ಈಶ್ವರಪ್ಪ ನಿವೃತ್ತಿ ನಿರ್ಧಾರ ವಾಪಸ್ ಪಡೆಯಲಿ: ರೇಣುಕಾಚಾರ್ಯ
Team Udayavani, Apr 12, 2023, 6:00 AM IST
ಹೊನ್ನಾಳಿ: ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮ ಚುನಾವಣ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ತತ್‌ಕ್ಷಣ ವಾಪಸ್ ಪಡೆದು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಪಕ್ಷ ಕಟ್ಟಿ ಬೆಳೆಸಲು ಈಶ್ವರಪ್ಪ ಕೂಡ ಕಾರಣರಾಗಿದ್ದಾರೆ.
ಅವರ ಅನುಭವ, ಸೇವೆ ಪಕ್ಷಕ್ಕೆ ಅಗತ್ಯವಿದೆ. ಈಶ್ವರಪ್ಪನವರು ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 1989ರಲ್ಲಿ ವಿಧಾನಸಭೆ ಪ್ರವೇಶಿಸಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಲ್ಲದೆ ಉಪ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಿ ತಮ್ಮ ಘೋಷಣೆ ವಾಪಸ್ ಪಡೆಯಬೇಕು. ಮತ್ತೆ ಚುನಾವಣೆಯಲ್ಲಿ ಸ್ಪ ರ್ಧಿಸಿ ಗೆಲುವು ಸಾಧಿಸಬೇಕೆಂಬುದು ನನ್ನ ಆಶಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.