ರಾಜ್ಯದ ವಿಧಿ ವಿಜ್ಞಾನ ಪ್ರಯೋಗಾಲಯಗಳ ಕೊರತೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Team Udayavani, Feb 10, 2021, 10:20 PM IST
ಬೆಂಗಳೂರು: ರಾಜ್ಯದಲ್ಲಿ “ವಿಧಿ ವಿಜ್ಞಾನ ಪ್ರಯೋಗಾಲಯ’ (ಎಫ್ಎಸ್‌ಎಲ್)ಗಳು ಮತ್ತು ಅವುಗಳಲ್ಲಿನ ಸಿಬ್ಬಂದಿ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ರಾಜ್ಯದ ಎಲ್ಲ ವಲಯಗಳ ಐಜಿಪಿಗಳು, ಕಮಿಷನರ್‌ಗಳು, ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕರು ಮತ್ತು ಎಲ್ಲಾ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯದ ಉಪ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ ಆದೇಶಿಸಿತು.
ಇದೇ ವೇಳೆ ರಾಜ್ಯದಲ್ಲಿರುವ 6 ವಿಧಿ ವಿಜ್ಞಾನ ಪ್ರಯೋಗಲಾಯ ಜೊತೆಗೆ ಅಗತ್ಯ ಸಂಖ್ಯೆಯ ಪ್ರಯೋಗಾಲಯಗಳನ್ನು ಸ್ಥಾಪಿಸುವ, ಸಮಸ್ಯೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಕುರಿತು ಮಾರ್ಚ್ 15ರೊಳಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕರಿಗೆ ನ್ಯಾಯಪೀಠ ಸೂಚಿಸಿತು.
ಇದನ್ನೂ ಓದಿ:ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ KSRTC ಬಸ್ ಕಂಡಕ್ಟರ್
ಅಲ್ಲದೇ, ಪ್ರಯೋಗಾಲಯಗಳಲ್ಲಿ ಎಲ್ಲ ವಿಭಾಗಗಳೂ ಕಾರ್ಯನಿರ್ವಹಣೆ ಮಾಡುವಂತೆ, ಖಾಲಿ ಇರುವ ಹು¨ªೆಗಳನ್ನು ಭರ್ತಿ ಮಾಡುವಂತೆ ಹಾಗೂ ಪ್ರಯೋಗಾಲಯಗಳು ವರದಿ ನೀಡಲು ಸಮಯ ನಿಗದಿಪಡಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಮಾ. 18ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ :
ಕ್ರಿಮಿನಲ್ ಅರ್ಜಿಯೊಂದನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ 2020ರ ಡಿಸೆಂರ್ಬ 22ರಂದು ನೀಡಿದ್ದ ಆದೇಶದಲ್ಲಿ ರಾಜ್ಯದಲ್ಲಿರುವ ಎಫ್ಎಸ್‌ಎಲ್‌ಗಳು ನಿಗದಿತ ಅವಧಿಯಲ್ಲಿ ವರದಿ ನೀಡದಿರುವ ಕಾರಣದಿಂದಾಗಿ ಕ್ರಿಮಿನಲ್ ಪ್ರಕರಣಗಳ ನ್ಯಾಯದಾನ ಪ್ರಕ್ರಿಯೆಗೆ ಸಮಸ್ಯೆಯಾಗುತ್ತಿರುವ ಕುರಿತು ಉಲ್ಲೇಖಿಸಿತ್ತು. ಅಲ್ಲದೇ, ಈ ವಿಚಾರವನ್ನು ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತರುವಂತೆ ರಿಜಿಸ್ಟ್ರಾರ್‌ಗೆ ಮನವಿ ಮಾಡಿತ್ತು. ಅದರಂತೆ ಮುಖ್ಯ ನ್ಯಾಯಮೂರ್ತಿಗಳ ಸೂಚನೆ ಮೇರೆಗೆ ಹೈಕೋರ್ಟ್ ಎಫ್ಎಸ್‌ಎಲ್ ಲ್ಯಾಬ್‌ಗಳ ಕೊರತೆ ವಿಚಾರವಾಗಿ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡಿದೆ.
