![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 16, 2024, 5:34 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾ (ಫೆ.16) ವಿಧಾನಸಭೆಯಲ್ಲಿ ಮಂಡಿಸಿದ್ದ 2024-25ನೇ ಸಾಲಿನ ಮುಂಗಡ ಪತ್ರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಪ್ರಗತಿ ಪಥ ಯೋಜನೆ, ಕಲ್ಯಾಣ ಪಥ ಸೇರಿದಂತೆ ಹಲವು ಘೋಷಣೆಗಳ ವಿವರ ಇಲ್ಲಿದೆ.
ಇದನ್ನೂ ಓದಿ:
ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲದ ಅಭಿವೃದ್ಧಿಗಾಗಿ ಸುಮಾರು 5,200 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಗತಿ ಪಥ ಯೋಜನೆ ಪ್ರಾರಂಭಿಸುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಈ ಯೋಜನೆಯಲ್ಲಿ 189 ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 50 ಕಿ.ಮೀ ಉದ್ದದ ರಸ್ತೆಗಳಂತೆ ಒಟ್ಟು 9, 450 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿಪಡಿಸುವುದಾಗಿ ತಿಳಿಸಿದೆ.
ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮಾದರಿಯಲ್ಲಿ ಒಟ್ಟು 1,150 ಕಿ.ಮೀ. ರಸ್ತೆಗಳನ್ನು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಾಗಿ ಬಜೆಟ್ ನಲ್ಲಿ ಘೋಷಿಸಿದೆ.
2024-25ನೇ ಸಾಲಿನಲ್ಲಿ ನರೇಗಾ ಯೋಜನೆ ಅನುಷ್ಠಾನದಡಿ 16 ಕೋಟಿ ಮಾನವ ದಿನಗಳನ್ನು ಸೃಜಿಸಿ, ಸುಮಾರು 30 ಲಕ್ಷ ಕುಟುಂಬಗಳಿಗೆ ಉದ್ಯೋಗ ನೀಡುವ ಗುರಿ ಹೊಂದಿರುವುದಾಗಿ ಬಜೆಟ್ ನಲ್ಲಿ ತಿಳಿಸಿದೆ. ಜಲಾನಯನ ಇಲಾಖೆಯ ಸಹಭಾಗಿತ್ವದಲ್ಲಿ 5,000 ಎಕರೆ ಸವಳು-ಜವಳು ಭೂಮಿ ಸುಧಾರಿಸುವ ಮತ್ತು ಪ್ರತಿ ತಾಲೂಕಿಗೆ ಕನಿಷ್ಠ 2ರಂತೆ ಬೂದು ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.
ಅರಿವು ಕೇಂದ್ರಗಳನ್ನು ಬಲಪಡಿಸುವ ದೃಷ್ಠಿಯಿಂದ 132 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮತ್ತು ಪುಸ್ತಕಗಳು, ಡಿಜಿಟಲ್ ಉಪಕರಣಗಳು ಹಾಗೂ ವಿಕಲಚೇತನ ಸ್ನೇಹಿ ಉಪಕರಣ ಖರೀದಿಗೆ ಆದ್ಯತೆ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿದೆ.
ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ:
ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆ ಹೆಚ್ಚಿಸಲು 5 ಉಪಕ್ರಮ ಕೈಗೊಂಡಿರುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆ ಕೌನ್ಸಿಲಿಂಗ್ ಮೂಲಕ ಮಾಡುವುದಾಗಿ ತಿಳಿಸಿದೆ. ಗ್ರಾಮ ಪಂಚಾಯಿತಿಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿ ಸ್ವತ್ತುಗಳ Asset Monetisation ನೀತಿ ಜಾರಿಗೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಪ್ರಾರಂಭ. ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಈ ವರ್ಷದಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪ್ರಾಂಭಿಸುವುದಾಗಿ ಬಜೆಟ್ ನಲ್ಲಿ ಉಲ್ಲೇಖಿಸಲಾಗಿದೆ.
ಗ್ರಾಮ ಪಂಚಾಯಿತಿಗಳ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪ ನೇರ ಪ್ರಸಾರ. 50 ಗ್ರಾಮ ಪಂಚಾಯಿಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ 25 ಕೋಟಿ ರೂ. ವೆಚ್ಚದಲ್ಲಿ ಸೋಲಾರ್ ದೀಪ ಅಳವಡಿಕೆ, 200 ಗ್ರಾಮ ಪಂಚಾಯ್ತಿಗಳಲ್ಲಿ ಬೀದಿ ದೀಪಗಳ ವ್ಯವಸ್ಥಿತ ಮೀಟರಿಂಗ್ ಮಾಡುವುದಾಗಿ ಬಜೆಟ್ ನಲ್ಲಿ ತಿಳಿಸಿದೆ.
ಆರೈಕೆ ಉಪಶಮನ:
2024ನೇ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ಚಿಕಿತ್ಸೆಯನ್ನು ನಿರ್ವಹಿಸಲು ಆರೈಕೆ ಉಪಶನ ಕೇಂದ್ರ ಸ್ಥಾಪನೆ. ಪ್ರೇರಣಾ ಕಾರ್ಯಕ್ರಮದಡಿ ಸ್ವಸಹಾಯ ಗುಂಪುಗಳ ಮಹಿಳೆಯರು, ಗ್ರಾ.ಪಂ ಮಹಿಳಾ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದ ಮುಂಚೂಣಿ ಕಾರ್ಯಕರ್ತೆಯರಲ್ಲಿ Menstrual Cup ಬಳಕೆಗೆ ಪ್ರೋತ್ಸಾಹ. ಇದರ ಮೂಲಕ ಗ್ರಾಮದ ಇತರ ಮಹಿಳೆಯರನ್ನು ಬಳಕೆ ಮಾಡಲು ಪ್ರೇರೇಪಿಸಲಾಗುತ್ತದೆ ಎಂದು ಸಿಎಂ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿದ್ರಾರೆ
ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಲಕ್ಷ ರೂಪಾಯಿ ನೆರವಿನೊಂದಿಗೆ ಎಸ್. ಹೆಚ್ ಜಿಗಳ ಸಹಯೋಗಗದೊಂದಿಗೆ ಎಣ್ಣೆ ಗಾಣವನ್ನು ಸ್ಥಾಪಿಸುವುದಾಗಿ ಬಜೆಟ್ ನಲ್ಲಿ ಘೋಷಿಸಿದೆ.
ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರ್ಕಾರದ ಮಾನ್ಯತೆಯುಳ್ಳ ದಾಖಲೆಗಳನ್ನು ಡಿಜಿಲಾಕರ್ ಆಪ್ ನಲ್ಲಿ ಸುರಕ್ಷಿತವಾಗಿರಿಸುವ ಸಲುವಾಗಿ “ನನ್ನ ಗುರು ಅಭಿಯಾನ ದಡಿ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ,1000 ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳುವುದಾಗಿ ತಿಳಿಸಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.