ಉತ್ತರ ಕನ್ನಡಕ್ಕೆ ಕೋಟ, ಲೆಕ್ಕಾಚಾರದ ನೋಟ
Team Udayavani, Jan 25, 2022, 11:52 AM IST
ಬೆಂಗಳೂರು : ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿದ ಬೆನ್ನಲ್ಲೇ, ಕೆಲ ದಿನಗಳ ಹಿಂದೆ ಚರ್ಚೆಗೆ ಕಾರಣವಾಗಿದ್ದ ವಿಚಾರವೊಂದು ಈಗ ಮತ್ತೆ ಮುನ್ನೆಲೆಗೆ ಬಂದಿದೆ.
ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಭವಿಷ್ಯದಲ್ಲಿ ಕೆನರಾ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆಂಬ ವಿಚಾರ ಕೆಲ ತಿಂಗಳ ಹಿಂದೆ ಉಭಯ ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಚರ್ಚೆಗೆ ಬಂದಿತ್ತು. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಸುದ್ದಿಗಳು ಹರಡಿದ್ದವು. ಆದರೆ ಹುಟ್ಟಿದಷ್ಟೇ ವೇಗವಾಗಿ ಆ ಸುದ್ದಿ ಕರಗಿ ಹೋಗಿತ್ತು. ಆದರೆ ಈ ವಿಚಾರ ಈಗ ಉತ್ತರ ಕನ್ನಡದಲ್ಲಿ ಮತ್ತೆ ಹೊಸ ಚರ್ಚೆ ಹುಟ್ಟು ಹಾಕಿದೆ. ಸಂಸದ ಅನಂತಕುಮಾರ್ ಹೆಗಡೆ ರಾಜಕೀಯ ನಿವೃತ್ತಿಯ ರೀತಿ ಹೇಳಿಕೆ ನೀಡಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಮಾಧಾನ
ಇದರ ಮಧ್ಯೆ ಸಚಿವ ಶಿವರಾಂ ಹೆಬ್ಬಾರ್ ಅವರನ್ನು ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಬದಲಾಯಿಸಿರುವ ಬಗ್ಗೆ ಜಿಲ್ಲೆಯಲ್ಲಿ ಆಕ್ಷೇಪ ಕೇಳಿ ಬಂದಿದೆ. ಹೆಬ್ಬಾರ್ ಉತ್ತಮವಾಗಿ ಕೆಲಸ ಮಾಡುತ್ತಿದ್ದಾಗ ಈ ಬದಲಾವಣೆ ಅಗತ್ಯವಿರಲಿಲ್ಲ ಎಂದು ಬೆಂಬಲಿಗರು ಬೇಸರ ವ್ಯಕ್ತಪಡಿಸಿದ್ದಾರೆ.
ಆದರೆ ಸಚಿವ ಶಿವರಾಂ ಹೆಬ್ಬಾರ್ ಈ ಬಗ್ಗೆ ಎಲ್ಲಿಯೂ ಬಹಿರಂಗ ಹೇಳಿಕೆ ನೀಡಿಲ್ಲ. ಮೂಲಗಳ ಪ್ರಕಾರ ” ವರ್ಕೋಹಾಲಿಕ್ ” ಹೆಬ್ಬಾರ್ ಗೆ ಖುದ್ದು ಸಿಎಂ ಬೊಮ್ಮಾಯಿ ಅವರೇ ತಮ್ಮ ತವರು ಜಿಲ್ಲೆ ಹಾವೇರಿಯ ಉಸ್ತುವಾರಿ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಲ್ಲಾಪುರ ಕ್ಷೇತ್ರ ಹಾವೇರಿ ಜಿಲ್ಲೆಗೆ ಹೊಂದಿಕೊಂಡೇ ಇರುವುದರಿಂದ ಹೆಚ್ಚಿನ ಸಮಸ್ಯೆಯಾಗುವುದಿಲ್ಲ ಎಂದೂ ಮನವೊಲಿಸಿದ್ದಾರೆ. ಹೀಗಾಗಿ ವಲಸಿಗ ಸಚಿವರ ಪೈಕಿ ಹೆಬ್ಬಾರ್ ಗೆ ಮಹತ್ವದ ಜವಾಬ್ದಾರಿ ಲಭಿಸಿದೆ.
ಬೆಳಗಾವಿ ಬೆಂಕಿ
ಇನ್ನು ಬೆಳಗಾವಿ ಜಿಲ್ಲೆಯಲ್ಲೂ ಉಸ್ತುವಾರಿ ಬಿಸಿ ಎದ್ದಿದೆ. ಜಿಲ್ಲಾ ಉಸ್ತುವಾರಿಗಾಗಿ ಪಟ್ಟು ಹಿಡಿದಿದ್ದ ಉಮೇಶ್ ಕತ್ತಿ ಇದೀಗ ಮೌನಕ್ಕೆ ಶರಣಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.