![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Mar 3, 2023, 7:02 PM IST
ಕುಣಿಗಲ್ : ದೇವಾಲಯಕ್ಕೆ ಹೋಗಿ ದೇವರ ದರ್ಶನ ಪಡೆದು ದ್ವಿಚಕ್ರ ವಾಹನದಲ್ಲಿ ವಾಪಾಸಾಗುತ್ತಿದ್ದ ವೇಳೆ ಬೈಕ್‌ಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಬೈಕ್ ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಹಳೆಯ ರಾಷ್ಟ್ರೀಯ ಹೆದ್ದಾರಿ 75ರ ತಾಲೂಕಿನ ಬಿಳಿದೇವಾಲಯ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದೆ.
ಬೆಂಗಳೂರು ವಿಜಯನಗರವಾಸಿ ಗೀತಾ (33) ಮೃತ ದುರ್ದೈವಿ, ಆಕೆಯ ಪತಿ ಸಂತೋಷ್ ಹಾಗೂ ಮಗ ತರುಣ್ ಗಾಯಗೊಂಡವರು.
ಸಂತೋಷ್ ಹಾಗೂ ಆತನ ಪತ್ನಿ ಗೀತಾ ಮತ್ತು ಮಗ ತರುಣ್‌ನೊಂದಿಗೆ ದ್ವಿಚಕ್ರ ವಾಹನದಲ್ಲಿ ಶುಕ್ರವಾರ ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಬೆಂಗಳೂರಿನ ವಿಜಯನಗರದಿಂದ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಗ್ರಾಮದ ಬೆಲ್ವರಮ್ಮ, ಹರಿಮಾರಮ್ಮ ದೇವಾಲಯಕ್ಕೆ ಬಂದು, ಪೂಜೆ ಮುಗಿಸಿಕೊಂಡು ವಾಪಸ್ಸ್ ಸಂಜೆ ಬೆಂಗಳೂರಿಗೆ ತೆರಳುತ್ತಿರಬೇಕಾದರೆ ಬಿಳಿದೇವಾಲಯ ಗ್ರಾಮದ ಬಳಿ ನಾಯಿ ಬೈಕ್‌ಗೆ ಅಡ್ಡ ಬಂದಿದೆ ಎನ್ನಲಾಗಿದ್ದು ನಾಯಿಯನ್ನು ಉಳಿಸಲು ಯತ್ನಿಸಿದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ತೀವ್ರವಾಗಿ ಗಾಯಗೊಂಡ ಸಂತೋಷ್ ಅವರನ್ನು ಕುಣಿಗಲ್ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ, ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.