ಕೆಎಂಎಫ್ ಅಗ್ರ ಸೇವೆ : ಬಾಲಚಂದ್ರ ಜಾರಕಿಹೊಳಿಗೆ ಅಮಿತ್ ಶಾರಿಂದ ಪ್ರಶಸ್ತಿ
Team Udayavani, Apr 10, 2022, 7:28 PM IST
ಬೆಂಗಳೂರು: ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( ಎನ್ ಸಿಡಿಎಫ್ಐ) ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸುಸಂದರ್ಭದಲ್ಲಿ ಹಾಲು ಮತ್ತು ಹಾಲಿನ ಉತ್ಪಾದನೆ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ‘ಕೆಎಂಎಫ್’ ಗೆ ಪ್ರಶಸ್ತಿಯ ಭಾಗ್ಯ ಒಲಿದು ಬಂದಿದೆ.
ಭಾನುವಾರ ಗುಜರಾತ್ ನ ಗಾಂಧಿ ನಗರದಲ್ಲಿ ಎನ್ ಸಿಡಿಎಫ್ಐ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ, ದೇಶದಲ್ಲಿಗ ಅಮೂಲ್ ಸಂಸ್ಥೆ ಮೊದಲ ಸ್ಥಾನದಲ್ಲಿದೆ. ಕರ್ನಾಟಕದ ಕೆಎಂಎಫ್ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಕರ್ನಾಟಕವಲ್ಲದೇ ನೆರೆಯ ಬಹುತೇಕ ರಾಜ್ಯಗಳಲ್ಲಿಯೂ ‘ನಂದಿನಿ’ ಬ್ರಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಳನ್ನು ರೈತ ಸಮುದಾಯಕ್ಕೆ ನೀಡುತ್ತಿದೆ. ಈ ಮೂಲಕ ಹೈನು ಉದ್ಯಮ ಬೆಳೆಯಲು ಈ ಸಂಸ್ಥೆಯು ಹೆಚ್ಚು ಸಹಕಾರಿಯಾಗಿದೆ. ತಮಿಳುನಾಡಿನಲ್ಲಿ ಸಹ ಸಹಕಾರಿ ಸಂಘಗಳು ಬೆಳೆಯಬೇಕಾಗಿದೆ. ದೇಶದಾದ್ಯಂತ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಮಹಿಳೆಯರು ಸಹ ಈ ನಿಟ್ಟಿನಲ್ಲಿ ಮುಂದೆ ಬಂದು ಹೈನುಗಾರಿಕೆಗೆ ಪ್ರೋತ್ಸಾಹಿಸುವ ಕೆಲಸ ನಡೆಯಬೇಕಿದೆ. ಇದರಿಂದ ಹೈನುಗಾರಿಕೆ ಬೆಳೆಯಲು ಸಾಧ್ಯವಾಗುತ್ತದೆ. ಜತೆಗೆ ಆರ್ಥಿಕ ವಾಗಿ ಬಲಾಢ್ಯರಾಗಲು ಅನುಕೂಲವಾಗುತ್ತದೆ ಎಂದರು.
ದೇಶದಲ್ಲಿರುವ ಎಲ್ಲ ಸಹಕಾರಿ ಸಂಸ್ಥೆಗಳು ತಮ್ಮ ದೈನಂದಿನ ದುಂದುವೆಚ್ಚಗಳಿಗೆ ಇತಿಶ್ರೀ ಹಾಡಬೇಕಿದೆ. ಹೈನುಗಾರಿಕೆ ಉದ್ಯಮ ಬೆಳೆಯಲು ರೈತರ ಆರ್ಥಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಬೇಕು. ಕೃಷಿ ಪ್ರಧಾನವಾಗಿರುವ ಭಾರತದಲ್ಲಿ ಇದೇ ವರ್ಷ 40ನೇ ಅಂತಾರಾಷ್ಟ್ರೀಯ ಹೈನುಗಾರಿಕೆ ಸಮ್ಮೇಳನವನ್ನು ಉದ್ದೇಶಿಸಲು ನಿರ್ಧರಿಸಲಾಗಿದೆ ಎಂದು ಅಮಿತ್ ಶಾ ತಿಳಿಸಿದರು.
ಎನ್ ಸಿ ಡಿಎಫ್ಐ ಕಳೆದ ಐದು ವರ್ಷದ ಅವಧಿಯಲ್ಲಿ ಸುಮಾರು ಐದು ಸಾವಿರ ಕೋ.ರೂ ಅಧಿಕ ವ್ಯವಹಾರಗಳನ್ನು ನಡೆಸಿದ್ದು, ಇದರಲ್ಲಿ ಕರ್ನಾಟಕದ ಕೆಎಂಎಫ್ ಈ ಸಂಸ್ಥೆಗೆ ಸುಮಾರು 2400 ಕೋಟಿ ರೂಪಾಯಿ ವ್ಯಾಪಾರ ವಹಿವಾಟು ನಡೆಸಿದ್ದರಿಂದ ಕೆಎಂಎಫ್ ನಂದಿನಿ ಬ್ರಾಂಡ್ ಗೆ ಪ್ರಶಸ್ತಿ ನೀಡಿ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಳವು ಗೌರವಿಸಿದೆ.
ದೇಶದ ವಿವಿಧ ರಾಜ್ಯಗಳ ಸಹಕಾರಿಗಳು, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.