ನಟಿ ಲಕ್ಷ್ಮೀ ಅವರಿಗೆ ಜೀವಮಾನ ಸಾಧನೆಗೆ ಡಾ. ರಾಜ್ ಕುಮಾರ್ ಪ್ರಶಸ್ತಿ ಪ್ರದಾನ
Team Udayavani, Apr 24, 2022, 9:11 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಡಾ. ರಾಜ್ ಕುಮಾರ್ ಅವರ ಜನ್ಮ ದಿನಾಚರಣೆ ಹಾಗೂ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದರು.
ಚಿತ್ರನಟಿ ಲಕ್ಷ್ಮೀ ಅವರಿಗೆ ಜೀವಮಾನ ಸಾಧನೆಗೆ ಡಾ. ರಾಜ್ ಕುಮಾರ ಪ್ರಶಸ್ತಿ ಪ್ರದಾನ ಮಾಡಿದರು. ಖ್ಯಾತ ನಿರ್ದೇಶಕ ಎಸ್ ನಾರಾಯಣ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಪ್ರದಾನ ಮಾಡಿದರು. ವಿಷ್ಣುವರ್ಧನ ಪ್ರಶಸ್ತಿ ದಿ. ಜಿ ಎಂ ಲಕ್ಷ್ಮೀಪತಿ ಅವರ ಪರವಾಗಿ ಅವರ ಪುತ್ರ ರಾಮ್ ಪ್ರಸಾದ ಅವರು ಸ್ವೀಕರಿಸಿದರು.
ಚಿತ್ರ ನಗರಿ ಕಾಮಗಾರಿ ಪ್ರಾರಂಭ
ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಿಎಂ, ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು.
ಯಾರೂ ಮನವಿ ಮತ್ತು ಬೇಡಿಕೆ ಸಲ್ಲಿಸದಿದ್ದರೂ 2022-23 ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ 125 ಕನ್ನಡ ಮತ್ತು ಪ್ರಾದೇಶಿಕ ಚಲನಚಿತ್ರಗಳಿಗೆ ಬದಲಾಗಿ 200 ಚಲನಚಿತ್ರಗಳಿಗೆ ಸಹಾಯಧನ ನೀಡಲು ಅವಕಾಶ ಕಲ್ಪಿಸಿದ್ದೇವೆ ಎಂದು ತಿಳಿಸಿದರು.
2017 ನೇ ಸಾಲಿನ ಕನ್ನಡ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್ ಕುಮಾರ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಮ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಆಯುಕ್ತ ಡಾ. ಪಿ ಎಸ್ ಹರ್ಷ, ಚಿನ್ನೇಗೌಡ ಮತ್ತು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.