![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 2, 2020, 8:00 PM IST
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಎನ್. ಆರ್. ಸಂತೋಷ್ ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಯವಾದಿ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಎ.ಎಸ್. ಓಕ್ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಉಮಾಪತಿ ವಾದ ಮಂಡಿಸಿ, ಯಡಿಯೂರಪ್ಪನವರಿಗೆ ಆಪ್ತರಾಗಿರುವ ಸಂತೋಷ್ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವುದು ಸಂವಿಧಾನಬಾಹಿರ ಹಾಗೂ ಅಕ್ರಮ. ಬೆಂಬಲಿಗರು ಹಾಗೂ ಸಂಬಂಧಿಕರಿಗಾಗಿ ಸೃಷ್ಟಿಸಿರುವ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಯಾವುದೇ ಕಾನೂನಾತ್ಮಕ ಸ್ಥಾನವಿಲ್ಲ. ಶಾಸಕರೂ ಅಲ್ಲದ ಸಂತೋಷ್‌ಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ. ಈ ಮೂಲಕ ಸಾರ್ವಜನಿಕರ ತೆರಿಗೆ ಹಣವನ್ನು ಅನಗತ್ಯವಾಗಿ ವ್ಯಯಿಸಲಾಗುತ್ತಿದೆ. ಆದ್ದರಿಂದ ಅವರನ್ನು ರಾಜಕೀಯ ಕಾರ್ಯದರ್ಶಿ ಹು¨ªೆಯಿಂದ ಬಿಡುಗಡೆ ಮಾಡುವಂತೆ ಸರಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಇದನ್ನೂ ಓದಿ:ಮಾವು ನಿಗಮ ಬೆಳೆಗಾರರು ಮತ್ತು ಗ್ರಾಹಕರ ಸೇತುವೆಯಾಗಬೇಕಿದೆ : ಡಾ.ಕೆ.ಸುಧಾಕರ್
ನ್ಯಾಯಪೀಠವು ವಿಚಾರಣೆಯನ್ನು ಜ.11ಕ್ಕೆ ಮುಂದೂಡಿತು.
ಸಂತೋಷ್‌ಗೆ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 2020ರ 28 ಮೇ ರಂದು ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಸಂತೋಷ್ ಅವರಿಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಆದರೆ ವಿರೋಧ ಪಕ್ಷಗಳು ಮತ್ತು ಪಕ್ಷದ ಕಾರ್ಯಕರ್ತರ ವಿರೋಧದಿಂದಾಗಿ ನೇಮಕ ಜಾರಿಗೆ ಬಂದಿರಲಿಲ್ಲ.
ಹೀಗಾಗಿ ಜೂನ್ 22 ರಂದು ಮತ್ತೆ ಮುಖ್ಯಮಂತ್ರಿ ನೀಡಿದ ಲಿಖೀತ ಸೂಚನೆ ಮೇರೆಗೆ ಅಧಿಕಾರಿಗಳು ನೇಮಕ ಮಾಡಿ ಪುನಃ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.