ಹತ್ತು ದಿನದೊಳಗೆ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಜಾರಿ: ಅಶೋಕ್
Team Udayavani, Jun 18, 2020, 8:42 PM IST
ಬೆಂಗಳೂರು: ವ್ಯವಸಾಯ ಮತ್ತು ಕೈಗಾರಿಕೆ ಒಟ್ಟಿಗೆ ಹೋದಾಗ ಮಾತ್ರ ರಾಜ್ಯದ ಬೆಳವಣಿಗೆ ಸಾಧ್ಯ. ಆ ಹಿನ್ನೆಲೆಯಲ್ಲಿ ಹತ್ತು ದಿನಗಳೊಳಗೆ ಭೂ ಸುಧಾರಣೆ ತಿದ್ದುಪಡಿ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕ ಮಹಾಸಂಸ್ಥೆ ಗುರುವಾರ ಹಮ್ಮಿಕೊಂಡಿದ್ದ “ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಹಿಂದಿನ ಕಾಯ್ದೆಯು ಕೆಲವು ಅಧಿಕಾರಿಗಳು ಹಣ ಮಾಡಿಕೊಳ್ಳಲು ಅನುಕೂಲವಾಗಿತ್ತೇ ಹೊರತು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿರಲಿಲ್ಲ. ಹೀಗಾಗಿಯೇ ಬಿಜೆಪಿ ಸರಕಾರ ಈ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ.
ಈಗಾಗಲೇ ಶೇ. 80ರಷ್ಟು ಜನ ಕಾಯ್ದೆಯನ್ನು ಸ್ವಾಗತಿಸುತ್ತಿದ್ದು, ಶೇ. 20ರಷ್ಟು ಮಂದಿ ರಾಜಕೀಯ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದರು.
ಆಂಧ್ರಪ್ರದೇಶ, ತಮಿಳುನಾಡು, ಗುಜರಾತ್, ಮಹಾರಾಷ್ಟ್ರ ಸಹಿತ ಹಲವು ರಾಜ್ಯಗಳಲ್ಲಿ ಈ ರೀತಿಯ ಕಾಯ್ದೆಯಿಲ್ಲ. ಆ ಹಿನ್ನೆಲೆಯಲ್ಲಿ ಆ ರಾಜ್ಯಗಳು ಕೃಷಿ ಮತ್ತು ಕೈಗಾರಿಕೆಗಳ ವಿಚಾರದಲ್ಲಿ ನಮ ¾ರಾಜ್ಯಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿ ಪ್ರಗತಿ ಸಾಧಿಸಿವೆ. ರಾಜ್ಯದಲ್ಲಿ ಕೃಷಿ ಬೆಳವಣಿಗೆ ಜತೆಗೆ ಯುವಕರಿಗೆ ಉದ್ಯೋಗ ಕೂಡ ದೊರೆಯಬೇಕು ಎಂಬ ನಿಟ್ಟಿನಲ್ಲಿ ಸರಕಾರ ಈ ಹೆಜ್ಜೆಯಿರಿಸಿದೆ ಎಂದರು.
1974ರಲ್ಲಿ ಭೂ ಸುಧಾರಣೆ ಕಾಯ್ದೆ ಜಾರಿಯಾದಂದಿನಿಂದ ಇಲ್ಲಿಯವರೆಗೂ ನಿಯಮ ಉಲ್ಲಂಘನೆ ಸಂಬಂಧಿಸಿ ಸುಮಾರು 83 ಸಾವಿರ ಪ್ರಕರಣಗಳು ದಾಖಲಾಗಿದ್ದು, 1.76 ಲಕ್ಷ ಎಕರೆ ಪ್ರದೇಶವನ್ನು ವಾಪಸ್ ಪಡೆಯಬೇಕಿದೆ. ಆದರೆ ಒಂದು ಎಕರೆ ಪ್ರದೇಶವನ್ನು ಕೂಡ ವಾಪಸ್ ಪಡೆದಿಲ್ಲ. ಈವರೆಗೂ ಅಧಿಕಾರಿಗಳು ಲಾಭ ಮಾಡಿಕೊಳ್ಳಲು ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದರು.
ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿಯ ಹಿನ್ನೆಲೆಯಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬೀಳಲಿದೆ.
ಕೈಗಾರಿಕೆಗಳು ಕೂಡ ಹಳ್ಳಿಗಳತ್ತ ಮುಖ ಮಾಡಲಿವೆ. ರಾಜ್ಯದಲ್ಲಿ ಕೈಗಾರಿಕೆಗೆ ಶೇ. 2ರಷ್ಟು ಮಾತ್ರ ಭೂಮಿ ಬಳಕೆಯಾಗಿದ್ದು, ಒಂದು ಕೋಟಿ ಜನರಿಗೆ ಉದ್ಯೋಗ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಕೃಷಿ ವಲಯದಲ್ಲೂ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.
ಎಫ್‌ಕೆಸಿಸಿಐ ಅಧ್ಯಕ್ಷ ಸಿ. ಆರ್. ಜನಾರ್ದನ ಮಾತನಾಡಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದಾಗಿ ರೈತರಿಗೆ ಯಾವುದೇ ಪ್ರತಿಕೂಲ ಪರಿಣಾಮವಾಗುವುದಿಲ್ಲ. ಇದರಿಂದಾಗಿ ಕೃಷಿ ಚಟುವಟಿಕೆಗಳು ಮತ್ತಷ್ಟು ದ್ವಿಗುಣಗೊಳ್ಳುವ ಅವಕಾಶವಿದೆ. ಕೈಗಾರಿಕೆಗಳಿಗೆ ಕೃಷಿ ಭೂಮಿಯನ್ನು ಖರೀದಿಸಲು ಸರಕಾರ ಮಾನದಂಡಗಳನ್ನು ರೂಪಿಸಿದ್ದು, ಅಗತ್ಯತೆಯ ಆಧಾರದಲ್ಲಿ ಅನುಮೋದನೆ ದೊರೆಯುತ್ತದೆ. ಆ ಹಿನ್ನೆಲೆಯಲ್ಲಿ ಎಫ್ಕೆಸಿಸಿಐ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತದೆ ಎಂದು ತಿಳಿಸಿದರು.
ಕೈಗಾರಿಕೆ ಉಪ ಸಮಿತಿ ಅಧ್ಯಕ್ಷ ಸತೀಶ್, ಎಫ್ಕೆಸಿಸಿಐನ ಹಿರಿಯ ಉಪಾಧ್ಯಕ್ಷ ಪೆರಿಕಲ್ ಸುಂದರ್, ಐ.ಎಸ್.ಪ್ರಸಾದ್ ಸಹಿತ ಮತ್ತಿತರರು ಉಪಸ್ಥಿತರಿದ್ದರು.
ಸರಕಾರದ ಆದಾಯ ಇಳಿಕೆ
ರಾಜ್ಯಕ್ಕೆ ಪ್ರತಿ ತಿಂಗಳು ಸುಮಾರು 10 ಸಾವಿರ ಕೋ. ರೂ.ಆದಾಯ ಬರುತ್ತಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ 3 ಕೋ. ರೂ.ಕೂಡ ನಿರೀಕ್ಷೆ ಮಾಡುವುದು ಈಗ ಕಷ್ಟವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಭಾರೀ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.