ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ
Team Udayavani, Jan 20, 2022, 3:57 PM IST
ಲಾಹೋರ್ : ಪಾಕಿಸ್ಥಾನದ ಲಾಹೋರ್‌ನ ಲೋಹಾರಿ ಗೇಟ್ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಐಜಿ ಆಪರೇಷನ್ ಲಾಹೋರ್ ಡಾ.ಮುಹಮ್ಮದ್ ಅಬಿದ್ ಖಾನ್, ಘಟನೆಯಲ್ಲಿ 23 ಜನರು ಗಾಯಗೊಂಡಿದ್ದಾರೆ. ತನಿಖೆ ಆರಂಭಿಕ ಹಂತದಲ್ಲಿದೆ ಎಂದಿದ್ದಾರೆ.
ಇದು ಹೂತಿಟ್ಟ ಸ್ಪೋಟಕ ಸಾಧನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಇದು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಅಥವಾ ಟೈಮ್ ಬಾಂಬ್ ಎಂಬುದು ದೃಢಪಟ್ಟಿಲ್ಲ.
ಸ್ಫೋಟದ ರಭಸಕ್ಕೆ ಸಮೀಪದ ಕಟ್ಟಡಗಳ ಕಿಟಕಿ ಗಾಜುಗಳು ಒಡೆದಿದ್ದು, ಸ್ಫೋಟದ ಸ್ಥಳದ ಬಳಿ ನಿಲ್ಲಿಸಲಾಗಿದ್ದ ಹಲವಾರು ದ್ವಿಚಕ್ರವಾಹನಗಳಿಗೆ ಹಾನಿಯಾಗಿದೆ.ಬಾಂಬ್ ನಿಷ್ಕ್ರಿಯ ದಳವನ್ನು ತನಿಖೆಗಾಗಿ ಪ್ರದೇಶಕ್ಕೆ ಕಳುಹಿಸಲಾಗಿದೆ. ಮೂವರು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.