“ಕೈ” ಬೆಂಬಲಿಸುವವರೇ IT ಟಾರ್ಗೆಟ್: ಡಿ.ಕೆ. ಶಿವಕುಮಾರ್
Team Udayavani, Apr 20, 2023, 7:28 AM IST
ಬೆಂಗಳೂರು: “ಯಾರೆಲ್ಲ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೋ, ಅಂತಹವರ ಮನೆಗಳ ಮೇಲೆ ಐಟಿ ಮತ್ತು ಇಡಿ ದಾಳಿ ಆಗುತ್ತಿವೆ. ಆದರೆ, ಇದಾವುದಕ್ಕೂ ಬಗ್ಗುವ ಮಾತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಡಕ್ ಆಗಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿರುವವರನ್ನು ಗುರಿಯಾಗಿಟ್ಟು ದಾಳಿ ನಡೆಸಲಾಗುತ್ತಿದೆ. ಮಂಗಳವಾರವೂ ಕೆಲವರು ನನ್ನ ಮನೆಗೆ ಬಂದಿದ್ದರು. ಐಟಿ ಅಧಿಕಾರಿಗಳು, “ನೀನು ಭಾರತ ಜೋಡೋ ಯಾತ್ರೆಗೆ ಕೋಟಿ ಗಟ್ಟಲೆ ಹಣ ನೀಡಿದ್ದೀಯಾ ಎಂದು ಹೆದರಿಸುತ್ತಿರುವುದಾಗಿ” ಅಲವತ್ತುಕೊಂಡರು. ಅವರು ಎಷ್ಟಾದರೂ ದಾಳಿ ಮಾಡಿ ಬೆದರಿಕೆ ಹಾಕಲಿ, ಕಾಂಗ್ರೆಸ್ ರಾಜ್ಯದ ಜನರಿಗೆ ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಉತ್ತಮ ಆಡಳಿತ ನೀಡಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲಿಂಗಾಯತ ನಾಯಕರು ಯಡಿಯೂರಪ್ಪ ಅವರ ನಿವಾಸದಲ್ಲಿ ಸಭೆ ನಡೆಸುವ ಬಗ್ಗೆ ಕೇಳಿದಾಗ, “ಬಿಜೆಪಿ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಮಾಡಿ ಬಳಿಕ ಅವರಿಂದ ಅಧಿಕಾರ ಕಸಿದುಕೊಂಡಿತು. ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹೀಗಾಗಿ ಲಿಂಗಾಯತ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.