ರಾಜ್ಯಕ್ಕೆ ಒಳ್ಳೆಯ ದಿನ ಬರಲಿದೆ: ಆಂಜನೇಯ ಸ್ವಾಮಿ ಪುತ್ಥಳಿ ಅನಾವರಣಗೊಳಿಸಿ ಸಿಎಂ
161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿಯ ಪುತ್ಥಳಿ
Team Udayavani, Apr 10, 2022, 5:06 PM IST
ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದನಗೆರೆಯಲ್ಲಿ ಬಿದನಗೆರೆ ಬಸವೇಶ್ವರ ಮಠದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿಯ ಪುತ್ಥಳಿಯನ್ನು ಭಾನುವಾರ ಅನಾವರಣಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಕ್ಕೆ ಒಳ್ಳೆಯ ದಿನ ಬರಲಿದೆ ಎಂದು ಹೇಳಿದ್ದಾರೆ.
ಈ ಪ್ರದೇಶದಲ್ಲಿ ರಾಮ ನವಮಿಯ ಶುಭ ಸಂದರ್ಭದಲ್ಲಿ ಅನೇಕ ಪವಿತ್ರ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಪ್ರದೇಶವು ದೊಡ್ಡ ಬೆಳವಣಿಗೆಗಳನ್ನು ಕಾಣಲಿದೆ ಎಂದು ಬೊಮ್ಮಾಯಿ ಹೇಳಿದರು.
“ಪಂಚಮುಖಿ ಆಂಜನೇಯ ಹನುಮಂತನ ವಿಶೇಷ ರೂಪವಾಗಿದ್ದು, ರಾಮಾಯಣದಲ್ಲಿ ಉಲ್ಲೇಖವಿದೆ. ಹನುಮಂತನು ಲೋಕಕಲ್ಯಾಣಕ್ಕಾಗಿ ಈ ರೂಪವನ್ನು ಪಡೆದನು. ಹನುಮಂತನ 161 ಅಡಿ ಎತ್ತರದ ಪ್ರತಿಮೆಯನ್ನು ಕರ್ನಾಟಕದಲ್ಲಿ ಪ್ರತಿಷ್ಠಾಪಿಸಬೇಕೆಂಬುದು ಅವರ ದಿವ್ಯ ಆಶಯವಾಗಿದೆ. ಶಿಲ್ಪಿಗಳು ಅದ್ಭುತವಾಗಿ ಕೆಲಸ ಮಾಡಿದ್ದಾರೆ’ ಎಂದು ಬೊಮ್ಮಾಯಿ ಹೇಳಿದರು.
ನಂಜಾವಧೂತ ಸ್ವಾಮೀಜಿ, ಹರಿಹರ ವೀರಶೈವ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಶ್ರೀ ಬಸವೇಶ್ವರ ಮಠದ ಧರ್ಮಾಧಿಕಾರಿ ಡಾ.ಧನಂಜಯ್ಯ ಗುರೂಜಿ, ಸಚಿವರು, ಶಾಸಕರು ಹಾಗೂ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇಂದು ಪವಿತ್ರ ಶ್ರೀ ರಾಮ ನವಮಿಯ ದಿನ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆ ಶ್ರೀ ಬಸವೇಶ್ವರ ಮಠದ ವತಿಯಿಂದ ನಿರ್ಮಿಸಿರುವ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದೆನು.
1/2 pic.twitter.com/7RuVjgh0je— Basavaraj S Bommai (@BSBommai) April 10, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.