ಸಲಾಂ ಮಂಗಳಾರತಿ ಕುರಿತು ಕೊಲ್ಲೂರು ದೇಗುಲ ಆಡಳಿತ ಮಂಡಳಿ ಸ್ಪಷ್ಟನೆ
Team Udayavani, Mar 29, 2022, 6:32 PM IST
ಉಡುಪಿ : ಸಲಾಂ ಮಂಗಳಾರತಿ ಕುರಿತು ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದ ಆಡಳಿತ ಮಂಡಳಿ ಮಂಗಳವಾರ ಸ್ಪಷ್ಟನೆ ನೀಡಿದೆ.
”ದೇಗುಲದಲ್ಲಿಸಂಪ್ರದಾಯದಂತೆ ಪೂಜೆ ನಡೆಯುತ್ತವೆ, ಸಂಜೆ ಪ್ರದೋಷ ಪೂಜೆಯನ್ನ ನೆರವೇರಿಸಲಾಗುತ್ತದೆ. ಇದನ್ನ ಸ್ಥಳೀಯರು ಸಲಾಂ ಮಂಗಳಾರತಿ ಎನ್ನುತ್ತಾರೆ. ಆದರೆ ದೇಗುಲದಿಂದ ಯಾವುದೇ ಬೇರೆ ಆರತಿ ನಡೆಯುವುದಿಲ್ಲ. ವ್ಯಕ್ತಿ ಪೂಜೆಯನ್ನೂ ಮಾಡಲಾಗುತ್ತಿಲ್ಲ” ಎಂದು ದೇಗುಲದ ಆಡಳಿತ ಸ್ಪಷ್ಟನೆ ನೀಡಿದೆ.
ದೇವಸ್ಥಾನದಲ್ಲಿ ಪ್ರತೀದಿನ ರಾತ್ರಿ 8 ಗಂಟೆಗೆ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ನಡೆಯುವ ಸಲಾಂ ಎಂಬ ಮಹಾಮಂಗಳಾರತಿ ನಿಲ್ಲಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿತ್ತು. ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರ. ಭಾರತದ 108 ಶಕ್ತಿ ಪೀಠಗಳಲ್ಲಿ ಕೊಲ್ಲೂರು ಕೂಡಾ ಒಂದು. ಇಂತಹ ಕ್ಷೇತ್ರದಲ್ಲಿ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ನೂರಾರು ದೇವಸ್ಥಾನಗಳನ್ನು ಧ್ವಂಸ ಮಾಡಿದ ಟಿಪ್ಪು ಸುಲ್ತಾನನ ಹೆಸರಿನಲ್ಲಿ ಮೂಕಾಂಬಿಕೆಗೆ ಮಹಾ ಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವಂತದ್ದು. ಇದು ಗುಲಾಮಗಿರಿಯ ಸಂಕೇತವಾಗಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿ ಮಾಡುತ್ತದೆ ಎಂದು ವಿಎಚ್ ಪಿ ಹೇಳಿತ್ತು. ಆಡಳಿತ ಮಂಡಳಿಗೆ ಪತ್ರ ಬರೆದು ಸಲಾಂ ಮಂಗಳಾರತಿ ಕೈಬಿಡುವಂತೆ ಒತ್ತಾಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.