ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆ, ಏ.8ಕ್ಕೆ ಕೌನ್ಸೆಲಿಂಗ್ :ಶಿಕ್ಷಣ ಇಲಾಖೆ ನಿರ್ಧಾರ
Team Udayavani, Apr 5, 2022, 3:26 PM IST
ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ ಕಾಲೇಜುಗಳಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.
ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಲಾಖೆಯಿಂದ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ವರ್ಗಾವಣೆಯಾಗಲಿರುವ ಉಪನ್ಯಾಸಕರ ಹೆಸರುಗಳನ್ನು ಪ್ರಕಟಿಸಲಾಗಿದೆ. ಇಲಾಖೆಯ ಇಎಂಐಎಸ್ ತಂತ್ರಾಂಶದಲ್ಲಿ ಲಭ್ಯವಿರುವ ಅಭ್ಯರ್ಥಿಗಳ ಸೇವಾ ವಿವರಗಳನ್ನು ಪರಿಗಣಿಸಿ, ಕೌನ್ಸೆಲಿಂಗ್ ಮೂಲಕ ವರ್ಗಾಯಿಸಲಾಗುವುದು. ಈ ಮಾಹಿತಿಯಲ್ಲಿ ಬದಲಾವಣೆ / ಆಕ್ಷೇಪಣೆ ಇದ್ದಲ್ಲಿ ಏ.6ರ ಒಳಗೆ ಇಲಾಖೆಯ ಇ-ಮೇಲ್ [email protected] ಗೆ ಸಲ್ಲಿಸಬಹುದು ಎಂದಿದ್ದಾರೆ.
ಇದನ್ನು ಆಧರಿಸಿ, ಏ.7ರಂದು ಹುದ್ದೆ ಸ್ಥಳಾಂತರ ಮತ್ತು ಹೆಚ್ಚುವರಿ ಕಾರ್ಯಭಾರ ಲಭ್ಯವಿರುವ ಕಾಲೇಜುಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಮರುದಿನ, ಅಂದರೆ ಏ.8ರಂದು ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಜಾತ್ರೆಯಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ : ಪೊಲೀಸರಿಂದ ಕಾರ್ಯಾಚರಣೆ
ನಿಯಮಗಳ ಪ್ರಕಾರ, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲೆ, ವಾಣಿಜ್ಯ ಮತ್ತು ಭಾಷಾ ವಿಷಯಗಳ ಬೋಧಕರಿಗೆ ವಾರಕ್ಕೆ 16 ಗಂಟೆ ಮತ್ತು ಪ್ರಾಯೋಗಿಕ ತರಗತಿಗಳಿರುವ ವಿಷಯಗಳ ಬೋಧಕರಿಗೆ 20 ಗಂಟೆಗಳ ಕಾರ್ಯಭಾರ ಇರಬೇಕು ಎಂದು ಅವರು ವಿವರಿಸಿದ್ದಾರೆ.
ವರ್ಗಾವಣೆ ಪ್ರಕ್ರಿಯೆಯಲ್ಲಿ ಸಾಧ್ಯವಾದಷ್ಟೂ ಮಟ್ಟಿಗೆ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿರುವ ವಲಯದೊಳಗೇ ವರ್ಗಾವಣೆ ಮಾಡಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.