ಕಣ-ಚಿತ್ರಣ: ಯಾರಾಗುತ್ತಾರೆ ಪುಲಕೇಶಿನಗರ ಕ್ಷೇತ್ರದ “ಪುಲಿಕೇಶಿ’?

Team Udayavani, Apr 30, 2023, 5:56 AM IST

PULAKESHI NAGARA

ಬೆಂಗಳೂರು: ವಿಧಾನಸಭೆ ಚುನಾವಣೆ ಟಿಕೆಟ್‌ ಹಂಚಿಕೆಗೆ ಮುನ್ನವೇ ರಾಜ್ಯದ ಗಮನ ಸೆಳೆದಿದ್ದು ರಾಜಧಾನಿಯ “ಮಿನಿ ಇಂಡಿಯಾ’ ಖ್ಯಾತಿಯ ಪುಲಕೇಶಿನಗರ ಕ್ಷೇತ್ರ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ರಾಜ್ಯದಲ್ಲೇ ಅತೀ ಹೆಚ್ಚು 81,826 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ ಅಖಂಡ ಶ್ರೀನಿವಾಸಮೂರ್ತಿಗೆ ಡಿಜೆ ಹಳ್ಳಿ ಗಲಭೆ ಪ್ರಕರಣದಿಂದಾಗಿ ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದೆ. ಹೀಗಾಗಿ ಬಿಎಸ್‌ಪಿ ಸೇರ್ಪಡೆಯಾಗಿ ಅಖಾಡಕ್ಕಿಳಿದಿದ್ದಾರೆ.

ದೇವನಹಳ್ಳಿ ಕ್ಷೇತ್ರದಲ್ಲಿ ಸ್ಪರ್ಧೆಗೆ ವರ್ಷದಿಂದ ತಯಾರಿ ನಡೆಸಿದ್ದ ಎ.ಸಿ.ಶ್ರೀನಿವಾಸ್‌ ಇಲ್ಲಿ ಕಾಂಗ್ರೆಸ್‌ನ ಅಚಾನಕ್‌ ಅಭ್ಯರ್ಥಿಯಾಗಿದ್ದಾರೆ. ಇದು ಇವರಿಗೆ ಬಯಸದೇ ಬಂದ “ಭಾಗ್ಯ’ದಂತಾಗಿದೆ. ಇಬ್ಬರೂ ಇದೀಗ ಗೆಲುವಿಗಾಗಿ ಪ್ರಬಲ ಹೋರಾಟ ನಡೆಸಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿಗೆ ಪ್ರತಿಷ್ಠೆ, ಎ.ಸಿ.ಶ್ರೀನಿವಾಸ್‌ಗೂ ಗೆಲ್ಲುವ ಛಲ.
ಅಖಂಡ ಶ್ರೀನಿವಾಸಮೂರ್ತಿ ಕ್ಷೇತ್ರದಲ್ಲಿ ತನ್ನದೇ ಆದ ಹಿಡಿತ ಹಾಗೂ ಮತದಾರರ ಸಮೂಹ ಹೊಂದಿದ್ದು, ಎರಡು ಬಾರಿಯ ಅಭಿವೃದ್ಧಿ ಕಾರ್ಯಗಳು ತಮ್ಮ ಕೈ ಹಿಡಿಯುವ ವಿಶ್ವಾಸದಲ್ಲಿದ್ದಾರೆ. ಮೇಲ್ನೋಟಕ್ಕೆ ನೇರ ಪೈಪೋಟಿಯಿದೆ. ಆದರೂ ಇಲ್ಲಿನ ಮತದಾರರು ಈ ಬಾರಿ “ಗುಪ್ತಗಾಮಿನಿ’ಯಂತಾಗಿದ್ದು ಅವರ ನಡೆ ಕುತೂಹಲ ಮೂಡಿಸಿದೆ.
ಜೆಡಿಎಸ್‌ನಿಂದ ಅನುರಾಧಾ, ಬಿಜೆಪಿಯಿಂದ ಮುರುಳಿ, ಆಮ್‌ ಆದ್ಮಿ ಪಾರ್ಟಿಯಿಂದ ಸುರೇಶ್‌ ರಾಥೋಡ್‌, ಎಸ್‌ಡಿಪಿಐನಿಂದ ಭಾಸ್ಕರ್‌ ಪ್ರಸಾದ್‌ ಅದೃಷ್ಟ ಪರೀಕ್ಷೆಗೆ ಇಳಿದಿದ್ದು “ಬಂಡಾಯ”ದ ಲಾಭದ ನಿರೀಕ್ಷೆಯಲ್ಲಿದ್ದಾರೆ.

