ಅಗತ್ಯ ಬಿದ್ದರೆ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ : ಸಚಿವ ನಾಗೇಶ್
Team Udayavani, Dec 6, 2021, 12:40 PM IST
ಬೆಂಗಳೂರು : ರಾಜ್ಯದ ವಿವಿಧೆದೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, , ಪರಿಸ್ಥಿತಿ ಎದುರಾದರೆ ಪರೀಕ್ಷೆ ಮತ್ತು ಶಾಲೆಗಳನ್ನು ಬಂದ್ ಮಾಡುವುದಕ್ಕೆ ಸರಕಾರವು ಹಿಂದೆ ಸರಿಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೋಮವಾರ ಹೇಳಿದ್ದಾರೆ.
ನಿಯಮಿತವಾಗಿ ಆಫ್ ಲೈನ್ ತರಗತಿಗಳನ್ನು ನಡೆಸಲು ಯಾವುದೇ ತೊಂದರೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದಾಗಿ ಅವರು ಹೇಳಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ನಾಗೇಶ್ ಸುದ್ದಿಗಾರರಿಗೆ ತಿಳಿಸಿದರು.
ಸರ್ಕಾರವು ಕೋವಿಡ್ ಪರಿಸ್ಥಿತಿಯನ್ನು ಗಂಟೆಗೊಮ್ಮೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಯಾವುದೇ ಸಮಸ್ಯೆಯಾಗದಂತೆ ಸರಕಾರ ಪರ್ಯಾಯ ವ್ಯವಸ್ಥೆ ಮಾಡಲಿದೆ ಎಂದರು.
ಜನರು ಭಯಪಡುವ ಅಗತ್ಯವಿಲ್ಲ, ನಾವು ಒಂದು ವರ್ಷದ ಲಾಕ್‌ಡೌನ್ ನಂತರ ಸಾಮಾನ್ಯ ಶಾಲೆಗಳನ್ನು ಪ್ರಾರಂಭಿಸಿದ್ದೇವೆ. ಒಂದು ವೇಳೆ ಶಾಲೆಗಳನ್ನು ಮತ್ತೆ ಮುಚ್ಚಿದರೆ ಮಕ್ಕಳನ್ನು ತರಗತಿಗೆ ಕರೆತರುವುದು ಕಷ್ಟವಾಗುತ್ತದೆ ಎಂದರು.
ಕೋವಿಡ್ ಪರಿಸ್ಥಿತಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಕಂಡುಬಂದಲ್ಲಿ ಶಿಕ್ಷಣ ಇಲಾಖೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಪೋಷಕರಿಗೆ ಸ್ಪಷ್ಟನೆ ನೀಡಿದರು.
ಸೋಂಕು ಹೆಚ್ಚಳ ಸ್ವಲ್ಪ ಆತಂಕ ತಂದಿದೆ
ಸೋಂಕು ಕಂಡುಬಂದಿರುವುದು ವಸತಿ ಶಾಲೆಗಳಲ್ಲಿ , ನವೋದಯ ಶಾಲೆಗಳಲ್ಲಿ, 1-10 ಸರಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ವಸತಿ, ನವೋದಯ ಶಾಲೆಗಳಲ್ಲಿ ಸೋಂಕು ಹಿನ್ನೆಲೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಮಕ್ಕಳಿಗೆ ತೊಂದರೆ ಆಗಿಲ್ಲ, ಚಿಕಿತ್ಸೆ ಕೊಡಲಾಗಿದೆ. ಇಬ್ಬರು ಶಿಕ್ಷಕರಿಗೆ ಸೋಂಕು ತಗುಲಿದೆ.ಇವತ್ತು ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ಇರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ.ನಾನು ನಾಳೆ, ನಾಡಿದ್ದು, ನೀತಿ ಸಂಹಿತೆ ಮುಗಿದ ಬಳಿಕ ಸೋಂಕಿತ ವಸತಿ, ನವೋದಯ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ವಸತಿ ಶಾಲೆಗಳಲ್ಲಿ ಎಸ್.ಓ.ಪಿ ಪಾಲನೆ ಆಗುತ್ತಿದೆಯೇ ಇಲ್ಲವಾ ಸ್ವತಃ ಡಿಸಿಗಳೇ ಪರಿಶೀಲಿಸಲು ಹೇಳಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.