ಕರ್ನಾಟಕ ವಿಶ್ವದ ಅತಿದೊಡ್ಡ ಉಕ್ಕು ಉತ್ಪಾದಿಸುವ ರಾಜ್ಯವಾಗಲಿದೆ: ಸಿಎಂ ಬೊಮ್ಮಾಯಿ
Team Udayavani, Dec 3, 2022, 3:43 PM IST
ಬೆಂಗಳೂರು: ಕರ್ನಾಟಕದಲ್ಲಿ ಅತಿ ದೊಡ್ಡ ಕಬ್ಬಿಣದ ಕಾರ್ಖಾನೆ ಇದ್ದು 4-5 ವರ್ಷಗಳಲ್ಲಿ ವಿಶ್ವದ ಅತಿ ದೊಡ್ಡ ಕಬ್ಬಿಣ ಅದಿರು ಉತ್ಪಾದನೆ ಮಾಡುವ ರಾಜ್ಯವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಭಾರತ ಸರ್ಕಾರದ ಕಲ್ಲಿದ್ದಲು ಮತ್ತು ಗಣಿ ಸಚಿವಾಲಯದಿಂದ ಹಮ್ಮಿಕೊಂಡಿದ್ದ ವಾಣಿಜ್ಯ ಕಲ್ಲಿದ್ದಲು ಗಣಿ ಹರಾಜು ಮತ್ತು ಗಣಿಗಾರಿಕೆ ವಲಯದಲ್ಲಿನ ಅವಕಾಶಗಳ ಕುರಿತ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.
ಒರಿಸ್ಸಾ ಗಣಿಗಾರಿಕೆಯ ರಾಜ್ಯವಾಗಿದೆ. ಅಲ್ಲಿ ಗಣಿಗಾರಿಕೆ ಪ್ರಮುಖ ಉದ್ಯಮ, ಅದನ್ನು ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವುದು ಸರಿಯಲ್ಲ. ಅಲ್ಲಿನ ನೀತಿಗಳನ್ನೇ ಇತರೆ ರಾಜ್ಯಗಳಿಗೆ ಅನ್ವಯಿಸುವುದು ಕೂಡ ಸೂಕ್ತವಲ್ಲ. ರಾಜ್ಯದಲ್ಲಿರುವ ಗುಣಮಟ್ಟದ ಗಣಿಗಳಿಂದ ಮಾತ್ರ ಉತ್ಪಾದನೆ ಸಾಧ್ಯವಾಗಲಿದೆ ಎಂದರು.
ಇಂಧನ, ಗಣಿ ಹಾಗೂ ಉಕ್ಕು ಸಚಿವಾಲಯಗಳು ತಂತ್ರಜ್ಞಾನವನ್ನು ಬಳಕೆ ಮಾಡಬೇಕು ಹಾಗೂ ಬೇಡಿಕೆಯಲ್ಲಿರುವ ಖನಿಜಗಳ ಉತ್ಪಾದನೆಗೆ ತೊಡಗಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ನಿಯಮಗಳ ಸರಳೀಕರಣ: ಅನೇಕ ಗಣಿ ಕಂಪನಿಗಳು ಕೋಲಾರ ಚಿನ್ನದ ಗಣಿ ಮರು ಆರಂಭಿಸಲು ಮನವಿ ಸಲ್ಲಿಸಿವೆ. ಗಣಿ ನೀತಿಯಲ್ಲಿ ರಾಜ್ಯ ಸರ್ಕಾರ ನಿಯಮಗಳನ್ನು ಸರಳಿಕರಣಗೊಳಿಸಿದೆ. ಗಣಿ ಉದ್ಯಮಿಗಳು ರಾಜ್ಯದಲ್ಲಿ ಗಣಿಗಾರಿಕೆ ನಡೆಸಲು ಆಗಮಿಸಿ ಈ ಮೂಲಕ ರಾಜ್ಯದ ಆದಾಯ ವೃದ್ಧಿಗೆ ಕೊಡುಗೆ ನೀಡಬೇಕೆಂದರು.
