ಬಾಲಕನ ಬೆತ್ತಲು ಮಾಡಿ ಬಣ್ಣ ಹಾಕಿ ವಿಕೃತಿ: ಆರೋಪಿಯ ಬಂಧನ; ಆರಗ ಜ್ಞಾನೇಂದ್ರ
Team Udayavani, Mar 25, 2022, 2:05 PM IST
ವಿಧಾನಪರಿಷತ್ :ಬಸವನ ಬಾಗೇವಾಡಿ ತಾಲೂಕಿನಲ್ಲಿ, ಏಳು ವರ್ಷದ ಬಾಲಕನ ಮೇಲೆ ನಡೆದ ಅಮಾನುಷ ದೌರ್ಜನ್ಯ ಘಟನೆಯ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶುಕ್ರವಾರ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ಸದನದ, ಶೂನ್ಯ ವೇಳೆಯಲ್ಲಿ, ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್, ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾಮಾಜಿಕ ಜಾಲ ತಾಣ ದಲ್ಲಿ ಈ ಘಟನೆ ಕುರಿತು ಪ್ರಕಟವಾಗಿದೆ ಹಾಗೂ ಜಿಲ್ಲಾ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದರು.
ಪ್ರಕರಣದ ಬಗ್ಗೆ ತೀವ್ರ ನೋವಾಗಿದೆ, ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು. ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸಹ ಮಾತನಾಡಿ, ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದರು. ಸಭಾ ಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡ ಇಂಥ ಅಮಾನವೀಯ ಪ್ರಕರಣ ಗಳು ನಡೆಯಬಾರದು ಎಂದರು.
ವಡವಡಗಿ ಗ್ರಾಮದಲ್ಲಿ ಕೆಲವರನ್ನು ಅಶ್ಲೀಲವಾಗಿ ನಿಂದಿಸಿದ್ದ ಎಂದು ಅಪ್ರಾಪ್ತ ವಯಸ್ಕ ಬಾಲಕನೊಬ್ಬನನ್ನು ಬೆತ್ತಲೆ ಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಅಮಾನವೀಯ ಘಟನೆ ಬಸವಜನ್ಮಭೂಮಿ ಪರಿಸರದಲ್ಲಿ ನಡೆದಿತ್ತು. ಘಟನೆಯನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಇದೀಗ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.