Live: ಕರ್ನಾಟಕ ಬಜೆಟ್ 2023-2024: ಬಜೆಟ್ ಮಂಡನೆ ಆರಂಭ-ರೈತರಿಗೆ ಭರಪೂರ ಕೊಡುಗೆ
ಬಜೆಟ್ ಮಂಡನೆ ಆರಂಭಿಸಿದ್ದು, ಬಜೆಟ್ ನ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ
Team Udayavani, Feb 17, 2023, 10:16 AM IST
ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-2024ನೇ ಸಾಲಿನ ಬಜೆಟ್ ಅನ್ನು ಶುಕ್ರವಾರ (ಫೆ-17) ವಿಧಾನಸಭೆಯಲ್ಲಿ ಮಂಡಿಸಿದ್ದು, ಇದಕ್ಕೂ ಮುನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ಪಡೆದಿದ್ದರು.
ಇದನ್ನೂ ಓದಿ:ಗಂಗಾವತಿ: ನಗರಸಭೆ ಉಪಾಧ್ಯಕ್ಷೆ ಸುಧಾ ಸೋಮನಾಥ ಸದಸ್ಯತ್ವ ಅನರ್ಹತೆಗೆ ತಡೆ ನೀಡಿದ ಹೈಕೋರ್ಟ್
ಕಳೆದ ವರ್ಷ 2022ರ ಮಾರ್ಚ್ ನಲ್ಲಿ ಸಿಎಂ ಬೊಮ್ಮಾಯಿ ಅವರು 2,61,977 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿಯ ಬಜೆಟ್ ಗಾತ್ರ 3ಲಕ್ಷ ಕೋಟಿ ರೂಪಾಯಿ ತಲುಪುವ ಸಾಧ್ಯತೆ ಇದೆ.
ಬೆಳಗ್ಗೆ 10-15ಕ್ಕೆ ಸಿಎಂ ಬೊಮ್ಮಾಯಿ ಅವರು ಬಜೆಟ್ ಮಂಡನೆ ಆರಂಭಿಸಿದ್ದು, ಬಜೆಟ್ ನ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ…
*ವಿಧಾನಸೌಧದದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆ ಮುಕ್ತಾಯ. ಇದು ಜನಸ್ನೇಹಿ ಬಜೆಟ್ ಎಂದು ಬಣ್ಣಿಸಿದ ಸಿಎಂ ಬೊಮ್ಮಾಯಿ.
*ಸಿಎಂ ಕಚೇರಿಯಿಂದ ವಿಧಾನಸಭೆಗೆ ಆಗಮಿಸಿದ ಬೊಮ್ಮಾಯಿ. ವಿಧಾನಸೌಧಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ.
*2ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ. ಈ ಬಜೆಟ್ ಉತ್ತಮ ಬದುಕಿನ ಭರವಸೆ. ಈ ಬಜೆಟ್ ಮುಂದಿನ 25 ವರ್ಷದ ದೂರದೃಷ್ಟಿ ಹೊಂದಿದೆ.
ಕಿವಿ ಮೇಲೆ ಹೂ ಇಟ್ಟುಕೊಂಡು ಬಂದಿದ್ದ ಸಿದ್ದರಾಮಯ್ಯನವರು ಗಮನಿಸಿದ ಸಿಎಂ ಬೊಮ್ಮಾಯಿ ಅವರು ಕಾಂಗ್ರೆಸ್ ಜನರ ಕಿವಿ ಮೇಲೆ ಹೂ ಇಟ್ಟಿದೆ ಎಂದು ಟಾಂಗ್ ನೀಡಿದರು. ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ನೀವು ಇಡೀ ಕರ್ನಾಟಕದ 7 ಕೋಟಿ ಜನರ ಕಿವಿ ಮೇಲೆ ಹೂ ಇಡಲು ಹೊರಟಿದ್ದೀರಿ..ಎಂದಾಗ ಸದನದಲ್ಲಿ ಆಡಳಿತಾರೂಢ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಕ್ಸಮರ..ಕೋಲಾಹಲ ನಡೆಯಿತು. ಏತನ್ಮಧ್ಯೆ ಸ್ಪೀಕರ್ ಬಜೆಟ್ ಮಂಡನೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡರು.
*ಬಜೆಟ್ ನಲ್ಲಿ ರೈತರಿಗೆ ಭರಪೂರ ಕೊಡುಗೆ. ಈ ಬಾರಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂಪಾಯಿ ಸಾಲ ಘೋಷಣೆ. 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ 5 ಲಕ್ಷ ರೂ. ಸಾಲ ನೀಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.