ಕಾಸರಗೋಡು: ಮೂವರಿಗೆ ಕೋವಿಡ್‌-19 ಸೋಂಕು ದೃಢ

6 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ

Team Udayavani, Jun 7, 2020, 7:39 PM IST

ಕಾಸರಗೋಡು: ಮೂವರಿಗೆ ಕೋವಿಡ್‌-19 ಸೋಂಕು ದೃಢ

ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ ಮೂವರಿಗೆ ಕೋವಿಡ್‌-19 ಪಾಸಿಟಿವ್‌ ವರದಿಯಾಗಿದೆ. ಬಾಧಿತರಲ್ಲಿ ಇಬ್ಬರು ಮಹಾರಾಷ್ಟ್ರದಿಂದ, ಒಬ್ಬರು ಕುವೈಟ್‌ನಿಂದ ಆಗಮಿಸಿದವರು.

ಕುವೈತ್‌ನಿಂದ ಆಗಮಿಸಿದ್ದ ಕಾಂಞಂಗಾಡ್‌ ನಗರಸಭೆ ವ್ಯಾಪ್ತಿಯ 38 ವರ್ಷದ ವ್ಯಕ್ತಿ, ಮಹಾರಾಷ್ಟ್ರದಿಂದ ಬಂದ ಚೆರುವತ್ತೂರು ಗ್ರಾಮ ಪಂಚಾಯತ್‌ನ 33 ವರ್ಷದ ವ್ಯಕ್ತಿ ಮತ್ತು ಪುಲ್ಲೂರು   ಪೆರಿಯ ಗ್ರಾ.ಪಂ.ನ 63 ವರ್ಷದ ವ್ಯಕ್ತಿ ಬಾಧಿತರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾಣ ಎ.ವಿ. ರಾಮದಾಸ್‌ ತಿಳಿಸಿದ್ದಾರೆ.

ಇದೇ ವೇಳೆ ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್‌ ಕಾಲೇಜಿನಲ್ಲಿ ದಾಖಲಾಗಿದ್ದ 6 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಮಹಾರಾಷ್ಟ್ರದಿಂದ ಆಗಮಿಸಿದ್ದ ಕುಂಬಳೆ ಗ್ರಾ.ಪಂ. ವ್ಯಾಪ್ತಿಯ 56, 46, 57 ವರ್ಷದ ವ್ಯಕ್ತಿಗಳು, ಮಂಗಲ್ಪಾಡಿಯ 33 ವರ್ಷದ ವ್ಯಕ್ತಿ, ದುಬಾೖಯಿಂದ ಬಂದಿದ್ದ ಮಧೂರು ಪಂಚಾಯತ್‌ನ 68 ವರ್ಷದ ವ್ಯಕ್ತಿ, ಕೋಡೋಂ ಬೇಳೂರು ಪಂಚಾಯತ್‌ನ 32 ವರ್ಷದ ವ್ಯಕ್ತಿ ಗುಣಮುಖರಾದವರು.

ಕೇರಳದಲ್ಲಿ 107 ಪ್ರಕರಣ
ಕೇರಳದಲ್ಲಿ ರವಿವಾರ 107 ಮಂದಿಗೆ ಕೋವಿಡ್‌-19 ಸೋಂಕು ದೃಢವಾಗಿದೆ. ಅವರಲ್ಲಿ 71 ಮಂದಿ ವಿದೇಶದಿಂದ, 28 ಮಂದಿ ಇತರ ರಾಜ್ಯಗಳಿಂದ ಬಂದವರು. ಸಂಪರ್ಕದಿಂದ 8 ಮಂದಿಗೆ ಸೋಂಕು ಬಾಧಿಸಿದೆ. ರಾಜ್ಯದಲ್ಲಿ ಒಟ್ಟು 1,095 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 803 ಮಂದಿ ಗುಣಮುಖರಾಗಿದ್ದಾರೆ.

ವೈದರ್‌ಗೆ ನೆಗೆಟಿವ್‌
ತಮಿಳುನಾಡಿನಿಂದ ಬಂದು ಕ್ವಾರಂಟೈನ್‌ನಲ್ಲಿರುವಾಗ ಮೃತಪಟ್ಟ ಆಯುರ್ವೇದ ವೈದ್ಯ ತಳಂಗರೆ ಗಝಲಿ ನಗರದ ರಾಮಚಂದ್ರನ್‌ ವೈದ್ಯರ್‌ (76) ಅವರಿಗೆ ಕೋವಿಡ್‌ ಪರೀಕ್ಷೆಯಲ್ಲಿ ನೆಗೆಟಿವ್‌ ಫ‌ಲಿತಾಂಶ ಬಂದಿದೆ. ಮೃತ ದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಯಿತು.

ಮಾಸ್ಕ್ ಧರಿಸದ 217 ಮಂದಿ
ವಿರುದ್ಧ ಕೇಸು
ಮಾಸ್ಕ್ ಧರಿಸದೇ ಇದ್ದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ರವಿವಾರ 217 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 5,105 ಮಂದಿಯ ವಿರುದ್ಧ ಕೇಸು ದಾಖಲಿಸಿ ದಂಡ ವಸೂಲಿ ಮಾಡಲಾಗಿದೆ.

ಟಾಪ್ ನ್ಯೂಸ್

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

4

Kasaragod: ಸ್ಕೂಟರ್‌ ಅಪಘಾತ; ಸವಾರನ ಸಾವು

arest

Kasaragod: ಎಂ.ಡಿ.ಎಂ.ಎ. ಸಹಿತ ಇಬ್ಬರ ಬಂಧನ

complaint

Kasaragod: ಸಚಿತಾ ರೈ ವಿರುದ್ಧ ಮತ್ತೆ ಮೂರು ಕೇಸು ದಾಖಲು

12

Kasaragod: ಆಸ್ಪತ್ರೆಯಲ್ಲಿ ರೋಗಿಯ ಚಿನ್ನಾಭರಣ ಕಳವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ವಕೀಲರ ಮೇಲೆ ಹಲ್ಲೆ: ದೂರು

Mangaluru: ವಕೀಲರ ಮೇಲೆ ಹಲ್ಲೆ: ದೂರು

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.