ಮೀಸಲಾತಿ ವಿಚಾರದಲ್ಲಿ ವಾಸ್ತವ ಅರಿತು ಸರ್ಕಾರ ತೀರ್ಮಾನ ಕೈಗೊಳ್ಳಬೇಕು: ಕುಮಾರಸ್ವಾಮಿ

Team Udayavani, Feb 6, 2021, 6:55 PM IST

hdk

ಬೆಂಗಳೂರು: ಮೀಸಲಾತಿಗೆ ಒತ್ತಾಯಿಸಿ ಹಲವು ಸಮುದಾಯಗಳ ಮಠಾಧಿಪತಿಗಳು ಪಾದಯಾತ್ರೆ ನಡೆಸಿ ಹೋರಾಟ ಆರಂಭಿಸಿದ್ದು, ವಾಸ್ತವವಾಗಿ ಯಾವ ತೀರ್ಮಾನ ಕೈಗೊಳ್ಳಬೇಕು ಎಂಬುದನ್ನು ಸರ್ಕಾರ ನಡೆಸುವವರು ನಿರ್ಧರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ನಗರದಲ್ಲಿನ ಜೆಡಿಎಸ್‌ ಕಚೇರಿ “ಜೆ.ಪಿ. ಭವನ’ದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿಗೆ ಆಗ್ರಹಿಸಿ ನಾನಾ ಸಮುದಾಯಗಳು ಹೋರಾಟ ಆರಂಭಿಸಿವೆ. ಅದರ ಸಾಧಕ- ಬಾಧಕ ಪರಿಶೀಲಿಸಿ ವೈಜ್ಞಾನಿಕವಾಗಿ ಹಾಗೂ ಸಾಂವಿಧಾನಿಕ ವ್ಯವಸ್ಥೆಯಲ್ಲಿ ಯಾವ ರೀತಿ ಈ ವರ್ಗದ ಬೇಡಿಕೆಗಳನ್ನು ಈಡೇರಿಸಲು ಅವಕಾಶಗಳಿವೆ ಎಂಬುದನ್ನು ಕಾನೂನುತಜ್ಞರೊಂದಿಗೆ ಚರ್ಚಿಸಿ ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ಮೀಸಲಾತಿಗಾಗಿ ಮಠಾಧಿಪತಿಗಳ ಹೋರಾಟದ ಬಗ್ಗೆ ಹೆಚ್ಚು ಜ್ಞಾನ ಇರುವವರು, ತಿಳಿದವರು ಚರ್ಚೆ ಮಾಡಲಿ ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದರು.

ಪಕ್ಷದಿಂದ ಕೆಲ ಶಾಸಕರು ದೂರವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಎಚ್‌.ಡಿ. ಕುಮಾರಸ್ವಾಮಿ, ಯಾರೂ ದೂರ ಇಲ್ಲ. ಕೆಲವರು ಈಗಾಗಲೇ ತುಂಬ ದೂರ ಹೋಗಿಯಾಗಿದೆ. ಆ ವಿಚಾರದಲ್ಲಿ ಪದೇ ಪದೇ ಚರ್ಚಿಸುವುದು ಅನಗತ್ಯ. ಈಗಾಗಲೇ ಹಲವು ಪ್ರಮುಖರು ಹಲವು ಸುತ್ತಿನ ಮಾತುಕತೆ ನಡೆಸಿ ಚರ್ಚಿಸುವ ಕೆಲಸವೂ ಮುಗಿದಿದೆ. ಅದು ನನಗೆ ಸಂಬಂಧಿಸಿದ್ದಲ್ಲ. ನಾನು ಯಾರ ಬಗ್ಗೆಯೂ ಚರ್ಚಿಸಲು ಹೋಗುವುದಿಲ್ಲ. ಕಾರ್ಯಕರ್ತರ ಜೊತೆಗೂಡಿ ಪಕ್ಷ ಸಂಘಟನೆ ಮಾಡುವುದು ಹೇಗೆ ಎಂಬುದು ನನ್ನ ಮುಂದಿರುವ ಸವಾಲು ಎಂದಷ್ಟೇ ಹೇಳಿದರು.

ಇದನ್ನೂ ಓದಿ:ಮೀಸಲಾತಿ ಹೋರಾಟದ ವಿಚಾರವಾಗಿ ಸಿದ್ದರಾಮಯ್ಯ ನಡವಳಿಕೆ ಆಕ್ರೋಶ ತರಿಸುವಂತದ್ದು..: ಈಶ್ವರಪ್ಪ

ಹಾಸನದ ವಿಮಾನನಿಲ್ದಾಣ ಕಾಮಗಾರಿ ತ್ವರಿತವಾಗಿ ಕೈಗೊಳ್ಳುವಂತೆ ಕೋರಿ ಶಾಸಕ ಪ್ರೀತಂ ಗೌಡ ಮುಖ್ಯಮಂತ್ರಿಗಳಿಗೆ ಜ.25ರಂದು ಬರೆದ ಪತ್ರ ಬಹಿರಂಗವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಹಾಸನದ ಶಾಸಕರು ತಮ್ಮಿಂದಾಗಿ ಹಾಸನದ ವಿಮಾನನಿಲ್ದಾಣ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂಬರ್ಥದಲ್ಲಿ ಪತ್ರ ಬಿಡುಗಡೆ ಮಾಡಿದ್ದು, ಅವರಿಗೆ ಅಭಿನಂದಿಸುತ್ತೇನೆ. ಅಭಿವೃದ್ಧಿ ಬಗೆಗಿನ ಅವರ ಕಾಳಜಿಗೆ ಅಭಿನಂದಿಸೋಣ ಎಂದು ತಿಳಿಸಿದರು.

ದೆಹಲಿ ಗಡಿಯಲ್ಲಿ 70 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ರೈತ ಸಂಘಟನೆಗಳೂ ಹೆದ್ದಾರಿ ಬಂದ್‌ಗೆ ಮುಂದಾಗಿವೆ. ರೈತರ ಪ್ರತಿಭಟನೆ ಕುರಿತ ಚರ್ಚೆಗಿಂತಲೂ ಮುಖ್ಯವಾಗಿ ಪ್ರಧಾನಿಯವರು ಪ್ರತಿಭಟನಾಕಾರರನ್ನು ನೇರವಾಗಿ ಭೇಟಿಯಾಗಿ ಮಾತನಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.