ರಾಜ್ಯ ಸರಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಕನ್ನಡ ಕಡ್ಡಾಯ! ಸುತ್ತೋಲೆ ಹೊರಡಿಸಿದ ಸರಕಾರ
Team Udayavani, Nov 27, 2020, 10:52 PM IST
ಬೆಂಗಳೂರು: 2020-21ನೇ ವರ್ಷವನ್ನು ಕನ್ನಡ ಕಾಯಕ ವರ್ಷಾಚರಣೆ ಹಿನ್ನೆಲೆಯಲ್ಲಿ ಸರಕಾರದ ಎಲ್ಲ ಇಲಾಖೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ವ್ಯವಹರಿಸುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.
ತಂತ್ರಾಂಶದಲ್ಲಿ ಕನ್ನಡವನ್ನು ಯಶಸ್ವಿಯಾಗಿ ಬಳಸಲು ಕಾರ್ಯಕ್ರಮ ರೂಪಿಸುವುದು. ಇಲಾಖೆಗಳು ರೂಪಿಸುವ ನೀತಿ, ಕರಡು ಪ್ರತಿಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಿದ್ಧಪಡಿಸಿ ಹಾಗೂ ಅನುಮೋದಿತ ಅಂತಿಮ ಪ್ರತಿಯನ್ನು ಕನ್ನಡದಲ್ಲಿ ಸಿದ್ಧಪಡಿಸುವುದು. ತಂತ್ರಾಂಶ ವ್ಯವಸ್ಥೆ ಮೂಲಕ ಅರ್ಜಿದಾರರಿಗೆ ಎಸ್‌ಎಂಎಸ್ ಹಾಗೂ ಇ-ಮೇಲ್‌ಗಳನ್ನು ಕನ್ನಡದಲ್ಲಿ ಕಳುಹಿಸುವುದು. ಕರ್ನಾಟಕದ ನಗರ ಪಟ್ಟಣಗಳ ಹೆಸರುಗಳನ್ನು ಕನ್ನಡದಲ್ಲಿಯೇ ಬರೆಯುವುದು, ಮೈಲುಗಲ್ಲುಗಳ ಮೇಲೆ ಕನ್ನಡ ಅಂಕಿ ಮತ್ತು ಅಕ್ಷರ ಬಳಕೆ, ಎಲ್ಲ ಇಲಾಖೆಗಳ ಜಾಲತಾಣಗಳ ಪ್ರಧಾನ ಹಾಗೂ ಒಳ ಪುಟಗಳು, ಸಾಮಾಜಿಕ ಜಾಲತಾಣದಲ್ಲೂ ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡುವುದು. ಇಲಾಖೆ ಟಿಪ್ಪಣಿಗಳು, ಸಚಿವ ಸಂಪುಟದ ಟಿಪ್ಪಣಿ, ಕಾಯ್ದೆ ಕಾನೂನು ಆದೇಶಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ಬಳಕೆ ಮಾಡುವುದು. ಕರ್ನಾಟಕದಲ್ಲಿ ಮಾರಾಟವಾಗುವ ಉತ್ಪನ್ನಗಳ ಪ್ಯಾಕೆಟ್ ಮೇಲೆ ಕನ್ನಡ ಬಳಕೆ ಮಾಡಲು ಆಗ್ರಹಿಸುವುದು. ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನರ್ಸಿಂಗ್ ಹೋಂಗಳು ಸಾರ್ವಜನಿಕ ಮಾಹಿತಿಗಳನ್ನು ಕನ್ನಡದಲ್ಲಿಯೇ ಒದಗಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಕಲ್ಲಿದ್ದಲು ಹೊಗೆಯಿಂದ ಉಸಿರುಗಟ್ಟಿ ಯುವತಿ ಸಾವು, ಮೂವರು ಅಸ್ವಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.