ಸ್ಥಗಿತಗೊಂಡ ಸಪ್ತಪದಿ ಕಾರ್ಯಕ್ರಮ ಶೀಘ್ರ ಪ್ರಾರಂಭ, ದೇವಾಲಯದ ಅರ್ಚಕರಿಗೆ ವಿಮೆ ಸೌಲಭ್ಯ :ಕೋಟ
Team Udayavani, Nov 26, 2020, 5:39 PM IST
ಹನೂರು (ಚಾಮರಾಜನಗರ): ಕೋವಿಡ್ ಹಿನ್ನೆಲೆ ಸ್ಥಗಿತಗೊಂಡಿರುವ ಸಪ್ತಪದಿ ಕಾರ್ಯಕ್ರಮವನ್ನು ಶೀಘ್ರ ಪ್ರಾರಂಭಿಸಿ ಬಡವರ್ಗದ ಜನರಿಗೆ ದೇವಾಲಯದ ಮೂಲಕ ಮದುವೆ ಏರ್ಪಡಿಸಲಾಗುವುದು ಮತ್ತು 34 ಸಾವಿರ ದೇವಾಲಯಗಳ ಅರ್ಚಕರಿಗೆ ಆರೋಗ್ಯ ವಿಮೆ ಮತ್ತು ಜೀವವಿಮೆ ಒದಗಿಸುವ ಯೋಜನೆಯನ್ನು ಶೀಘ್ರ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವು ಧಾರ್ಮಿಕ ಪುಣ್ಯಕ್ಷೇತ್ರವಾಗಿದ್ದು ಈ ಕ್ಷೇತ್ರವನ್ನು ಪ್ರಾಧಿಕಾರ ರಚನೆ ಮಾಡುವ ಮೂಲಕ ಅಭಿವೃದ್ಧಿಪಡಿಸಬೇಕು ಎಂಬುವ ಚಿಂತನೆ ಬಂದಿದ್ದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ. ಅವರ ಅಧಿಕಾರಾವಧಿಯಲ್ಲಿ ಮಠ-ಮಾನ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದ್ದು ಕಳೆದ ಬಜೆಟ್‍ನಲ್ಲಿ ನಾಡಿನ 39 ಮಠಗಳಿಗೆ ಘೋಷಣೆ ಮಾಡಿದ್ದ ಅನುದಾನ ನೀಡಿದ್ದರು. ಮಠ-ಮಾನ್ಯಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂಬುವ ಉದ್ದೇಶದಿಂದ ಕೇಳಿದ್ದಕ್ಕಿಂತ ಹೆಚ್ಚಿನ ಅನುದಾನ ನೀಡಿದ್ದರು. ಅಂತೆಯೇ ಶ್ರೀ ಕ್ಷೇತ್ರಗಳ ಅಭಿವೃದ್ಧಿಗೂ ಹೆಚ್ಚನ ಒತ್ತು ನೀಡಿದ್ದು ಮಲೆ ಮಹದೇಶ್ವರ ಕ್ಷೇತ್ರವು ಇದೇ ವೇಗದಲ್ಲಿ ಅಭಿವೃದ್ಧಿ ಹೊಂದುತ್ತಾ ಸಾಗಿದರೆ ಮುಂದಿನ 4-5 ವರ್ಷಗಳಲ್ಲಿ ಕರ್ನಾಟಕ ರಾಜ್ಯದ ಅತ್ಯಂತ ಶ್ರೇಷ್ಠ ಧಾರ್ಮಿಕ ಪುಣ್ಯಕ್ಷೇತ್ರವಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಕ್ರಮ : ಸಿಎಂ
ಮೀನುಗಾರಿಕೆ ಸಮಸ್ಯೆ ಬಗೆಹರಿಸುವೆ: ಚಾಮರಾಜನಗರ ಜಿಲ್ಲೆಯಲ್ಲಿ ಮೀನುಗಾರಿಕೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಸಂಬಂಧ ತಮ್ಮ ಗಮನಕ್ಕೆ ಬಂದಿದ್ದು ಈ ಸಮಸ್ಯೆಗಳನ್ನು ನಿವಾರಿಸಿ ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮುಂದಿನ 2-3 ವಾರಗಳಲ್ಲಿ ಜಿಲ್ಲೆಗೆ ಮತ್ತೊಮ್ಮೆ ಬಂದು ಸಭೆ ನಡೆಸಲಾಗುವುದು . ಈ ವೇಳೆ ಜಿಲ್ಲೆಯ ಶಾಸಕರು ಮತ್ತು ಸಂಬಂಧಪಟ್ಟವರ ಸಭೆ ಕರೆದು ಚರ್ಚೆ ನಡೆಸಿ ಮೀನುಗಾರಿಕೆಯ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.