Police: 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗಿನ ಲಿಯೋ ಇನ್ನಿಲ್ಲ
Team Udayavani, Dec 21, 2023, 9:25 PM IST
ಮಡಿಕೇರಿ: ಸುಮಾರು 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗು ಜಿಲ್ಲಾ ಪೊಲೀಸ್ ಘಟಕದ ಶ್ವಾನ ದಳ ವಿಭಾಗದ ಲಿಯೋ ಅನಾರೋಗ್ಯದಿಂದ ಮೃತಪಟ್ಟಿದೆ.
ಲಿಯೋ 2013 ನೇ ಫೆ.26 ರಿಂದ 10 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದೆ. ತನ್ನ ಸೇವಾ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆಯಲ್ಲಿ ವರದಿಯಾದ ಕ್ಲಿಷ್ಟಕರ ಪ್ರಕರಣಗಳ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಲಿಯೋ 46 ಅಪರಾಧಿಗಳನ್ನು ಪತ್ತೆ ಮಾಡಿದೆ. 22 ಪ್ರಕರಣಗಳಲ್ಲಿ ಅಪರಾಧಿಗಳ ಸುಳಿವು ನೀಡಿದೆ. 2018 ನೇ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಭೂಕಸಿತದಿಂದ ನಾಪತ್ತೆಯಾದ ನಾಲ್ವರ ಮೃತ ದೇಹಗಳನ್ನು ಪತ್ತೆ ಮಾಡಿದೆ. ಚೆಕ್ ಪೋಸ್ಟ್‌ಗಳಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಪ್ರಕರಣವನ್ನು ಬಯಲಿಗೆಳೆದಿದೆ.
ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 3 ಬಾರಿ ಹಾಗೂ ವಲಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 4 ಬಹುಮಾನವನ್ನು ಗೆದ್ದಿದೆ. ಲಿಯೋ ಕೊಡಗು ಪೊಲೀಸ್ ಘಟಕದಲ್ಲಿ ಒಟ್ಟು 10 ವರ್ಷ 9 ತಿಂಗಳ ಕಾಲ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ 2023 ನ.17 ರಂದು ರಂದು ಸೇವೆಯಿಂದ ನಿವೃತ್ತಿಯನ್ನು ಹೊಂದಿದೆ.
ಪೊಲೀಸ್ ಸಿಬ್ಬಂದಿಗಳಾದ ಮನಮೋಹನ.ಬಿ.ಪಿ ಹಾಗೂ ಶಿವ.ಎಂ.ಆರ್ ಅವರುಗಳು ಲಿಯೋನ ಹ್ಯಾಂಡ್ಲರ್‌ಗಳಾಗಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಇಂದು ಮೃತ ಲಿಯೋಗೆ ಅಂತಿಮ ಗೌರವ ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಲಿಯೋ ನೀಡಿದ ಅತ್ಯುತ್ತಮ ಸೇವೆಯನ್ನು ಸ್ಮರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.