ಗೋಹತ್ಯೆಗೆ 10 ವರ್ಷ ಜೈಲು 5ಲಕ್ಷ ದಂಡ ?
Team Udayavani, Dec 7, 2020, 6:20 AM IST
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಸರಕಾರ ಪ್ರಯತ್ನ ನಡೆಸಿದ್ದು, ತಿದ್ದುಪಡಿ ಕಾಯ್ದೆಯಲ್ಲಿ ಗೋಹತ್ಯೆ ಮಾಡುವವರಿಗೆ 10 ವರ್ಷ ಜೈಲು, 5 ಲಕ್ಷ ರೂ. ದಂಡ ವಿಧಿಸಲು ಮುಂದಾಗಿದೆ.
ರಾಜ್ಯದಲ್ಲಿ ಸದ್ಯ 1964ರ ಗೋ ಹತ್ಯೆ ನಿಷೇಧ ಮತ್ತು ಗೋಸಂರಕ್ಷಣ ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆಯ ಪ್ರಕಾರ ಅಕ್ರಮ ಗೋ ಹತ್ಯೆಗೆ 6 ತಿಂಗಳು ಜೈಲು ಮತ್ತು 1 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಡಿ 12 ವರ್ಷ ದೊಳಗಿನ ಗೋವುಗಳ ಹತ್ಯೆ ನಿಷೇಧಿಸಲಾಗಿದ್ದು, ವಯ ಸ್ಸಾ ದ, ನಿರುಪಯುಕ್ತ ಗೋವುಗಳ ಹತ್ಯೆಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
2010ರಲ್ಲಿ ಪ್ರಯತ್ನ
ಈಗಿರುವ ಗೋಹತ್ಯೆ ಕಾಯ್ದೆಗೆ 2010ರಲ್ಲಿ ಅಂದಿನ ಬಿಜೆಪಿ ಸರಕಾರ ತಿದ್ದುಪಡಿ ತಂದು ಕಠಿನ ನಿಯಮಗಳನ್ನು ರೂಪಿಸಿತ್ತು. ಗೋಹತ್ಯೆ ಮತ್ತು ಕಳ್ಳ ಸಾಗಣೆ ಮಾಡುವವರಿಗೆ 7 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲು ನಿರ್ಧರಿಸಿತ್ತು.
ಅಂದಿನ ತಿದ್ದುಪಡಿಯನ್ನು ರಾಜ್ಯಪಾಲರ ಮೂಲಕ ರಾಷ್ಟ್ರ ಪತಿಗೆ ಕಳುಹಿಸಲಾಗಿತ್ತು. ಆದರೆ ಒಪ್ಪಿಗೆ ದೊರೆತಿರಲಿಲ್ಲ. ಅನಂತರ 2013ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ 1964ರ ಹಳೆಯ ಕಾಯ್ದೆಯನ್ನೇ ಮುಂದುವರಿಸುವ ತೀರ್ಮಾನ ತೆಗೆದುಕೊಂಡಿತ್ತು.
ಉತ್ತರಪ್ರದೇಶ ಮಾದರಿ
ರಾಜ್ಯ ಸರಕಾರವು ಗೋಹತ್ಯೆ ನಿಷೇಧ ಕಾಯ್ದೆಯನ್ನು ಮತ್ತಷ್ಟು ಬಲಗೊಳಿಸಲು ಉತ್ತರ ಪ್ರದೇಶ ಮತ್ತು ಗುಜರಾತ್ ಮಾದರಿಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ಹಸು, ಎಮ್ಮೆ, ಎತ್ತು, ಕರುಗಳನ್ನು ಹತ್ಯೆ ಮಾಡದಂತೆ ತಿದ್ದುಪಡಿ ಕಾಯ್ದೆಯಲ್ಲಿ ನಿರ್ಬಂಧ ಹೇರಲು ನಿರ್ಧರಿಸಿದೆ. ಗೋಹತ್ಯೆ ಮತ್ತು ಅಕ್ರಮವಾಗಿ ಸಾಗಾಟ ಮಾಡುವುದನ್ನು ಜಾಮೀನು ರಹಿತ ಅಪರಾಧವೆಂದು ಪರಿಗಣಿಸ ಲಾಗುತ್ತದೆ. ತಪ್ಪಿತಸ್ಥರಿಗೆ ಕನಿಷ್ಠ 10 ವರ್ಷ ಶಿಕ್ಷೆ, 5 ಲಕ್ಷ ರೂ.ವರೆಗೆ ದಂಡ ವಿಧಿಸುವುದನ್ನು ಕಾಯ್ದೆಯಲ್ಲಿ ಅಳವಡಿಸಲು ಮುಂದಾಗಿದೆ. ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಈಗಾಗಲೇ ಉತ್ತರ ಪ್ರದೇಶ ಮತ್ತು ಗುಜರಾತ್‌ಗಳಿಗೆ ಭೇಟಿ ನೀಡಿ ಅಲ್ಲಿನ ಕಾಯ್ದೆಗಳ ಅಂಶಗಳು, ಅವುಗಳ ಯಶಸ್ವಿ ಅನುಷ್ಠಾನದ ಮಾಹಿತಿ ಪಡೆದುಕೊಂಡು ಬಂದಿದ್ದಾರೆ ಎಂದು ತಿಳಿದು ಬಂದಿದೆ.
ಕುರಿ, ಮೇಕೆ, ಹಂದಿ ಉತ್ಪಾದನೆ ಹೆಚ್ಚಳಕ್ಕೆ ಆದ್ಯತೆ
ದನ ಮತ್ತು ಎಮ್ಮೆಗಳ ಮಾಂಸದ ಬದಲಿಗೆ ಕುರಿ, ಮೇಕೆ ಮಾಂಸದ ಉತ್ಪಾದನೆಗೆ ಆದ್ಯತೆ ನೀಡಲು ರಾಜ್ಯ ಸರಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಅದಕ್ಕಾಗಿ ಕುರಿ, ಮೇಕೆ ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡುವ ಬಗ್ಗೆ ಆಲೋಚನೆ ನಡೆಸಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.