ಡಿಸೆಂಬರ್ 31ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ: ನಿಯಮ ಉಲ್ಲಂಘಿಸಿದರೆ ಕ್ರಮ
Team Udayavani, Dec 28, 2020, 9:24 PM IST
ಬೆಂಗಳೂರು : ರಾಜ್ಯದಲ್ಲಿ ರೂಪಾಂತರಗೊಂಡ ವೈರಸ್ ನ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 31ರಿಂದ ಜನವರಿ 1ರ ಬೆಳಿಗ್ಗೆ 6ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ನಗರದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ತಡೆ ಹಾಕಲಾಗಿದೆ. ಹೊಸ ವರ್ಷಾಚರಣೆಗೆ ಕೆಲವೊಂದು ಮಾರ್ಗ ಸೂಚಿಗಳನ್ನು ಜಾರಿಗೊಳಿಸಿದ್ದು ಬೆಂಗಳೂರು ನಗರ ವಾಸಿಗಳು ಪಾಲಿಸಬೇಕಾಗಿದೆ ತಪ್ಪಿದಲ್ಲಿ ಕ್ರಮ ಜರಗಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.
ಮಾರ್ಗಸೂಚಿಯಲ್ಲೇನಿದೆ :
1. ಐದಕ್ಕಿಂತ ಹೆಚ್ಚು ಮಂದಿ ಸೇರಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ನಡೆಸುವುದನ್ನು ನಿಷೇಧಿಸಲಾಗಿದೆ.
2.ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ.
3.ಪಬ್, ಬಾರ್, ಹೋಟೆಲ್ ಗಳು ಸಂಜೆ ೬ ರ ಬಳಿಕ ಬಂದ್ ಆಗಲಿವೆ ಅಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇಲ್ಲ.
4.ಮನೆಗಳಲ್ಲಿ ಸಂಭ್ರಮಾಚರಣೆಗೆ ಅವಕಾಶ ಇರಲಿದೆ ಆದರೆ ಮ್ಯೂಸಿಕ್, ಡಿಜೆ ಗಳಿಗೆ ಅವಕಾಶ ಇಲ್ಲ.
ನಗರದಾದ್ಯಂತ ಪೊಲೀಸ್ ಸರ್ಪಗಾವಲಿದ್ದು ನಿಯಮ ಉಲ್ಲಘಿಸಿದಲ್ಲಿ ಕಠಿಣ ಕ್ರಮ ಜರಗಿಸಲಾಗುವುದು.
ಬೆಂಗಳೂರಿನಲ್ಲಿ ನಾಕಾಬಂದಿ ಇರಲಿದ್ದು, ಭದ್ರತೆಗಾಗಿ 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ಕಮಲ್ಪಂತ್ ತಿಳಿಸಿದರು.
ನಗರದ ಎಂಜಿ ರಸ್ತೆ,ಚರ್ಚ್ಸ್ಟ್ರೀಟ್, ಕಮರ್ಷಿಯಲ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗುವುದು, ಅಲ್ಲದೆ ಈ ಏರಿಯಾಗಳಲ್ಲಿ ಕೂಪನ್ ಬುಕ್ಕಿಂಗ್ ಕಡ್ಡಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.