ಕ್ಷೇತ್ರದಲ್ಲಿ ತಮಿಳು, ಮುಸ್ಲಿಂ, ಕ್ರಿಶ್ಚಿಯನ್‌, ದಲಿತ ಸಮುದಾಯದ ಮತಗಳು ನಿರ್ಣಾಯಕ. ಅಖಂಡ ಶ್ರೀನಿವಾಸಮೂರ್ತಿ ಪರ ಮುಸ್ಲಿಂ ಸಮುದಾಯದಲ್ಲಿ ಸ್ವಲ್ಪ ಮಟ್ಟಿನ ಆಕ್ರೋಶ ಇದೆ ಎಂಬ ಮಾತಿದೆಯಾದರೂ ಮತ್ತೂಂದು ವರ್ಗದ ಅನುಕಂಪವೂ ಇರುವುದು ಕಂಡು ಬರುತ್ತದೆ. ಮೂಲತಃ ಈ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದರೂ ಜೆಡಿಎಸ್‌ನಿಂದ ಸ್ಪರ್ಧಿಸಿ ಅದನ್ನು ಛಿದ್ರಗೊಳಿಸಿದ್ದು ಇದೇ ಅಖಂಡ ಶ್ರೀನಿವಾಸಮೂರ್ತಿ.

ಕ್ಷೇತ್ರ ಪುನರ್‌ ವಿಂಗಡಣೆ ಅನಂತರ ಎದುರಾದ 2008ರ ಚುನಾವಣೆಯಲ್ಲಿ ಯಲಹಂಕ ಪ್ರತಿನಿಧಿಸುತ್ತಿದ್ದ ಪ್ರಸನ್ನಕುಮಾರ್‌ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯಗಳಿಸಿ ದ್ದರು. 2013ರಲ್ಲಿ ಪಾಲಿಕೆಯ ಸದಸ್ಯರ ವಿರೋಧ ಕಟ್ಟಿಕೊಂಡಿದ್ದ ಪ್ರಸನ್ನಕುಮಾರ್‌ ಸೋಲು ಅನುಭವಿಸಿದರು. ಆಗ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಅಖಂಡ ಶ್ರೀನಿವಾಸಮೂರ್ತಿಗೆ ಪಾಲಿಕೆ ಸದಸ್ಯರೆಲ್ಲ ಪರೋಕ್ಷವಾಗಿ ಬೆಂಬಲಿಸಿದ್ದರು.

ಅನಂತರ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಮತದಾನ ಮಾಡಿದ್ದಕ್ಕೆ ಜೆಡಿಎಸ್‌ನಿಂದ ಉಚ್ಛಾಟನೆಗೊಂಡಿದ್ದ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್‌ ಸೇರಿ 2018 ರಲ್ಲಿ ಟಿಕೆಟ್‌ ಪಡೆದರು. ಆಗ ಟಿಕೆಟ್‌ ಕೈ ತಪ್ಪಿದ್ದರಿಂದ ಪ್ರಸನ್ನಕುಮಾರ್‌ ಕೊನೇ ಗಳಿಗೆಯಲ್ಲಿ ಜೆಡಿಎಸ್‌ ಸೇರಿ ಸ್ಪರ್ಧೆ ಮಾಡಿದ್ದರಾದರೂ ಅಖಂಡ ಗೆದ್ದು ಪ್ರಸನ್ನ ಸೋಲು ಅನುಭವಿಸಿದ್ದರು.

ತಿರುಗಿಬಿದ್ದ ಪಾಲಿಕೆ ಸದಸ್ಯರು
ಒಂದು ಕಾಲದಲ್ಲಿ ಪ್ರಸನ್ನಕುಮಾರ್‌ಗೆ ತಿರುಗಿಬಿದ್ದಿದ್ದ ಪಾಲಿಕೆ ಸದಸ್ಯರೇ ಇದೀಗ ಮಾಜಿಗಳಾಗಿ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ತಿರುಗಿಬಿದ್ದಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿಗೆ ಶತಾಯಗತಾಯ ಟಿಕೆಟ್‌ ತಪ್ಪಿಸಲು ಹೋರಾಟ ಮಾಡಿ ಯಶಸ್ವಿಯೂ ಆಗಿದ್ದಾರೆ.ಅಖಂಡ ಶ್ರೀನಿವಾಸಮೂರ್ತಿ ಗಾಡ್‌ ಫಾದರ್‌ ಆಗಿದ್ದ ಮಾಜಿ ಸಚಿವ ಜಮೀರ್‌ ಅಹಮದ್‌ ಅವರು ನಾನು ಪಕ್ಷದ ಅಧಿಕೃತ ಅಭ್ಯರ್ಥಿ ಪರ ಎಂದು ಹೇಳಿದ್ದಾರೆ. ಡಿಜೆ ಹಳ್ಳಿ ಗಲಭೆ ಇಡೀ ಕ್ಷೇತ್ರದ ರಾಜಕೀಯ ಚಿತ್ರಣ ಬದಲಿಸಿರುವುದಂತೂ ನಿಜ. ಒಟ್ಟಾರೆ, ಕ್ಷೇತ್ರದಲ್ಲಿ ಜಿದ್ದಾಜಿದ್ದು ಏರ್ಪಟ್ಟಿದ್ದು, ಮತದಾರ ಯಾರ ಪರ ಒಲವು ತೋರುತ್ತಾನೆ ಕಾದು ನೋಡಬೇಕಾಗಿದೆ.

~ ಎಸ್‌.ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.