Kota Srinivas Poojary ಕರ್ನಾಟಕದಲ್ಲಿ ಗೊಂದಲದ ರಾಜಕಾರಣ
Team Udayavani, Jun 30, 2024, 1:18 AM IST
ಉಡುಪಿ: ಮುಖ್ಯಮಂತ್ರಿ ಬದಲಾವಣೆ ಯಾಗಬೇಕು ಎಂದು ಕಾಂಗ್ರೆಸ್ ಶಾಸಕರು ಹೇಳುತ್ತಿದ್ದಾರೆ. ಒಬ್ಬರು ಮುಖ್ಯಮಂತ್ರಿಯಾದರೆ ಉಳಿದೆಲ್ಲ ಶಾಸಕರನ್ನು ಉಪಮುಖ್ಯಮಂತ್ರಿ ಮಾಡಿ ಎಂದು ಕಾಂಗ್ರೆಸ್‌ನ ಹಿರಿಯರು ವ್ಯಂಗ್ಯವಾಡುತ್ತಿದ್ದಾರೆ. ಒಟ್ಟಾರೆ ಕರ್ನಾಟಕ ರಾಜಕಾರಣ ಗೊಂದಲಮಯವಾಗಿದೆ. ರಾಜ್ಯ ಸರಕಾರ ಬಹಳ ದಿನ ಮುಂದುವರಿಯಲಿದೆ ಎಂದೆನಿಸುತ್ತಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಶನಿವಾರ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ಆಡಳಿತ ನೀಡುವ ಬಿಗಿತನ ರಾಜ್ಯ ಸರಕಾರ ಕಳೆದುಕೊಂಡಿದೆ. ಮಠಾಧೀಶರು ನೀಡುವ ಹೇಳಿಕೆಗಳು ಆಡಳಿತದ ಮೇಲೆ ಪರಿಣಾಮ ಬೀರುತ್ತಿವೆ. ಒಂದೇ ಒಂದು ಬಡವರ ಕಲ್ಯಾಣ ಯೋಜನೆಗಳು ಜಾರಿಯಾಗುತ್ತಿಲ್ಲ. ಸರಕಾರಿ ಹಾಸ್ಟೆಲ್‌ಗಳು ಸಿಗುತ್ತಿಲ್ಲ ಎಂಬ ದೂರು ಸಾರ್ವತ್ರಿಕವಾಗಿದೆ ಕೇಳಿ ಬರುತ್ತಿದೆ. ಪರಿಶಿಷ್ಟ ಜಾತಿ ಪಂಗಡದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳಲಾಗಿದೆ. ಬಹಳ ದಿನಗಳ ಕಾಲ ಈ ಸರಕಾರ ಮುಂದುವರಿಯುವಂತೆ ಅನಿಸುತ್ತಿಲ್ಲ. ವಿಪಕ್ಷ ವಾಗಿ ನಾವು ಏನು ಮಾಡಬಹುದೋ ಅದೆಲ್ಲವನ್ನು ಮಾಡುತ್ತಿದ್ದೇವೆ ಎಂದರು.
ನೀಟ್ ಅಕ್ರಮಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳದಿದ್ದರೆ ಸರಕಾರದಿಂದ ತಪ್ಪಾಗುತ್ತದೆ. ಆದರೆ ಸರಕಾರ ಈಗಾಗಲೇ ಪ್ರಕರಣದ ತನಿಖೆ ಮಾಡಲು ಸಿಬಿಐ ತನಿಖೆಗೆ ಆದೇಶಿಸಿದೆ. ತಪ್ಪಾಗಿದ್ದರೆ ಕ್ರಮ ಆಗಿಯೇ ಆಗುತ್ತೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.