ಗಣಿಗಳ ರಚನೆಯೇ ನಮಗೆ ಅವುಗಳ ಅನ್ವೇಷಣೆಯ ವಿಧಾನದ ಬಗ್ಗೆ ಹಾಗೂ ಶೋಷಣೆ ಮಾಡಬಾರದು ಎಂಬ ಪಾಠ ಕಲಿಸುತ್ತವೆ. ಅನ್ವೇಷಣೆ ಮತ್ತು ಶೋಷಣೆಯ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು. ಇದನ್ನು ಸಾಧಿಸಿದಾಗ ಸುಸ್ಥಿರತೆ ಸಾಧಿಸಬಹುದು. ಸುಸ್ಥಿರತೆ ಪ್ರಮುಖ ವಿಷಯವಾಗಿದ್ದು, ಈ ವಲಯದಲ್ಲಿ ಸುಸ್ಥಿರತೆಯನ್ನು ತರಬೇಕಿದೆ. ಅತ್ಯುತ್ತಮ ಗಣಿ ಸಂಸ್ಕೃತಿಯನ್ನು ಜಾರಿಗೆ ತರಬೇಕಿದೆ. 5 ಸಾವಿರಕ್ಕೂ ಹೆಚ್ವು ಜನರಿಗೆ ಉದ್ಯೋಗ ಕಲ್ಪಿಸುವ ಗಣಿಗಾರಿಕೆ ವಲಯ, ಸರ್ಕಾರಕ್ಕೂ ಆದಾಯ ತರಲಿದೆ. ಗಣಿಗಾರಿಕೆ ಸಂಸ್ಕೃತಿ. ಹೆಚ್ವಿನ ಚಿನ್ನ, ಗಣಿ ಹಾಗೂ ಪರಿಸರ ಸೂಕ್ಷ್ಮತೆಯನ್ನು ಕಾಪಾಡಿಕೊಳ್ಳುತ್ತದೆ ಹಾಗೂ ಸುಸ್ಥಿರತೆಯನ್ನೂ ತರಲಿದೆ. ವೈಜ್ಞಾನಿಕವಾಗಿ ಗಣಿಗಾರಿಕೆ ಮಾಡದಿದ್ದರೆ, ಉತ್ಪಾದನೆಯನ್ನು ಹೆಚ್ಚುಗೊಳಿಸಲಾಗುವುದಿಲ್ಲ ಹಾಗೂ ಭವಿಷ್ಯಕ್ಕೆ ಉಳಿಯುವುದೂ ಇಲ್ಲ. ಅನ್ವೇಷಣೆ ಮಾಡಿದರೆ ದೇಶ ಹಾಗೂ ದೇಶದ ಆರ್ಥಿಕತೆಗೆ ಹಾಗೂ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಶೋಷಣೆ ಮಾಡಿದರೆ ಭವಿಷ್ಯದಿಂದ ಕಳುವು ಮಾಡಿದಂತಾಗುತ್ತದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಒಬ್ಬ ದಾರ್ಶನಿಕ. ಅವರ ಗುರಿಗಳ ಬಗ್ಗೆ ಅವರಿಗೆ ಸ್ಪಷ್ಟತೆ ಇದೆ. ಅವರು ಹಿಂದಿನ ಆಳ್ವಿಕೆಗಳ ತಪ್ಪುಗಳ ಬಗ್ಗೆ ಮಾಹಿತಿ ಇದೆ. ಆದ್ದರಿಂದ ನೂತನ ಗಣಿ ನೀತಿಯನ್ನು ಜಾರಿಗೆ ತಂದು ಗರಿಷ್ಠ ಉತ್ಪಾದನೆ ಹಾಗೂ ಸುಸ್ಥಿರತೆಯನ್ನು ತಂದಿದ್ದಾರೆ. ಪಾರದರ್ಶಕ, ವೈಜ್ಞಾನಿಕ ರೀತಿಯಲ್ಲಿ ಗಣಿಕಾರಿಕೆ ಕೈಗೊಳ್ಳಲು ನೂತನ ವಿಧಾನ, ಯಂತ್ರಗಳು ಬಂದಿವೆ. ಗಣಿಕಾರಿಕೆಯನ್ನು ವೃತ್ತಿಯಾಗಿ ಕೈಗೆತ್ತಿಕೊಳ್ಳಲು ಇದು ಸಕಾಲ. ಈ ರೀತಿಯ ವಾತಾವರಣ 7-8 ವರ್ಷಗಳ ಹಿಂದೆ ಇರಲಿಲ್ಲ ಎಂದರು.
ಇದನ್ನೂ ಓದಿ:ಶಾರಿಕ್ ಸಹಚರರ ಮಾಹಿತಿ ಸಂಗ್ರಹಕ್ಕಾಗಿ ಶಿವಮೊಗ್ಗಕ್ಕೆ ಎನ್ಐಎ ತಂಡ ಭೇಟಿ
ಇಂಧನ ದೇಶದ ಅಭಿವೃದ್ದಿಗೆ ಪೂರಕವಾಗಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿರುವ ಇತಿಮಿತಿಗಳನ್ನು ಮೀರಿ ಕ್ಷೇತ್ರ ಬೆಳೆಯುತ್ತಿದೆ. ಕರ್ನಾಟಕ 2.5 ಕೋಟಿ ರೂ ಮುಂದಿನ 3 ವರ್ಷದಲ್ಲಿ ನವೀಕರಣ ಇಂಧನದಲ್ಲಿ ಬಂಡವಾಳ ಹೂಡಿಕೆ ಮಾಡಲಿದೆ. ಕರ್ನಾಟಕ ಅತಿ ಹೆಚ್ಚು ನವೀಕರಿಸಬಹುದಾದ ಇಂಧನ ಉತ್ಪಾದಿಸುವ ರಾಜ್ಯವಾಗಿದೆ. ಹೈಡ್ರೋಜನ್ ಇಂಧನ ಹಾಗೂ ಕಡಲಿನಿಂದ ಅಮೋನಿಯಾ ಉತ್ಪಾದನೆಗೆ 2 ಲಕ್ಷಕ್ಕಿಂತಲೂ ಹೆಚ್ವಿನ ಹೂಡಿಕೆ ಆಗುತ್ತಿದೆ. ಸಮೃದ್ಧ ಗಣಿಮೂಲಗಳನ್ನು ಹೊಂದಿರುವ ರಾಜ್ಯ ನಮ್ಮದು. ಚಿನ್ನ, ಬ್ರೋಮೈಡ್, ನಿಕಲ್ ಮುಂತಾದ ಖನಿಜಗಳನ್ನು ಹೊಂದಿದೆ. ನಾವು ಉತ್ತಮ ಗಣಿ ನೀತಿ ಹೊಂದಿದ್ದೇವೆ. ಸರ್ಕಾರ ಹೂಡಿಕೆದಾರರ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವ ಭರವಸೆ ನೀಡಿದರು.
