ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಚಿರತೆ ದಾಳಿ: ಮಗು ಸೇರಿ ಮೂವರಿಗೆ ಗಾಯ
Team Udayavani, Jan 30, 2021, 8:32 PM IST
ಮಂಡ್ಯ: ಹಾಡಹಗಲೇ ರೈತ ಸೇರಿದಂತೆ 7 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಾಂಡವಪುರ ತಾಲೂಕಿನ ಪ್ರವಾಸಿ ತಾಣ ಮೇಲುಕೋಟೆಯ ಸಮೀಪದ ತೊಟ್ಟಿಲಮಡು ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಪಿ.ಹೊಸಹಳ್ಳಿ ಗ್ರಾಮದ ರೈತ ಜಯರಾಮು, ಮಹೇಶ್ ಹಾಗೂ ಅವರ 7 ವರ್ಷದ ಮಗು ವಿಕಾಸ್ ಗಾಯಗಳಾಗಿದ್ದು, ಮೇಲುಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಾಹ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಆಹಾರ ಹುಡುಕಿಕೊಂಡು ಬಂದ ಚಿರತೆ ದಾಳಿ ಮಾಡಲು ಮುಂದಾಗಿದೆ. ಆಗ ಈ ಮೂವರ ಮೇಲೆ ದಾಳಿಗೆ ಯತ್ನ ನಡೆಸಿದೆ ಈ ವೇಳೆ ತಪ್ಪಿಸಿಕೊಳ್ಳುವ ಭರದಲ್ಲಿ ಕಲ್ಲು ಬಂಡೆಗಳ ಮೇಲೆ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಭಾರತದ ವಿರುದ್ಧ ಪಿತೂರಿ; ಪಾಕಿಸ್ಥಾನ ನೌಕಾಪಡೆಗಾಗಿ ಚೀನದಿಂದ ಮತ್ತೊಂದು ಯುದ್ಧ ನೌಕೆ!
ಇದರಿಂದ ಮೇಲುಕೋಟೆ ಪ್ರವಾಸಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಆತಂಕ ಹೆಚ್ಚಾಗಿದ್ದು, ಚಿರತೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.