ಕೊರಗಜ್ಜನ ಗುಡಿಗೆ ಕಾಂಡೋಮ್ : ಆರೋಪಿಯ ಚರಿತ್ರೆ ಬಹಿರಂಗ
ಇಲ್ಲಿಯೂ ತಳುಕು ಹಾಕಿಕೊಂಡ ಮತಾಂತರ ಪ್ರಕರಣ
Team Udayavani, Dec 29, 2021, 2:25 PM IST
ಬಂಧಿತ ಆರೋಪಿ ದೇವದಾಸ್ ದೇಸಾಯಿ, ಪೊಲೀಸ್ ಕಮಿಷನರ್ ಎನ್ .ಶಶಿಕುಮಾರ್ ಸುದ್ದಿಗೋಷ್ಠಿ
ಮಂಗಳೂರು: ಮಾರ್ನಮಿಕಟ್ಟೆಯ ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೋಮ್ ನ್ನು ಇಟ್ಟು ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.
ಬಂಧಿತ ಆರೋಪಿ ದೇವದಾಸ್ ದೇಸಾಯಿ(62) ಎನ್ನುವವನಾಗಿದ್ದು ಮಿತ್ರ ನಗರ, ಕೊಂಡಾಣ ಕೋಟೇಕಾರು ನಿವಾಸಿಯಾಗಿದ್ದು, ಮೂಲತಃ ಹುಬ್ಬಳ್ಳಿಯವನಾಗಿದ್ದಾನೆ.
ಆರೋಪಿ ದೇವದಾಸ್ ತಂದೆ ಜಾನ್ ದೇಸಾಯಿ, ಸರಕಾರಿ ಉದ್ಯೋಗಿಯಾಗಿದ್ದು ಅವರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಈತ ಕೂಡ ಅದೇ ಧರ್ಮ ಅನುಸರಣೆ ಮಾಡುತ್ತಿದ್ದ. ಹೆಚ್ಚಾಗಿ ಮನೆಯಲ್ಲೆ ಪ್ರಾರ್ಥನೆ ಮಾಡುತ್ತಿದ್ದ ಎಂದು ನಗರ ಪೊಲೀಸ್ ಕಮಿಷನರ್ ಎನ್ .ಶಶಿಕುಮಾರ್ ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ದೈವಸ್ಥಾನ, ಕೊರಗಜ್ಜ ಕಟ್ಟೆ, ಮಸೀದಿ, ಸಿಖ್ ಗುರುದ್ವಾರ( ಕೂಳೂರು) ಮುಂತಾದ ಕಡೆಗಳಲ್ಲಿನ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತ ಲೇಖನ ಹಾಕಿರುವುದಾಗಿ ವಿಚಾರಣೆ ವೇಳೆ ಆರೋಪಿ ಹೇಳಿಕೆ ನೀಡಿದ್ದಾನೆ.
ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿತ್ತು, ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಹೇಳಿದ ಚರಿತ್ರೆ !
ನಾನು ಮೂಲತ: ಹುಬ್ಬಳ್ಳಿಯ ಉಣ್ಕಲ್ ಎಂಬ ಊರಿನಲ್ಲಿ ಜನಿಸಿದ್ದು, ನನ್ನ ತಂದೆಯವರಾದ ಜಾನ್ ದೇಸಾಯಿಯವರು ಆದಾಯ ತೆರಿಗೆ ಇಲಾಖೆಯಲ್ಲಿ ಹೆಡ್ ಕ್ಲರ್ಕ್ ಆಗಿ ನಿವ್ರತ್ತಿಯಾಗಿದ್ದು, 1997 ನೇ ಇಸವಿಯಲ್ಲಿ ತೀರಿಕೊಂಡಿರುತ್ತಾರೆ. ನಂತರ ನಾನು ಧಾರವಾಡ ಸಾರಿಗೆ ಕಛೇರಿಯಲ್ಲಿ ತ್ರಿಚಕ್ರ ವಾಹನದ ಚಾಲನಾ ಪರವಾನಿಗೆಯನ್ನು ಪಡೆದುಕೊಂಡು 1991 ನೇ ಇಸವಿವರೆಗೆ ಹುಬ್ಬಳ್ಳಿ ನಗರದಲ್ಲಿ ಅಟೋರಿಕ್ಷಾ ಚಲಾಯಿಸಿ ಕೊಂಡಿದ್ದೆನು. 1991 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮಹಿಳೆ ಜೊತೆಗೆ ನನಗೆ ಮದುವೆಯಾಗಿದ್ದು, 1993 ರಲ್ಲಿ
ನಮಗೆ ಹೆಣ್ಣು ಮಗುವಾಗಿತ್ತು. 1997ರಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದು, ಮಂಗಳೂರಿನ ಬಂದರಿನ ಟ್ರಾನ್ಸ್ ಪೋರ್ಟ್ ಕಛೇರಿಯಲ್ಲಿ ಚಾಲಕನಾಗಿ ಕೆಲಸಕ್ಕೆ ಸೇರಿಕೊಂಡೆನು. ಆ ಸಮಯ ಸುರತ್ಕಲ್ ಸೂರಿಂಜೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದೆನು. ನನ್ನ ಹೆಂಡತಿ ಹಾಗೂ ಮಗಳು ಹುಬ್ಬಳ್ಳಿಯ ನಮ್ಮ ಮನೆಯಲ್ಲಿದ್ದವರು ಅತ್ತಿಗೆಯ ಜೊತೆಗೆ ಮನಸ್ತಾಪ ಮಾಡಿಕೊಂಡು ಅವಳ ಸ್ವಂತ ಊರಾದ ಚಿಕ್ಕಮಗಳೂರಿಗೆ ಹೋದವರು ನಂತರ ನನ್ನನ್ನೂ ದೂರಮಾಡಿ ಅಲ್ಲಿಯೇ ನೆಲೆಸಿರುತ್ತಾರೆ.