ಕಲ್ಲಿದ್ದಲು ಹಾಗು ಕಬ್ಬಿಣ ಮತ್ತು ಉಕ್ಕು ಅತ್ಯಂತ ಮಹತ್ವದ ಗಣಿ ಉದ್ಯಮಗಳಾಗಿವೆ. ಕಲ್ಲಿದ್ದಲು ಗಣಿಗಾರಿಕೆಯಲ್ಲಿ ದೇಶದಲ್ಲಿ ಉತ್ತಮ ಸಾಧನೆ ಮಾಡಿದ್ದು, ಕೇಂದ್ರ ಗಣಿ ಸಚಿವ ಪ್ರಹ್ಲಾದಜೋಶಿ ಅವರ ನೇತೃತ್ವದಲ್ಲಿ ನಾಲ್ಕೈದು ವರ್ಷಗಳಲ್ಲಿ ಕಲ್ಲಿದ್ದಿಲಿನ ಉತ್ಪಾದನೆ ಹೆಚ್ಚಾಗಿದೆ ಎಂದರು. 500 ಮಿಲಿಯನ್ ಮೆಟ್ರಿಕ್ ಟನ್ ಉತ್ಪಾದನೆಯನ್ನು ಮುಂದಿನ 3- 4 ವರ್ಷಗಳಲ್ಲಿ ಮಾಡಲಿದ್ದು, ಉತ್ಪಾದನೆ ಶೀಘ್ರವೇ ಪ್ರಾರಂಭವಾಗಲಿದೆ. ಕಲ್ಲಿದ್ದಲು ಗಣಿಗಾರಿಕೆಯ ಇತಿಹಾಸದಲ್ಲಿಯೇ ಇದು ಅತ್ಯಂತ ಹೆಚ್ಚಿನ ಉತ್ಪಾದನೆಯಾಗಲಿದೆ. ಇದಕ್ಕಾಗಿ ಅವರನ್ನು ಅಭಿನಂದಿಸಿದರು.
ಗಣಿಗಾರಿಕೆಯಲ್ಲಿ ಗರಿಷ್ಠ ಉತ್ಪಾದನೆ: ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸಲು ಇದು ನಮಗೆ ಸಹಾಯಕವಾಗಲಿದೆ. ಭಾರತವನ್ನು ಆರ್ಥಿಕತೆಯ ಶಕ್ತಿ ಕೇಂದ್ರವಾಗಿಸಲು ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಗರಿಷ್ಠ ಉತ್ಪಾದನೆಯನ್ನು ನಿಗದಿತ ಸಮಯದಲ್ಲಿ ಮಾಡಬೇಕಿದೆ. ಕಬ್ಬಿಣ ಮತ್ತು ಉಕ್ಕಿನ ಗಣಿಗಾರಿಕೆ ವಿಚಾರದಲ್ಲಿ ಸುಪ್ರಿಂ ಕೋರ್ಟ್ ಕೆಲವು ಮಾರ್ಗಸೂಚಿಗಳನ್ನು ನೀಡಿದ್ದು, ಅದರಂತೆ ಗಣಿಗಾರಿಕೆ ನಡೆಸಲು ಅವಕಾಶ ನೀಡಲಾಗುತ್ತಿದೆ. ಹರಾಜು ಪ್ರಕ್ರಿಯೆಯನ್ನು ದಕ್ಷ ಹಾಗೂ ಪಾರದರ್ಶಕವಾಗಿ ಕೈಗೊಳ್ಳಲು ಸೂಚಿಸಲಾಗಿದೆ. ಹರಾಜು ಪ್ರಕ್ರಿಯೆಯನ್ನು ದೊಡ್ಡ ಮಟ್ಟದಲ್ಲಿ ಕೈಗೊಳ್ಳುವ ಭರವಸೆ ಇದೆ. 16 ಬ್ಲಾಕ್ ಗಳ ಹರಾಜು ಪ್ರಕ್ರಿಯೆ ತಕ್ಷಣದಲ್ಲಿ ಆಗಲಿದ್ದು ಇನ್ನೂ 25 ಬ್ಲಾಕ್ ಗಳ ಹರಾಜು ಶೀಘ್ರವೇ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.