![Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ](https://www.udayavani.com/wp-content/uploads/2024/12/ban-2-415x277.jpg)
ಕಾಪು ಪೊಲೀಸರ ಕಾರ್ಯಾಚರಣೆ: ಇಬ್ಬರು ಅಂತರ್‌ಜಿಲ್ಲಾ ಸರಗಳ್ಳರ ಸೆರೆ
Team Udayavani, Jun 21, 2023, 5:46 AM IST
![police siren](https://www.udayavani.com/wp-content/uploads/2023/06/police-siren-10-620x372.jpg)
ಕಾಪು: ಕಳೆದ ಸೋಮವಾರ (ಜೂ. 12) ಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಸೋಮವಾರ ಪಡುಬಿದ್ರಿಯಲ್ಲಿ ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಮಚ್ಚೀಂದ್ರ ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಿ.ಸಿ.ರೋಡ್ ಬಂಟ್ವಾಳ ನಿವಾಸಿ ಮಹಮ್ಮದ್ ರಫೀಕ್ (33) ಮತ್ತು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ತೌಸಿಫ್ ಸಾಧಿಕ್ (31) ನನ್ನು ಬಂಧಿಸಲಾಗಿದೆ. ಅವರಿಂದ ಕೃತ್ಯಕ್ಕೆ ಬಳಸಿದ ಎವೆಂಜರ್ ಬೈಕ್, 3 ಮೊಬೈಲ್, 2,500 ರೂ. ನಗದು, ಬಟನ್ ಇದ್ದ ಎರಡು ಚೂರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಬೆಂಗಳೂರಿನಲ್ಲಿ ಸುಲಿಗೆ
ಬಂಧಿತ ಆರೋಪಿಗಳು ಅಂತರ್ ಜಿಲ್ಲಾ ಸರಗಳ್ಳರಾಗಿದ್ದಾರೆ. ಆರೋಪಿಗಳು ನೀಡಿರುವ ಮಾಹಿತಿಯಂತೆ ಜೂ. 12ರಂದು ಕಾಪುವಿನಲ್ಲಿ ಕಳವುಗೈದ ಎರಡು ಚಿನ್ನದ ಸರ, ಬ್ರಹ್ಮಾವರದಲ್ಲಿ ಕಳವಾಗಿರುವ ಚಿನ್ನದ ಸರ, ಮೇ 7ರಂದು ಬೆಂಗಳೂರಿನ ಮಹಾಲಕ್ಷ್ಮೀಪುರಂನಲ್ಲಿ ಕಳವಾಗಿರುವ ಚಿನ್ನದ ಸರ, ಮೇ 27ರಂದು ಮಲ್ಲೇಶ್ವರಂನಲ್ಲಿ ಕಳವಾಗಿರುವ ಎರಡು ಎಳೆಯ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಒಂಟಿ ಮಹಿಳೆಯರೇ ಗುರಿ
ಆರೋಪಿ ರಫೀಕ್‌ಗೆ ಬೈಕ್ ಚಾಲನೆ ಗೊತ್ತಿಲ್ಲವಾಗಿದ್ದು ಒಂದೊಂದು ಪ್ರಕರಣಕ್ಕೆ ಒಬ್ಬೊಬ್ಬರನ್ನು ಬೈಕ್ ಸವಾರರನ್ನಾಗಿ ಬಳಸಿಕೊಳ್ಳುತ್ತಿದ್ದನು. ಜೂ. 12ರಂದು ಮಧ್ಯಾಹ್ನ 12.10ಕ್ಕೆ ಬ್ರಹ್ಮಾವರದಲ್ಲಿ ಮತ್ತು 2.15ರ ವೇಳೆಗೆ ಕಾಪುವಿನಲ್ಲಿ ಸರಗಳ್ಳತನ ನಡೆಸಿ ಪರಾರಿಯಾಗಿದ್ದರು. ಆದರೆ ಕಾಪು ಪೊಲೀಸರು ನಡೆಸಿದ ಕ್ಷಿಪ್ರಗತಿಯ ಕಾರ್ಯಾಚರಣೆ, ವಿವಿಧೆಡೆಯ ಸಿಸಿ ಕೆಮರಾ ಪೂಟೇಜ್‌ಗಳು, ಟೋಲ್‌ಗೇಟ್ ಕೆಮರಾಗಳ ಸಹಕಾರದೊಂದಿಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ.
ನಗದು, ಪ್ರಶಂಸಾ ಪತ್ರ
ಕಾರ್ಕಳ ಮತ್ತು ಉಡುಪಿ ಪೊಲೀಸ್ ಉಪಾಧೀಕ್ಷಕರು, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರ ನೇತೃತ್ವದಲ್ಲಿ ಹಿರಿಯಡಕ ಎಸ್‌ಐ ಮಂಜುನಾಥ ಮರಬಂದ ಹಾಗೂ ಅಪರಾಧ ವಿಭಾಗದ ಸಿಬಂದಿಗಳಾದ ಪ್ರವೀಣ್ ಕುಮಾರ್, ರಾಜೇಶ್, ನಾರಾಯಣ್, ಸಂದೇಶ್,ಆರ್‌ಡಿಸಿ ವಿಭಾಗದ ದಿನೇಶ್ ಮತ್ತು ನಿತಿನ್ ಅವರ ಕಾರ್ಯಾಚರಣೆಯಿಂದಾಗಿ ಸರಗಳ್ಳರ ಬಂಧನವಾಗಿದ್ದು ಪೊಲೀಸರಿಗೆ ನಗದು ಮತ್ತು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು ಎಂದರು.
ಜೈಲಿನಲ್ಲಿ 8 ವರ್ಷ
ಬಂದಿತರ ಪೈಕಿ ಮಹಮ್ಮದ್ ರಫೀಕ್‌ನ ವಿರುದ್ಧ ಬೆಂಗಳೂರು, ಮಂಗಳೂರು ಕಮಿಷನರೇಟ್ ವ್ಯಾಪ್ತಿ, ದ.ಕ. ಮತ್ತು ಉಡುಪಿ ಜಿಲ್ಲೆಯ 32 ಠಾಣೆಗಳಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿದ್ದು ಬೆಂಗಳೂರಿನಲ್ಲಿ ಒಮ್ಮೆ ಆರು ವರ್ಷ ಹಾಗೂ ಮತ್ತೂಮ್ಮೆ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. ಮಾರ್ಚ್ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದು ಮತ್ತೆ ಅದೇ ಮಾದರಿಯ ಕಳ್ಳತನ ನಡೆಸಿ ಪೊಲೀಸರ ಸೆರೆಯಾಗಿದ್ದಾನೆ. ಮತ್ತೋರ್ವ ಆರೋಪಿ ತೌಸಿಫ್ ಸಾಧಿಕ್ ವಿರುದ್ಧ ಬೆಂಗಳೂರು, ಮಂಗಳೂರು ಮತ್ತು ಮೂಲ್ಕಿ ಠಾಣೆಗಳಲ್ಲಿ ನಾಲ್ಕು ಸರಗಳ್ಳತನ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
![Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ](https://www.udayavani.com/wp-content/uploads/2024/12/ban-2-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.