![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 23, 2021, 8:58 PM IST
ಮಂಡ್ಯ: ಕೋವಿಡ್ ಸೋಂಕಿತ ರೋಗಿಗಳಿಗೆ ಅವಧಿ ಮೀರಿದ ಔಷಧಿ ನೀಡಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಕೆ.ಸುರೇಶ್‌ಗೌಡ ಕೊರೊನಾ ಹೆಸರಿನಲ್ಲಿ ಸರ್ಕಾರ ಜನರ ಹತ್ಯೆ ಮಾಡಲು ಹೊರಟಿದೆ ಎಂದು ಆರೋಪಿಸಿದರು.
ನಾಗಮಂಗಲ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್ ನಿಯಂತ್ರಿಸುವ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳ ತುರ್ತುಸಭೆ ನಡೆಸಿದ ಶಾಸಕರು, ಕೋವಿಡ್ ನಿಯಂತ್ರಿಸುವ ನೆಪದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದು ಕೊರೋನಾ ಸೋಂಕಿತ ರೋಗಿಗಳಿಗೆ ಅವಧಿ ಮುಗಿದಿರುವ ಔಷಧಿಗಳನ್ನು ನೀಡುವಂತೆ ಅನುಮತಿ ನೀಡಿರುವುದು ಖಂಡನೀಯ ಎಂದರು.
ರೆಮ್ಡಿಸಿವಿರ್ ಇಂಜೆಕ್ಷನ್‌ನ ಅವಧಿಯು ಜನವರಿಗೆ ಮುಗಿದು ಹೋಗಿದ್ದರೂ ಸಹ ಸೋಂಕಿತ ರೋಗಿಗಳಿಗೆ ಇದೇ ಇಂಜೆಕ್ಷನ್ ಉಪಯೋಗಿಸುವಂತೆ ಸರ್ಕಾರ ಆದೇಶ ನೀಡಿರುವುದು ನನಗೆ ಗಾಬರಿ ಹುಟ್ಟಿಸಿದೆ. ಅವಧಿ ಮುಗಿದಿರುವ ಔಷಧಿಯನ್ನು ರೋಗಿಗಳಿಗೆ ನೀಡುತ್ತಿರುವುದರಿಂದಲೇ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರ ಈ ರೀತಿಯಾದ ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ :ಅಕ್ರಮವಾಗಿ ರೆಮ್ ಡಿಸಿವಿಯರ್ ಇಂಜೆಕ್ಷನ್ ಮಾರಾಟ : ಸ್ಟಾಫ್ ನರ್ಸ್ ಸೇರಿ ಮೂವರ ಬಂಧನ
ಸರ್ಕಾರ ಆದೇಶ ನೀಡಿದಾಕ್ಷಣಕ್ಕೆ ಔಷಧಿಯ ಗುಣಮಟ್ಟ ಹೆಚ್ಚಾಗಲು ಸಾಧ್ಯವಿಲ್ಲ. ಹಾಗಾಗಿ ನನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ರೋಗಿಗಳಿಗೆ ಇಂಥ ಅವಧಿ ಮೀರಿದ ಇಂಜೆಕ್ಷನ್ ಬಳಸದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವಧಿ ಮುಗಿದಿರುವ ಯಾವುದೇ ಔಷಧಿ ಅಥವಾ ಇಂಜೆಕ್ಷನ್ ವಿಷಕ್ಕೆ ಸಮಾನ. ಅವುಗಳನ್ನು ರೋಗಿಗಳಿಗೆ ನೀಡುವುದಾದರೂ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಶಾಸಕರು, ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟದ ಜತೆಗೆ ರಾಜ್ಯಪಾಲರು ಮತ್ತು ರಾಷ್ಟçಪತಿಗಳಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ತಹಶೀಲ್ದಾರ್ ಕುಂಞ ಅಹಮ್ಮದ್, ತಾಪಂ ಇಒ ಸತೀಶ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ್, ವೃತ್ತ ನಿರೀಕ್ಷಕ ಸುಧಾಕರ್, ಪುರಸಭೆ ಮುಖ್ಯಾಧಿಕಾರಿ ಮಹದೇವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಗದೀಶ್, ಬೆಳ್ಳೂರು ಪಪಂ ಮುಖ್ಯಾಧಿಕಾರಿ ಮಂಜುನಾಥ್ ಸೇರಿದಂತೆ ಮತ್ತಿತರರಿದ್ದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.