ಕೊರಟಗೆರೆ: ಹರ್ಷ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
Team Udayavani, Feb 26, 2022, 12:19 PM IST
ಕೊರಟಗೆರೆ : ಹಿಂದೂಪರ ಸಂಘಟನೆ ಕಾರ್ಯಕರ್ತನ ಭೀಕರ ಹತ್ಯೆಯನ್ನು ಖಂಡಿಸಿ ಸರ್ಕಾರ ಆರೋಪಿಗಳನ್ನು ತ್ವರಿತವಾಗಿ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಅಗ್ರಹಿಸಿ ತಾಲೂಕು ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಪಟ್ಟಣದ ಎಸ್‌ಎಸ್‌ಆರ್ ವೃತ್ತದಲ್ಲಿ ಶ್ರದ್ದಾಂಜಲಿ ಸಲ್ಲಿಸಿ ನಂತರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ತಾಲೂಕು ಬಿಜೆಪಿ ಅಧ್ಯಕ್ಷ ಎಸ್.ಪವನ್‌ಕುಮಾರ್ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಹಿಂದೂ ಸಂಘಟನೆ ಮುಖಂಡ ಹರ್ಷ ಅವರನ್ನು ಕೋಮುವಾದಿ ಶಕ್ತಿಗಳು ಬರ್ಬರವಾಗಿ ಕೊಲೆ ಮಾಡಿರುವ ಹೇಯ ಕೃತ್ಯವನ್ನು ಪ್ರಜ್ಞಾವಂತ ನಾಗರೀಕರು ಖಂಡಿಸಬೇಕು, ಈ ಕೊಲೆಯ ಹಿಂದೆ ದೇಶದ್ರೋಹಿಗಳ ಕೈವಾಡವಿದೆ, ಆದ ಕಾರಣ ಸರ್ಕಾರ ಈ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವ ಮೂಲಕ ಈ ಕೃತ್ಯ ಎಸಗಿರುವ ಆರೋಪಿಗಳನ್ನು ಬಂಧಿಸುವ ಜತೆಗೆ ಇದರ ಹಿಂದಿರುವ ದೇಶದ್ರೋಹಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಿಮ್ಮಜ್ಜ ಮಾತನಾಡಿ ಮಾನವೀಯ ಮೌಲ್ಯಗಳನ್ನು ಮರೆತ ದೇಶ ದ್ರೋಹಿಗಳು ಸಮಾಜಘಾತುಕ ಶಕ್ತಿಗಳು ಈ ಕೃತ್ಯದ ಹಿಂದೆ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ, ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪತ್ತೆ ಮಾಡುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ ಅವರು ಕಾಂಗ್ರೆಸ್ ನಾಯಕರು ರಾಷ್ಟದ್ವಜಕ್ಕೆ ಅಪಮಾನವಾಗಿದೆಯೆಂದು ಸುಳ್ಳು ಹೇಳುತ್ತಾ ಸದನ ಕಲಾಪ ಹಾಳು ಮಾಡಿ ಆಡಳಿತ ಪಕ್ಷದ ವಿರುದ್ದ ಸದನದ ಸಮಯ ಹಾಳು ಮಾಡುತ್ತಿರುವುದು ದುರುದ್ದೇಶವಾಗಿದೆ ಹಾಗೂ ಸಚಿವ ಈಶ್ವರಪ್ಪ ಹೇಳಿಕೆಯಲ್ಲಿ ರಾಷ್ಟದ್ವಜಕ್ಕೆ ಅಪಮಾನ ಮಾಡಿಲ್ಲ ಎಂದು ತಿಳಿಸಿದರು.
ಪಕ್ಷದ ಮುಖಂಡ ಮುನಿಯಪ್ಪ ಮಾತನಾಡಿ ಹರ್ಷರವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು, ನಿರ್ಲಕ್ಷ ಮಾಡಿದರೆ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ, ಹಿಂದೂಗಳು ಈಗಲಾದರೂ ಎಚ್ಚೆತ್ತಕೊಳ್ಳಬೇಕು, ಧರ್ಮಕ್ಕಿಂತಲೂ ದೇಶ ಮುಖ್ಯ ಎಂದರು.
ಭಜರಂಗದಳ ಕಾರ್ಯಕರ್ತ ಹರ್ಷ ಹಿಂದೂ ಕೊಲೆ ಖಂಡಿಸಿ ಪ್ರತಿಭಟನೆಯಲ್ಲಿ ಹರ್ಷರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು ಜೊತೆಗೆ ಕಾಂಗ್ರೆಸ್ ನಾಯಕರು ರಾಷ್ಟದ್ವಜಕ್ಕೆ ಅಪಮಾನವಾಗಿದೆಯೆಂದು ಸುಳ್ಳು ಹೇಳುತ್ತಾ ಸದನ ಕಲಾಪ ಹಾಳು ಮಾಡಿ ಆಡಳಿತ ಪಕ್ಷದ ವಿರುದ್ದ ಸದನದ ಸಮಯ ಹಾಳು ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ವಿರುದ್ದ ದಿಕ್ಕಾರ ಕೂಗಲಾಯಿತು.
ಪ್ರತಿ ಭಟನೆಯಲ್ಲಿ ಪ.ಪಂ.ಸದಸ್ಯ ಪ್ರದೀಪ್‌ಕುಮಾರ್, ನಾಮಿನಿ ಸದಸ್ಯ ಗೋವಿಂದರಾಜು, ರಂಗನಾಥ್, ಜಿಲ್ಲಾ ಉಪಾಧ್ಯಕ್ಷೆ ಸುಶೀಲಮ್ಮ, ಜಿಲ್ಲಾ ಕಾರ್ಯದರ್ಶಿ ಪ್ರಸನ್ನಕುಮಾರ್, ಸುರೇಶ್, ಜಿಲ್ಲಾ ಖಜಾಂಚಿ ಹನುಮಂತರಾಜು, ಜಿಲ್ಲಾ ರೈತಮೋರ್ಚ ಅಧ್ಯಕ್ಷ ವಿಶ್ವನಾಥ್, ಮುಖಂಡರುಗಳಾದ ಗುರುದತ್, ನಟರಾಜು, ರಾಜಣ್ಣ, ಪ್ರಕಾಶ್‌ರೆಡ್ಡಿ, ನಾಗರಾಜು, ಶಿವಕುಮಾರಸ್ವಾಮಿ, ಗೋಪಿ, ದಯಾನಂದ್, ಮುಕ್ಕಣ್ಣಪ್ಪ, ಅರುಣ್, ಬಾಲರಾಜು, ಗಿರಿಜಮ್ಮ, ದೊಡ್ಡಯ್ಯ, ಚಂದ್ರಶೇಖರ್, ರಾಜೀವ್ ಶ್ರೀಧರ್, ಮಹೇಶ್, ಉಮೇಶ್, ಮೂರ್ತಿ, ಮಂಜಣ್ಣ ಸೇರಿದಂತೆ ಇನ್ನಿತರ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.