ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರು ಸಾವು
Team Udayavani, Aug 19, 2020, 2:44 PM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಬುಧವಾರ ಎರಡು ಸಾವು ಸಂಭವಿಸಿದ್ದು, ಇದರೊಂದಿಗೆ ಒಟ್ಟು ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ.
ಸೋಮವಾರಪೇಟೆ ತಾಲ್ಲೂಕು ಮಾದಾಪುರ ನಿವಾಸಿ 65 ವರ್ಷದ ಮಹಿಳೆಯೊಬ್ಬರು ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಇವರನ್ನು ಐ.ಸಿ.ಯು ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಿರಾಜಪೇಟೆ ತಾಲ್ಲೂಕು ಮರೂರು ತಿತಿಮತಿ ನಿವಾಸಿ 36 ವರ್ಷದ ವ್ಯಕ್ತಿಯೊಬ್ಬರಿಗೂ ಸೋಂಕು ದೃಢಪಟ್ಟಿದ್ದು ಅವರೂ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ, ಹೃದಯ ಮತ್ತು ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು ಇವರಿಗೂ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರಿಗೆ ಕೋವಿಡ್ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಆದರೆ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ ಮೃತ ದೇಹದ ಅಂತ್ಯಕ್ರಿಯೆಯನ್ನು ನಡೆಸಲಾಗುವುದು ಎಂದು ಅರೋಗ್ಯ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.