1999ರಲ್ಲಿ ಕೆಲಸವನ್ನು ಬಿಟ್ಟು, ನನ್ನ ಸ್ವಂತ ಊರಾದ ಹುಬ್ಬಳ್ಳಿಗೆ ಹೋಗಿದ್ದು, ಅಲ್ಲಿಂದ ಕೊಡಗು ಜಿಲ್ಲೆಯ ವಿರಾಜಪೇಟೆಯ ಮತ್ತೂರು ಎಂಬಲ್ಲಿ ಕಾಫಿ ಎಸ್ಟೇಟ್ ನಲ್ಲಿ ರೈಟರ್ ಆಗಿ ಕೆಲಸಕ್ಕೆ ಸೇರಿದ್ದು, 2000ರಲ್ಲಿ
ಅಲ್ಲಿಂದ ಕೆಲಸ ಬಿಟ್ಟು ಮಂಗಳೂರಿಗೆ ಬಂದು ಬಾಡಿಗೆ ರಿಕ್ಷಾ ಚಲಾಯಿಸಿಕೊಂಡಿದ್ದೆನು. ಈ ಸಮಯದಲ್ಲಿ ಮಂಗಳೂರಿನ ಶಕ್ತಿನಗರದ ಕಾರ್ಮಿಕ ಕಾಲೊನಿಯಲ್ಲಿ ಬಾಡಿಗೆ ಮನೆಮಾಡಿಕೊಂಡಿದ್ದೆನು. 2003 ರಲ್ಲಿ
ಮಂಗಳೂರಿನ ಬೆಂದೂರ್ ವೆಲ್ ನ ಆಸ್ಪತ್ರೆಯ ಮಾಲಕರೊಬ್ಬರ ಕಾರಿನ ಚಾಲಕನಾಗಿ ಸುಮಾರು 6 ತಿಂಗಳುಗಳ ಸಮಯ ಕೆಲಸ ಮಾಡಿಕೊಂಡಿದ್ದೆನು. ನಂತರ 2006 ನೇ ಇಸವಿಯಲ್ಲಿ ತಲಪಾಡಿ ಕೆ.ಸಿ. ರೋಡ್ ಬಳಿ ಮನೆಯನ್ನು ಖರೀದಿ ಮಾಡಿದ್ದು, ಪ್ರಸ್ತುತ ಇದೇ ಮನೆಯಲ್ಲಿ ಒಬ್ಬಂಟಿಯಾಗಿ ವಾಸಮಾಡಿಕೊಂಡಿದ್ದೇನೆ. ಸರಿಯಾದ ಕೆಲಸವಿಲ್ಲದೆ ಗುಜಿರಿ ಪೇಪರ್ ಬಾಕ್ಸ್ ಗಳನ್ನು ಮಾರಿಕೊಂಡು ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದೇನೆ ಎಂದು ಹೇಳಿದ್ದಾನೆ.
ನಾನು ಈ ಕೆಳಕಂಡ ಸ್ಥಳಗಳಲ್ಲಿನ ದೈವಸ್ಥಾನ, ಕೊರಗಜ್ಜ ಕಟ್ಟೆ, ಮಸೀದಿ, ಸಿಖ್ ಗುರುದ್ವಾರ( ಕೂಳೂರು) ಮುಂತಾದ ಕಡೆಗಳಲ್ಲಿನ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತ ಲೇಖನ ಹಾಕಿದ್ದೇನೆ ಎಂದಿದ್ದು, ಅವುಗಳ ವಿವರ ಇಲ್ಲಿದೆ.
1. ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆ
2. ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ
3. ಕೊಂಡಾಣ ದೈವಸ್ಥಾನ
4. ಮಂಗಳಾದೇವಿ ದೇವಸ್ಥಾನ
5. ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ನ ಬಳಿ ಕಾಣಿಕೆ ಡಬ್ಬಿ
6. ಕಲ್ಲುರ್ಟಿ ದೈವಸ್ಥಾನ, ಒಮೆಗಾ ಆಸ್ಪತ್ರೆ ಬಳಿ, ಪಂಪ್ ವೆಲ್ ಬಳಿ
7. ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ
8. ಕಲ್ಲಾಫು ನಾಗನ ಕಟ್ಟೆ
9. ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ
10. ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ
11. ಕುತ್ತಾರು ಕೊರಗಜ್ಜನ ಕಟ್ಟೆ
12. ಕುಡುಪು ದೈವಸ್ಥಾನ
13. ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ
14. ನಂದಿಗುಡ್ಡೆಯ ಕೊರಗಜ್ಜನ ಗುಡಿ
15. ಎ ಬಿ ಶೆಟ್ಟಿ ವೃತ್ತದ ಬಳಿಯ ದರ್ಗಾ
16. ಸಿಖ್ ಗುರುದ್ವಾರ ಗುಡಿ- ಬಂಗ್ರ ಕೂಳೂರು
17. ಕೋಟ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ- ಮಂಕಿಸ್ವಾಂಡ್
18. ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿ ಕಾಣಿಕೆ ಡಬ್ಬಿ- ಜೆಪ್ಪು ಮಹಾಕಾಳಿ ಪಡ್ಪು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.