ಕೋವಿಡ್ ಸಕ್ರಿಯ ಪ್ರಕರಣಗಳು : ಕರ್ನಾಟಕಕ್ಕೆ ಎರಡನೇ ಸ್ಥಾನ
Team Udayavani, Mar 30, 2021, 9:23 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ಸೋಂಕು ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿವೆ. ಅಲ್ಲದೇ, ಸಕ್ರಿಯ ಕೊರೊನಾ ಸೋಂಕು ಪ್ರಕರಣಗಳ ಪಟ್ಟಿಯಲ್ಲಿಯೂ ಕರ್ನಾಟಕ ಎರಡನೇ ಸ್ಥಾನಕ್ಕೇರಿಕೆಯಾಗಿದೆ.
ಸದ್ಯ ಒಟ್ಟಾರೆ ಕೊರೊನಾ ಪ್ರಕರಣಗಳ ಪಟ್ಟಿಯಲ್ಲಿ ಮಹಾರಾಷ್ಟ್ರ, ಕೇರಳ ನಂತರ ಮೂರನೇ ಸ್ಥಾನದಲ್ಲಿದೆ. ಆದರೆ, ಮಂಗಳವಾರ ಮಹಾರಾಷ್ಟ್ರ ಬಿಟ್ಟರೆ ಕರ್ನಾಟಕದಲ್ಲಿಯೇ 2975 ಪ್ರಕರಣಗಳು, 21 ಸಾವು ವರದಿಯಾಗಿದೆ. ಕೇರಳದಲ್ಲಿ 2,389 ಪ್ರಕರಣಗಳು, 16 ಸಾವಾಗಿದೆ. ಅಲ್ಲದೆ, ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ಸೋಮವಾರದ ವರೆಗೂ ಕೇರಳ ಎರಡನೇ ಸ್ಥಾನದಲ್ಲಿತ್ತು. ಆದರೆ ಮಂಗಳವಾರ ಕರ್ನಾಟಕದಲ್ಲಿ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆ ಸಕ್ರಿಯ ಪ್ರಕರಣಗಳು 25 ಸಾವಿರಕ್ಕೇರಿಕೆಯಾಗಿವೆ. ಈ ಮೂಲಕ ಮಹಾರಾಷ್ಟ್ರ ಬಿಟ್ಟರೆ ಕರ್ನಾಟಕದಲ್ಲಿಯೇ ಅತಿ ಹೆಚ್ಚು ಸೋಂಕಿತರು ಚಿಕಿತ್ಸೆ, ಆರೈಕೆಯಲ್ಲಿದ್ದಾರೆ.
ಸಾವು ಹೆಚ್ಚಳ:
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಏರಿಕೆ ಹಾದಿಯಲ್ಲಿಯೇ ಸಾಗುತ್ತಿದ್ದು, ಮಂಗಳವಾರ 21 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿರುವುದು ವರದಿಯಾಗಿದೆ.
ಇದನ್ನೂ ಓದಿ :ಭಾರತ-ಚೀನಾ ಗಡಿಯಿಂದೀಚೆ ಒಂದಿಂಚೂ ಜಾಗ ಕಳೆದುಕೊಂಡಿಲ್ಲ : ಸೇನಾ ಮುಖ್ಯಸ್ಥರ ಸ್ಪಷ್ಟನೆ
ಮಂಗಳವಾರ ಹೊಸದಾಗಿ 2975 ಮಂದಿಗೆ ಸೋಂಕು ತಗುಲಿದ್ದು, 1262 ಸೋಂಕಿತರು ಗುಣಮುಖರಾಗಿದ್ದಾರೆ. ಸೋಮವಾರಕ್ಕೆ ಹೋಲಿಸಿದರೆ ಪರೀಕ್ಷೆಗಳು 13 ಸಾವಿರ ಹೆಚ್ಚಳವಾಗಿದ್ದ, ಹೊಸ ಪ್ರಕರಣಗಳು 200 ಹೆಚ್ಚಳವಾಗಿವೆ. ಇನ್ನು ಸೋಂಕಿತರ ಸಾವು 16 ರಿಂದ 21 ಕ್ಕೆ ಹೆಚ್ಚಳವಾಗಿದೆ. ಕಳೆದ ಐದು ತಿಂಗಳಲ್ಲಿ ಇದೇ ಮೊದಲ ಬಾರಿ ಸಾವು 20 ರ ಗಡಿದಾಟಿದೆ.
ಅತಿ ಹೆಚ್ಚು ಪ್ರಕರಣಗಳು ಬೆಂಗಳೂರು 1984, ಬೀದರ್ 102, ಕಲಬುರಗಿ 156, ಮೈಸೂರು 111, ಹಾಸನ 57, ಬೆಂಗಳೂರು ಗ್ರಾಮಾಂತರ 66 ಉಡುಪಿ 53 ಪ್ರಕರಣಗಳು ವರದಿಯಾಗಿವೆ. ಬೆಂಗಳೂರು 11, ಮೈಸೂರು 3, ಬೆಂಗಳೂರು ಗ್ರಾಮಾಂತರ 2, ಬೀದರ್, ಚಿಕ್ಕಮಗಳೂರು, ಹಾಸನ, ಕಲಬುರಗಿಯಲ್ಲಿ ತಲಾ ಒಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ.
ಸದ್ಯ ರಾಜ್ಯದ ಒಟ್ಟಾರೆ ಕೊರೊನಾ ಪ್ರಕರಣಗಳು 9.92 ಲಕ್ಷಕ್ಕೆ ಹೆಚ್ಚಳವಾಗಿದ್ದು, ಈಗಾಗಲೇ 9.55 ಲಕ್ಷ ಜನ ಗುಣಮುಖರಾಗಿದ್ದಾರೆ. ಒಟ್ಟಾರೆ ಸಾವು 12541 ಕ್ಕೆ ತಲಮಂಗಳವಾರ 25,541 ಸಕ್ರಿಯ ಪ್ರಕರಣಗಳಲ್ಲಿ ಸೋಂಕಿತರು ಆಸ್ಪತ್ರೆ ಮತ್ತು ಮನೆಗಳಲ್ಲಿ ಚಿಕಿತ್ಸೆ ಆರೈಕೆಯಲ್ಲಿದ್ದಾರೆ. ಮಂಗಳವಾರ 1.06 ಲಕ್ಷ ಸೋಂಕು ಪರೀಕ್ಷೆಗಳಾಗಿದ್ದು, ಪರೀಕ್ಷೆಗೊಳಪಟ್ಟ 100 ಮಂದಿಯಲ್ಲಿ ಮೂರು ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.