ಕಲಬುರಗಿ: ಅಂಗಡಿಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ಸೆರೆ
Team Udayavani, Jan 20, 2022, 3:00 PM IST
ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಇಂದು ಗುರುವಾರ ಬೆಳಗಿನ ಜಾವ ಕಳ್ಳರು ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚಿಂಚೋಳಿ ಮತ್ತು ತಾಂತ್ರಿಕ ಮುಖ್ಯರಸ್ತೆಯಲ್ಲಿರುವ ಎಂಆರ್ ಎಫ್ ಟೈರ್ಸ್ ಮತ್ತು ಮಾನಸ ಸಿಮೆಂಟ್ ಅಂಗಡಿಗೆ ನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ಅನ್ನು ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಕಂಪನಿಯ ಅಂಗಡಿಗೆ ನುಗ್ಗಿದ ಕಳ್ಳರು ಶೆಟರ್ ಕೀಲಿ ಮುರಿದು ಒಳಗೆ ನುಗ್ಗಿದ ಕಳ್ಳರು ಟೈರ್ ಮತ್ತು ಟ್ಯೂಬುಗಳನ್ನು ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪಿಎಸ್ ಐ ಮಂಜುನಾಥ್ ರೆಡ್ಡಿ ಶ್ವಾನದಳದೊಂದಿಗೆ ಭೇಟಿ ನೀಡಿ ಕಳ್ಳರ ಪತ್ತೆಗಾಗಿ ಶೋಧನಾ ಕಾರ್ಯ ನಡೆಸುತ್ತಿದ್ದಾರೆ.
ಚಿಂಚೋಳಿ ಪಟ್ಟಣದಲ್ಲಿ ಇತ್ತೀಚೆಗೆ ಕಳ್ಳರ ಹಾವಳಿ ಮಿತಿ ಮೀರಿದ್ದು ಸಾರ್ವಜನಿಕರು ಆತಂಕವನ್ನುಂಟು ಮಾಡಿದೆ. ಸಿಸಿಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯವನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಲು ಪೊಲೀಸರು ಶೋಧನಾ ಕಾರ್ಯ ಚುರುಕುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.