ಮತದಾರರ ಮಾಹಿತಿ ಕಳವು: ಸಮಗ್ರ ತನಿಖೆ, ಮರು ಪರಿಷ್ಕರಣೆಗೆ; ಸಿದ್ದರಾಮಯ್ಯ-ಡಿಕೆಶಿ ಒತ್ತಾಯ
Team Udayavani, Nov 27, 2022, 7:50 AM IST
ಬೆಂಗಳೂರು: ಮತದಾರರ ಮಾಹಿತಿ ಕಳವು, ಚಿಲುಮೆ ಮಾದರಿ ಹಗರಣ ಇಡೀ ರಾಜ್ಯಾದ್ಯಂತ ನಡೆದಿದ್ದು ಲಕ್ಷಾಂತರ ಮತದಾರರ ಹೆಸರು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಮೂರು ಕ್ಷೇತ್ರಗಳಷ್ಟೇ ಅಲ್ಲದೆ, 28 ಕ್ಷೇತ್ರ ಜತೆಗೆ ರಾಜ್ಯಾದ್ಯಂತ ಮುಸ್ಲಿಂ, ದಲಿತ, ಹಿಂದುಳಿದ ವರ್ಗ ಸಮುದಾಯಗಳ ಮತ ಷಡ್ಯಂತ್ರ ರೂಪಿಸಿ ತೆಗೆದು ಹಾಕಲಾಗಿದೆ. ಹೀಗಾಗಿಯೇ ನಾವು ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆಗ್ರಹಿಸಿದ್ದೇವೆ ಎಂದು ಹೇಳಿದರು.
ಕೇಂದ್ರ ಚುನಾವಣಾ ಆಯೋಗದ ಕ್ರಮ ಸ್ವಾಗತಾರ್ಹ. ದೂರು ಕೊಟ್ಟಿದ್ದಕ್ಕೆ ನಮಗೆ ಪ್ರಥಮ ಹಂತದಲ್ಲಿ ನ್ಯಾಯ ಸಿಕ್ಕಿದೆ. ಆದರೆ, ಇದರ ವ್ಯಾಪ್ತಿ ಬೃಹತ್ ಪ್ರಮಾಣದ್ದಾಗಿದೆ. ಇದರ ಹಿಂದಿರುವ ಸಚಿವರು, ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಚಿಲುಮೆ ಸಂಸ್ಥೆಯ ಜತೆ ಸಂಬಂಧ ಹೊಂದಿದ್ದವರು, ಹಣ ವರ್ಗಾವಣೆ ಎಲ್ಲದರ ಬಗ್ಗೆ ವ್ಯಾಪಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಯಾವುದೇ ಮತವನ್ನು ಸೇರ್ಪಡೆ ಮಾಡುವಾಗ ಅಥವಾ ತೆಗೆಯುವಾಗ ಆಯಾ ವ್ಯಕ್ತಿಯ ಅರ್ಜಿ ಇರಬೇಕು. ಬಿಎಲ್‌ಒಗಳನ್ನು ಯಾರು ನೇಮಕ ಮಾಡಿದ್ದರು. ಈ ಬಿಎಲ್‌ಒಗಳನ್ನು ಕೇವಲ 3 ಕ್ಷೇತ್ರ ಚುನಾವಣಾಧಿಕಾರಿಗಳು ಮಾತ್ರ ಮಾಡಿಲ್ಲ. ಎಲ್ಲಾ 28 ಕ್ಷೇತ್ರಗಳ ಚುನಾವಣಾಧಿಕಾರಿಗಳೂ ಮಾಡಿದ್ದಾರೆ. ಸುಮಾರು 6-7 ಸಾವಿರ ಮಂದಿಗೆ ಈ ಬಿಎಲ್‌ಒ ಗುರುತಿನ ಚೀಟಿ ಕೊಟ್ಟಿದ್ದಾರೆ. ಇದರ ಮೂಲ ಕಿಂಗ್ ಪಿನ್ ಆಗಿ ಸರ್ಕಾರದ ಸಚಿವರು, ಶಾಸಕರಿಲ್ಲದೇ ಈ ಅಕ್ರಮ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಸೋಲುವ ಭೀತಿಯಿಂದಲೇ ಬಿಜೆಪಿ ಸರ್ಕಾರವು ಪಾಲಿಕೆ ಚುನಾವಣೆ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆಯನ್ನು ಮಾಡಿಲ್ಲ. ಮತದಾನ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುವುದಾದರೆ ಇಂತಹ ಭ್ರಷ್ಟ, ದುಷ್ಟ ಸರ್ಕಾರವನ್ನು ಜನ ಕ್ಷಮಿಸಬಾರದು. ಚುನಾವಣಾ ಆಯೋಗ ಉನ್ನತ ಮಟ್ಟದ ತನಿಖೆ ಮಾಡಿ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಬಂಧಿಸಬೇಕು.
-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ
ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಮರು ಪರಿಶೀಲನೆ ನಡೆಸಬೇಕು. 7 ಎ ನಮೂನೆ ಇಲ್ಲದೆ ಹೆಸರು ತೆಗೆದುಹಾಕಲಾಗಿದೆ. ಎರಡೆರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೆ ತೆಗೆದು ಹಾಕಲಿ. ನಮ್ಮ ಅಭ್ಯಂತರವಿಲ್ಲ. ಆದರೆ, ಬಿಜೆಪಿ ನಾಯಕರ ನಿರ್ದೇಶನದ ಮೇರೆಗೆ ಸಾವಿರಾರು ಹೆಸರು ತೆಗೆದುಹಾಕಿದ್ದು ಇದರ ಮರು ಪರಿಶೀಲನೆ ಮಾಡಬೇಕು.
– ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಮತದಾರರ ಮಾಹಿತಿ ಕಳುವು ಪ್ರಕರಣದಲ್ಲಿ ಸರ್ಕಾರ ಮುಕ್ತ ರೀತಿಯ ತನಿಖೆ ಮಾಡಿಸುತ್ತಿದೆ. ಯಾವುದೇ ಸಂಸ್ಥೆಯಾಗಲಿ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವುಗಳನ್ನು ಶಿಕ್ಷೆಗೆ ಒಳಪಡಿಸಲೆಂದೇ ಅವುಗಳನ್ನು ತನಿಖೆಗೆ ಆದೇಶ ಮಾಡಿರುವುದು. ಈಗಾಗಲೇ ಹಲವಾರು ಜನರ ವಿರುದ್ಧ ಕ್ರಮಕೈಗೊಂಡು ಬಂಧಿಸಲಾಗಿದೆ. ಚುನಾವಣಾ ಆಯೋಗ ಮುಖ್ಯವಾಗಿ ಡಿಲೀಟ್ ಆಗಿರುವ ಪ್ರಕರಣಗಳನ್ನು ಹಾಗೂ ಮತಪಟ್ಟಿಯನ್ನು ಮತ್ತೂಮ್ಮೆ ಪರಿಷ್ಕರಣೆ ಮಾಡಲು ತೀರ್ಮಾನಿಸಿದೆ. ಇದನ್ನು ಸ್ವಾಗತಿಸುತ್ತೇವೆ.
– ಬಸವರಾಜ ಬೊಮ್ಮಾಯಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.