ಬೆಂಗಳೂರಿನ ಮಡಿವಾಳದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಕೇಂದ್ರ ಕಚೇರಿಯಿದ್ದು, ದಾವಣಗೆರೆ, ಬೆಳಗಾವಿ, ಕಲಬುರ್ಗಿ, ಮಂಗಳೂರು ಹಾಗೂ ಮೈಸೂರು ಸೇರಿದಂತೆ ರಾಜ್ಯದಲ್ಲಿ ಒಟ್ಟು ಆರು ಲ್ಯಾಬ್ ಗಳಿವೆ. ಇವುಗಳಲ್ಲಿ ಡಿಎನ್‌ಎ, ನಾರ್ಕೋಟಿಕ್ಸ್, ಫೈರ್ ಆಮ್ಸ್ì ದಾಖಲೆಗಳ ಪರೀಕ್ಷಾ ವಿಭಾಗ ಸೇರಿದಂತೆ 13 ವಿಭಾಗಗಳಿದ್ದು,, ಅಗತ್ಯ ಸಂದರ್ಭಗಳಲ್ಲಿ ತಮ್ಮಲ್ಲಿಗೆ ಬರುವ ಸ್ಯಾಂಪಲ್ ಗಳನ್ನು ಪರೀಕ್ಷಿಸಿ ವರದಿ ನೀಡುತ್ತವೆ. ಆದರೆ ಈ ಲ್ಯಾಬ್ ಗಳಲ್ಲಿ ಸಿಬ್ಬಂದಿ ಹಾಗೂ ಸೌಕರ್ಯಗಳ ಕೊರತೆಯಿಂದಾಗಿ 11 ವಿಭಾಗಗಳು ಕೆಲಸವನ್ನೇ ಮಾಡುತ್ತಿಲ್ಲ.
ರಾಜ್ಯದ ಎಲ್ಲ ಲ್ಯಾಬ್ ಗಳಲ್ಲಿ 35,738 ಸ್ಯಾಂಪಲ್‌ಗಳು ಪರೀಕ್ಷೆಗೊಳಪಡದೆ ಬಾಕಿ ಉಳಿದಿರುವ ಪರಿಣಾಮ 6994 ಕ್ರಿಮಿನಲ್ ಪ್ರಕರಣಗಳ ವಿಚಾರಣೆಯೂ ವಿಳಂಬವಾಗಿದೆ. ಸ್ಯಾಂಪಲ್‌ಗಳು ಬಂದಾಗ ವರದಿ ಕೊಡಲಿಕ್ಕೆ ಲ್ಯಾಬ್‌ಗಳು ಹೆಚ್ಚು ಸಮಯ ತೆಗೆದುಕೊಳ್ಳುತ್ತಿವೆ. ನ್ಯಾರ್ಕೋಟಿಕ್ಸ್‌ಗೆ ಒಂದು ವರ್ಷ, ಮೊಬೈಲ…, ಕಂಪ್ಯೂಟರ್,, ಆಡಿಯೋ, ವೀಡಿಯೋ, ಡಿಎನ್‌ಎ ಹಾಗೂ ದಾಖಲೆಗಳನ್ನು ಪರೀಕ್ಷಿಸಿ ವರದಿ ನೀಡಲು ಸುಮಾರು ಒಂದೂವರೆ ವರ್ಷ ತೆಗೆದುಕೊಳ್ಳುತ್ತಿವೆ. ಇದು ಕ್ರಿಮಿನಲ್ ಪ್ರಕರಣಗಳ ನ್ಯಾಯದಾನ ಪ್ರಕ್ರಿಯೆ ವಿಳಂಬಕ್ಕೆ ಕಾರಣವಾಗುತ್ತಿದೆ ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು ತಮ್ಮ ತೀರ್ಪಿನಲ್ಲಿ ಉಲ್ಲೇಖಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.