North Korea: ಪ್ರವಾಹ ತಡೆಯಲು ವಿಫಲರಾದ 30 ಅಧಿಕಾರಿಗಳನ್ನ ಗಲ್ಲಿಗೆ ಹಾಕಿ-ಕಿಮ್ ಜಾಂಗ್!
ಭಾರೀ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತದಲ್ಲಿ 4 ಸಾವಿರಕ್ಕೂ ಅಧಿಕ ಮನೆಗಳಿಗೆ ಹಾನಿ
Team Udayavani, Sep 4, 2024, 2:31 PM IST
ಪ್ಯಾಂಗ್ಯಾಂಗ್ (ಉತ್ತರ ಕೊರಿಯಾ): ಸದಾ ಒಂದಲ್ಲ, ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವ ದಕ್ಷಿಣ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್(Kim Jong Un) ಇದೀಗ ರಣಭೀಕರ ಪ್ರವಾಹ ಮತ್ತು ಭೂಕುಸಿತ ತಡೆಯಲು ವಿಫಲರಾದ ಸುಮಾರು 30 ಅಧಿಕಾರಿಗಳನ್ನು ಗಲ್ಲಿಗೇರಿಸಲು (Execution) ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.
ಉತ್ತರ ಕೊರಿಯಾದ ಸುರಿದ ಭಾರೀ ಮಳೆ ಪ್ರವಾಹದಲ್ಲಿ ಸುಮಾರು 1,000 ಜನರು ಸಾವನ್ನಪ್ಪಿದ್ದರು. ಉತ್ತರ ಕೊರಿಯಾದ ಚೋಸನ್ ಟಿವಿ ವರದಿ ಪ್ರಕಾರ, ಇತ್ತೀಚೆಗಿನ ಪ್ರವಾಹದಲ್ಲಿ ಜನರು ಜೀವಕಳೆದುಕೊಂಡಿರುವುದು ಒಪ್ಪಿಕೊಳ್ಳಲು ಸಾಧ್ಯವಿಲ್ಲದ ನಷ್ಟವಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳಿಗೆ ಕಠಿನ ಶಿಕ್ಷೆ ನೀಡುವುದಾಗಿ ಕಿಮ್ ಜಾಂಗ್ ಘೋಷಿಸಿರುವುದಾಗಿ ತಿಳಿಸಿದೆ.
ಪ್ರವಾಹ, ಭೂಕುಸಿತ ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಬೇಜವಾಬ್ದಾರಿ ಹೊಣೆಗಾರಿಕೆ ಮತ್ತು ಭ್ರಷ್ಟಾಚಾರದ ಆರೋಪ ಹೊರಿಸಿದ್ದು, ಕಳೆದ ತಿಂಗಳಾಂತ್ಯದಲ್ಲಿ 30 ಅಧಿಕಾರಿಗಳನ್ನು ಗಲ್ಲಿಗೇರಿಸಲಾಗಿತ್ತು ಎಂದು ವರದಿ ವಿವರಿಸಿದೆ.
ಪ್ರವಾಹಪೀಡಿತ ಪ್ರದೇಶದಲ್ಲಿನ 20ರಿಂದ 30 ಅಧಿಕಾರಿಗಳನ್ನು ಕಳೆದ ತಿಂಗಳಾಂತ್ಯದಲ್ಲಿ ಗಲ್ಲಿಗೇರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ಎಲ್ಲಾ ವಿವರಗಳ ಜತೆ ಮರಣದಂಡನೆಗೊಳಗಾದ ಅಧಿಕಾರಿಗಳ ಹೆಸರನ್ನು ಮಾತ್ರ ಬಹಿರಂಗಗೊಳಿಸಿಲ್ಲ ಎಂದು ವರದಿ ಹೇಳಿದೆ.
ಉತ್ತರ ಕೊರಿಯಾದಲ್ಲಿ ಜುಲೈ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತದಲ್ಲಿ 4 ಸಾವಿರಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, 15 ಸಾವಿರ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಈ ಪ್ರದೇಶಗಳಿಗೆ ಸ್ವತಃ ಕಿಮ್ ಜಾಂಗ್ ಉನ್ ಭೇಟಿ ನೀಡಿ ಪರಿಶೀಲಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.