿರುವುದನ್ನು ಕಾಂಗ್ರೆಸ್‌ ವ್ಯಾಪಕಗೊಳಿಸಿರುವ ಜತೆಗೆ ಮತದಾರರಲ್ಲಿ ರೌಡಿಶೀಟರ್‌ಗೆ ಟಿಕೆಟ್‌ ಕೊಟ್ಟಿರುವುದು ಎಷ್ಟು ಸಮಂಜಸ ಎಂಬುದಾಗಿ ಪ್ರಶ್ನಿಸು ತ್ತಿರುವುದನ್ನು ಬಿಜೆಪಿ ಸವಾಲಾಗಿ ಸ್ವೀಕರಿಸಿದೆ.

ಈಗಾಗಲೇ ಎರಡು ಸಲ ಗೆದ್ದಿರುವ ಪ್ರಿಯಾಂಕ್‌ 3ನೇ ಗೆಲುವಿಗಾಗಿ ಈಗ ಅಗ್ನಿಪರೀಕ್ಷೆಗೆ ಒಳಗಾಗಿದ್ದಾರೆ. ಕ್ಷೇತ್ರದಲ್ಲಿ ತಮ್ಮದೇಯಾದ ಶೈಲಿಯಲ್ಲಿ ಪ್ರಚಾರ ದಲ್ಲಿ ಮಾಡುತ್ತಿದ್ದು, ಬಿಜೆಪಿ ರಣತಂತ್ರಕ್ಕೆ ಪ್ರತಿತಂತ್ರ ರೂಪಿಸಿದ್ದಾರೆ. ಮಾಜಿ ಶಾಸಕ ವಿಶ್ವನಾಥ ಪಾಟೀಲ್‌ ಹೆಬ್ಟಾಳ ಹಾಗೂ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅರವಿಂದ ಚವ್ಹಾಣ, ಮುಖಂಡರಾದ ಶರಣಪ್ಪ, ಭೀಮಣ್ಣ ಸೀಬಾ, ಸಾಬಣ್ಣ ಡಿಗ್ಗಿ ಸಹಿತ ಇತರರು ಕಾಂಗ್ರೆಸ್‌ ಸೇರಿ ದ್ದರಿಂದ ಕಾಂಗ್ರೆಸ್‌ಗೆ ನೈತಿಕ ಬಲ ಹೆಚ್ಚಾಗಿದೆ. ಅರವಿಂದ ಚವ್ಹಾಣ ಕ್ಷೇತ್ರದಲ್ಲಿ ಕಳೆದೆರಡು ವರ್ಷ ದಿಂದ ಪಕ್ಷದ ಸಂಘಟನೆ ಮಾಡುತ್ತಾ ಬಂದಿದ್ದರು. ಆದರೆ ಅರವಿಂದ ಚವ್ಹಾಣ ಬದಲು ಮಣಿಕಂಠಗೆ ಟಿಕೆಟ್‌ ನೀಡಿದ್ದರಿಂದ ಸಹಜವಾಗಿ ಮುನಿಸಿಕೊಂಡು ಚವ್ಹಾಣ ಕಾಂಗ್ರೆಸ್‌ ಸೇರಿದ್ದಾರೆ.

ಬಿಜೆಪಿಯ ಮಣಿಕಂಠ ಸಹ ಕಳೆದ ಒಂದು ವರ್ಷದಿಂದ ಬೇರುಮಟ್ಟದಲ್ಲಿ ಪರಿಣಾಮಕಾರಿ ಕೆಲಸ ಮಾಡುತ್ತಾ ಬಂದಿರುವುದು, ಭಂಡ ಧೈರ್ಯ ಹೊಂದಿರುವುದೇ ಕಾಂಗ್ರೆಸ್‌ಗೆ ನಡುಕ ಶುರುವಾಗಿದೆ. ಬಿಜೆಪಿಯ ಕೆಲವು ಮುಖಂಡರು ಪಕ್ಷ ತ್ಯಜಿಸಿರಬಹುದು. ಆದರೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೈ ಬಿಟ್ಟಿಲ್ಲ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ಒಟ್ಟಾರೆ 20-20 ಮ್ಯಾಚ್‌ ಎನ್ನುವ ರೀತಿಯಲ್ಲಿ ಚುನಾವಣ ಏರಿಳಿತ ಕಂಡು ಬರುತ್ತಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದಾರೆ. ನ್ಯಾಯಾಧೀಶ ಹುದ್ದೆಗೆ ರಾಜೀನಾಮೆ ನೀಡಿ ಸುಭಾಷ ಚಂದ್ರ ರಾಠೊಡ ಜೆಡಿಎಸ್‌ ಅಭ್ಯರ್ಥಿಯಾಗಿದ್ದಾರೆ. ಸರಳ ರೀತಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಲಿಂಗಾಯತ ಹಾಗೂ ಕೋಲಿ ಸಮಾಜ ದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪರಿಶಿಷ್ಟ ಜಾತಿ ಮತಗಳು ಸಹ ಗಮ ನಾರ್ಹವಾಗಿದೆ. ಬಿಜೆಪಿ-ಕಾಂಗ್ರೆಸ್‌ನ ಸಮಬಲ ಹೋರಾಟ ನಡೆದಿದೆ.

~ ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.