ಗೋವಾ ಚಿತ್ರೋತ್ಸವಕ್ಕೆ ಸುದೀಪ್‌ ಚಾಲನೆ : ಕನ್ನಡದಲ್ಲೇ ಮಾತು ಆರಂಭಿಸಿದ ಕಿಚ್ಚ


Team Udayavani, Jan 16, 2021, 8:13 PM IST

ಗೋವಾ ಚಿತ್ರೋತ್ಸವಕ್ಕೆ ಸುದೀಪ್‌ ಚಾಲನೆ : ಕನ್ನಡದಲ್ಲೇ ಮಾತು ಆರಂಭಿಸಿದ ಕಿಚ್ಚ

ಪಣಜಿ: 51ನೇ “ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವ’ (ಐಎಫ್ಎಫ್ಐ)ಕ್ಕೆ ಶನಿವಾರ ಚಾಲನೆ ದೊರೆತಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವಡೇಕರ್‌ ಮೊದಲಾದ ಗಣ್ಯರು ಹಾಜರಿದ್ದ “ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವ’ (ಐಎಫ್ಎಫ್ಐ)ದ ಉದ್ಘಾಟನಾ ಸಮಾರಂಭದಲ್ಲಿ ನಟ ಸುದೀಪ್‌ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ “ಪ್ರತಿಯೊಬ್ಬರಿಗೂ ಕನ್ನಡ ಚಿತ್ರರಂಗದ ಪರವಾಗಿ ಹಾಗೂ ಕರ್ನಾಟಕದ ಪರವಾಗಿ ಈ ಕಿಚ್ಚನಿಂದ ನಮಸ್ತೆ’ ಎಂದು ಹೇಳುವ ಮೂಲಕ ಕನ್ನಡದಲ್ಲೇ ಮಾತನ್ನು ಆರಂಭಿಸಿದ ಸುದೀಪ್‌, “ಸಿನಿಮಾ ಮತ್ತು ಕ್ರೀಡೆ ಎಂಬುದು ನಮ್ಮೆಲ್ಲರನ್ನೂ ಬೆಸೆದಿದೆ. ಆ ಕಾರಣಕ್ಕಾಗಿಯೇ ನಾವೆಲ್ಲರೂ ಇಲ್ಲಿ ಸೇರಿದ್ದೇವೆ. ಸಿನಿಮಾ ಎಂಬುದು ಎಲ್ಲೆಡೆ ಹಬ್ಬುವಂತಾಗಲಿ. ದೇಶ ಸುತ್ತು, ಕೋಶ ಓದು ಎಂಬ ಮಾತನ್ನು ನಾನು ಕೇಳಿದ್ದೇನೆ. ಈ ಎರಡನ್ನೂ ಸಿನಿಮಾ ಒದಗಿಸುತ್ತದೆ. ಇಂಥದ್ದೊಂದು ಅಭೂತಪೂರ್ವ ಸಮಾರಂಭದಲ್ಲಿ ಭಾಗವಹಿಸಲು ನನಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು’ ಎಂದರು.

ಪಣಜಿಯ ಡಾ. ಶ್ಯಾಮ ಪ್ರಸಾದ್‌ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ಆರಂಭವಾಗಿರುವ 51ನೇ “ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವ’ (ಐಎಫ್ಎಫ್ಐ) ಜ.16ರಿಂದ ಜ.24ರವರೆಗೆ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಸುಮಾರು 119 ಸಿನಿಮಾಗಳು ಈ ಬಾರಿ ಪ್ರದರ್ಶನಗೊಳ್ಳುತ್ತಿವೆ. ಅವುಗಳಲ್ಲಿ 85 ಸಿನಿಮಾಗಳು ಪ್ರೀಮಿಯರ್‌ ಪ್ರದರ್ಶನ ಕಾಣಲಿವೆ.

ಈ ಬಾರಿ ಕೋವಿಡ್‌ ಆತಂಕದಿಂದ ಫಿಲ್ಮ್ ಫೆಸ್ಟಿವಲ್‌ ಆಯೋಜನೆಯ ರೀತಿಯಲ್ಲಿ ಕೆಲ ಬದಲಾವಣೆಗಳಾಗಿದೆ. ಕೆಲವು ಸಿನಿಮಾಗಳು ದೊಡ್ಡ ಪರದೆಯಲ್ಲಿ ಪ್ರದರ್ಶನ ಕಂಡರೆ, ಮತ್ತೆ ಕೆಲವು ಆನ್‌ಲೈನ್‌ ಮೂಲಕ ಪ್ರದರ್ಶನವಾಗಲಿವೆ. ಉಳಿದಂತೆ ತಜ್ಞರ ಜೊತೆಗಿನ ಮಾಸ್ಟರ್‌ ಕ್ಲಾಸ್‌, ಸಂವಾದ ಮುಂತಾದ ಕಾರ್ಯಕ್ರಮಗಳು ಕೂಡ ಓಟಿಟಿ ಮೂಲಕವೇ ನಡೆಯಲಿವೆ.
ಇನ್ನೊಂದು ವಿಶೇಷವೆಂದರೆ, ಈ ಪ್ರತಿಷ್ಠಿತ “ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವ’ (ಐಎಫ್ಎಫ್ಐ) ಉದ್ಘಾಟಿಸುವ ಅವಕಾಶ ಪಡೆದ ಕನ್ನಡದ ಮೊದಲ ನಾಯಕ ನಟ ಎಂಬ ಹೆಗ್ಗಳಿಕೆಗೂ ಸುದೀಪ್‌ ಪಾತ್ರರಾಗಿದ್ದಾರೆ.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-tudar

Movie: ತುಡರ್ ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ; ಗಣೇಶ್ ರಾವ್

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.