ರೂಪಾಂತರ ವೈರಸ್ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ
Team Udayavani, Dec 30, 2020, 1:31 PM IST
ಮಡಿಕೇರಿ : ಬ್ರಿಟನ್ ರೂಪತಾರ ವೈರಸ್ ನ ಕುರಿತು ಕೊಡಗು ಜಿಲ್ಲೆಯಲ್ಲಿ ಸೋಂಕು ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ರಾಜ್ಯ ಸರ್ಕಾರದಿಂದ ಸ್ವೀಕೃತವಾದ ಪಟ್ಟಿಯ ಪ್ರಕಾರ ಕೊಡಗು ಜಿಲ್ಲೆಗೆ 20 ಜನ ಬ್ರಿಟನ್ ನಿಂದ ಬಂದಿದ್ದು ಇವರಲ್ಲಿ 15 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ, ಅದರಲ್ಲಿ 12 ಜನರ ಪರೀಕ್ಷಾ ವರದಿಯು ನೆಗೆಟಿವ್ ಬಂದಿದ್ದು, 03 ಜನರ ಪರೀಕ್ಷಾ ವರದಿಯನ್ನು ನಿರೀಕ್ಷಿಸಲಾಗಿದೆ ಹಾಗೆ ಉಳಿದ 05 ಜನರ ಪೈಕಿ 04 ಜನರು ಬೇರೆ ಬೇರೆ ಜಿಲ್ಲೆಗಳಲ್ಲಿದ್ದು, ಅವರ ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲೆಯ ಸರ್ವೇಕ್ಷಣಾಧಿಕಾರಿಯವರಿಗೆ ನೀಡಲಾಗಿದೆ 1 ಪ್ರಕರಣ ಮಾತ್ರ ಇನ್ನೂ ಪತ್ತೆ ಹಚ್ಚುವ ಹಂತದಲ್ಲಿದ್ದು, ಅವರ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ನೀಡಿದ್ದು, ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:LIVE: ಗ್ರಾ.ಪಂ ಫಲಿತಾಂಶ: ಸಹೋದರರ ಸವಾಲ್ ನಲ್ಲಿ ಹತ್ತು ಮತ ಅಂತರದ ಗೆಲುವು ಪಡೆದ ಹಿರಿಯಣ್ಣ
ಈ ವರೆಗೆ ಜಿಲ್ಲೆಯಲ್ಲಿ ಬ್ರಿಟನ್ ನ ರೂಪಾಂತರ ವೈರಸ್ ದೃಢಪಟ್ಟಿರುವುದಿಲ್ಲ. ಒಂದು ವೇಳೆ ದೃಢಪಟ್ಟರೂ ಪ್ರತ್ಯೇಕ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಮಾಡಿಕೊಳ್ಳಲಾಗಿದೆ. ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.