ಬೈಕ್ ಗೆ ಕಾರು ಢಿಕ್ಕಿ: ಮೂವರು ಸವಾರರಿಗೆ ಗಾಯ ; ಮಾನವೀಯತೆ ಮೆರೆದ ತಹಶೀಲ್ದಾರ್
Team Udayavani, Mar 2, 2023, 7:30 PM IST
ಕುಷ್ಟಗಿ: ಇಲ್ಲಿನ ತಹಶೀಲ್ದಾರ ಕಚೇರಿ ಸಮೀಪ ಗುರುವಾರ ಸಂಜೆ ಕಾರು ಢಿಕ್ಕಿಯಾಗಿ ಬೈಕ್ ಸವಾರ ಮೂವರು ಯುವಕರಿಗೆ ಗಾಯ ಗೊಂಡಿದ್ದಾರೆ. ಗಾಯಾಳುಗಳು ನರಳಾಡುವ ಸಂದರ್ಭದಲ್ಲಿ ಕುಷ್ಟಗಿ ತಹಶೀಲ್ದಾರ ಅವರು, ತಮ್ಮ ಜೀಪಿನಲ್ಲಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
ಮೂವರು ಯುವಕರು ಚಳಗೇರಾದಿಂದ ಒಂದೇ ಬೈಕಿನಲ್ಲಿ ಸ್ವಗ್ರಾಮಕ್ಕೆ ಹೊರಟಿದ್ದರು. ಇದೇ ವೇಳೆ ಕಾರು ಚಾಲಕನ ನಿರ್ಲಕ್ಷ ಚಾಲನೆಯಿಂದ ಮುಂದೆ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಾಗ ಬಿದ್ದು ಗಾಯಗೊಂಡಿದ್ದಾರೆ. 108 ವಾಹನ ಬರಲು ವಿಳಂಭವಾಗಿದೆ. ಅದೇ ವೇಳೆ ನಿಡಶೇಸಿ ಗ್ರಾಮಕ್ಕೆ ಸ್ಥಳದ ಸ್ಥಾನಿಕ ಪರಿಶೀಲನೆಗೆ ಹೊರಟಿದ್ದ ತಹಶೀಲ್ದಾರ ಕೆ. ರಾಘವೇಂದ್ರರಾವ್ ಅವರು, ಕೂಡಲೇ ತಮ್ಮ ಜೀಪಿನಲ್ಲಿ ಮೂವರು ಗಾಯಾಳುಗಳನ್ನು ಕುಷ್ಟಗಿ ತಾಲೂಕಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆಗೆ ಕರೆದೊಯ್ಯಲಾಗಿದೆ.
ಮೂವರು ಯುವಕರು ಹುಲಿಯಾಪೂರ ಗ್ರಾಮದ ರಾಜೇಸಾಬ್ ಯಮನೂರಸಾಬ್ ತಾವರಗೇರಾ, ಕಾಶೀಂಸಾಬ್ ಚಂದುಸಾಬ್ ಬೋಗಾಪೂರ ಹಾಗೂ ಕುಮಾರ ದೇವಪ್ಪ ಕಂಪ್ಲಿ ಎಂದು ಗುರುತಿಸಲಾಗಿದ್ದು, ಜೂಲಕಟ್ಟಿ ಗ್ರಾಮದ ಬಳಿ ಸರ್ಕಾರಿ ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗಿ ಸ್ವಗ್ರಾಮಕ್ಕೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.