ಕೋವಿಡ್ ಕಳವಳ- ಆಗಸ್ಟ್ 23: 5938 ಹೊಸ ಪ್ರಕರಣ ; 4996 ಡಿಸ್ಚಾರ್ಜ್ ; 68 ಸಾವು
Team Udayavani, Aug 23, 2020, 7:27 PM IST
ಬೆಂಗಳೂರು: ಶನಿವಾರ ಸಾಯಂಕಾಲದಿಂದ ರವಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5938 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 4996 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 68 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 2,77,814 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 01 ಲಕ್ಷದ 89 ಸಾವಿರಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. 1,89,564 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 83,551 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 4683 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 16 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 787 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಬಾಗಲಕೋಟೆ (139), ಬಳ್ಳಾರಿ (406), ಬೆಳಗಾವಿ (136), ಬೆಂಗಳೂರು ಗ್ರಾಮಾಂತರ (35), ಬೆಂಗಳೂರು ನಗರ (2126), ಬೀದರ್ (38), ಚಾಮರಾಜ ನಗರ (23 ), ಚಿಕ್ಕಬಳ್ಳಾಪುರ (81 ), ಚಿಕ್ಕಮಗಳೂರು (126 ), ಆ ಬಳಿಕದ ಸ್ಥಾನಗಳಲ್ಲಿ ಚಿತ್ರದುರ್ಗ ( 71), ದಕ್ಷಿಣ ಕನ್ನಡ (193), ದಾವಣಗೆರೆ (265), ಧಾರವಾಡ (194), ಗದಗ (182) , ಹಾಸನ (196 ) , ಹಾವೇರಿ (150 ), ಕಲಬುರುಗಿ (203 ), ಕೊಡಗು (15 ), ಕೋಲಾರ ( 47), ಕೊಪ್ಪಳ (256), ಮಂಡ್ಯ (51 ), ಮೈಸೂರು (92) , ರಾಯಚೂರು (81), ರಾಮನಗರ (42), ಶಿವಮೊಗ್ಗ (246 ), ತುಮಕೂರು (112 ), ಉಡುಪಿ (117), ಉತ್ತರ ಕನ್ನಡ (108 ), ವಿಜಯಪುರ (134 ), ಯಾದಗಿರಿ (73 ) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.