ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡ ಮಹಿಳೆ; ಬಲೆ ಹೆಣೆದು ಬಂಧಿಸಿದ ಪೊಲೀಸರು

Team Udayavani, Nov 27, 2020, 9:00 PM IST

ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡ ಮಹಿಳೆ; ಬಲೆ ಹೆಣೆದು ಬಂಧಿಸಿದ ಪೊಲೀಸರು

ಬೆಂಗಳೂರು: ಮನೆ ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ನಗ್ಮಾ (24)ಎಂಬಾಕೆಯನ್ನು ಬಂಧಿಸುವಲ್ಲಿ ಚಂದ್ರಲೇಔಟ್‌ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ನಗ್ಮಾ ಬಂಧನನಿಂದ ಐದು ಕಳವು ಪ್ರಕರಣಗಳು ಪತ್ತೆಯಾಗಿದ್ದು 6.46 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈ ಹಿಂದೆ ನಯಾಜ್‌ ಖಾನ್‌ ಹಾಗೂ ಅಪ್ಸರ್‌ ಖಾನ್‌ ಎಂಬುವವರನ್ನು ಬಂಧಿಸಿ ಅವರಿಂದ ಕಳವು ಆಭರಣ ಜಪ್ತಿ ಮಾಡಿಕೊಂಡಿದ್ದರು. ಈ ವೇಳೆ ಆರೋಪಿಗಳು ನಗ್ಮಾ ಕೂಡ ತಮ್ಮ ಜತೆ ಕಳವು ಕೃತ್ಯಗಳಲ್ಲಿ ಭಾಗವಹಿಸಿದ್ದು ಆಕೆಯ ಬಳಿ ಮತ್ತಷ್ಟು ಕಳವು ಮಾಲಿದೆ ಎಂದು ಹೇಳಿದ್ದರು.

ಇದನ್ನೂ ಓದಿ:ಪಬ್ ಜಿ ಹೊಸ ಆವೃತ್ತಿ ಭಾರತದಲ್ಲಿ ಈ ವರ್ಷಾಂತ್ಯ ಬಿಡುಗಡೆ ?: ಸಂಸ್ಥೆ ಹೇಳುವುದೇನು ?

ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಇನ್ಸ್‌ಪೆಕ್ಟರ್‌ ಬ್ರಿಜೇಶ್‌ ಮ್ಯಾಥ್ಯೂ ನೇತೃತ್ವದ ತಂಡ, ಆರೋಪಿ ನಗ್ಮಾಳನ್ನು ಬಂಧಿಸಿ ಆಕೆಯಿಂದ ಕಳವು ಆಭರಣಗಳನ್ನು ಜಪ್ತಿ ಮಾಡಿಕೊಂಡಿದೆ.

ಕಳ್ಳತನವೇ ಕಸುಬು!
ಆನೆಪಾಳ್ಯ ನಿವಾಸಿಯಾದ ನಗ್ಮಾ ಹಲವು ವರ್ಷಗಳಿಂದ ಕಳ್ಳತನವನ್ನೇ ಕಸುಬಾಗಿಸಿಕೊಂಡಿದ್ದಾಳೆ. ಆರೋಪಿಗಳಾದ ನಯಾಜ್‌ ಹಾಗೂ ಅಪ್ಸರ್‌ ಖಾನ್‌ ಜತೆ ಸೇರಿ ಕಳವು ಕೃತ್ಯಗಳನ್ನು ಮಾಡುತ್ತಿದ್ದಳು. ಆರೋಪಿಗಳ ಹೆಂಡತಿಯಂತೆ ನಟಿಸುತ್ತಾ ನಗರದ ಹಲವು ಬಡಾವಣೆಗಳಲ್ಲಿ ಬಾಡಿಗೆ ಮನೆ ಕೇಳುವ ನೆಪದಲ್ಲಿ ಸುತ್ತಾಡುತ್ತಿದ್ದಳು. ಹೊರಗಡೆಯಿಂದ ಬಾಗಿಲು ಬಡಿಯುತ್ತಿದ್ದರು ಈ ವೇಳೆ ಮನೆಯಲ್ಲಿ ಯಾರಾದರೂ ಇರುವುದು ಕಂಡು ಬಂದತೆ ನಮ್ಮದು ಕುಟುಂಬ ಮನೆ ಬಾಡಿಗೆ ಬೇಕಿದೆ ಎಂದು ಹೇಳಿ ಸಬೂಬು ಹೇಳಿ ಅಲ್ಲಿಂದ ತೆರಳುತ್ತಿದ್ದರು.

ಬೀಗ ಹಾಕಿದ ಮನೆಗಳು ಕಂಡು ಬಂದರೆ ಬೀಗ ಒಡೆದು ಒಳನುಗ್ಗಿ ಕಳವು ಮಾಡುತ್ತಿದ್ದರು. ಈ ವೇಳೆ ನಗ್ಮಾ ಹೊರಗಡೆ ನಿಂತು ಯಾರಾದರೂ ಬಂದರೆ ಮಾಹಿತಿ ನೀಡುತ್ತಿದ್ದಳು. ಕಳವು ಮಾಡಿದ ಆಭರಣಗಳಲ್ಲಿ ಎಲ್ಲರೂ ಹಂಚಿಕೊಳ್ಳುತ್ತಿದ್ದರು.
ಆರೋಪಿ ನಗ್ಮಾ ಈ ಹಿಂದೆಯೂ ಎಚ್‌ಎಎಲ್‌ ಹಾಗೂ ಬನಶಂಕರಿ ಠಾಣಾ ವ್ಯಾಪ್ತಿಗಳಲ್ಲಿ ಕಳ್ಳತನ ಮಾಡಿ ಬಂಧಿತಳಾಗಿದ್ದಳು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು .

ಟಾಪ್ ನ್ಯೂಸ್

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9(1

Kundapura: ಟಿಟಿ ರೋಡ್‌ನ‌ಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

12-udupi

Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.