ಹೂಡಿಕೆದಾರರು ಬರಲಿ; ಉದ್ಯೋಗ ಹೆಚ್ಚಲಿ

ಪ್ರಸಕ್ತ ಸಾಲಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಶೇ.89 ಅನುದಾನ ಬಳಕೆ

Team Udayavani, Mar 1, 2021, 6:50 AM IST

ಹೂಡಿಕೆದಾರರು ಬರಲಿ; ಉದ್ಯೋಗ ಹೆಚ್ಚಲಿ

ಬೆಂಗಳೂರು: ಪ್ರಸಕ್ತ ಬಜೆಟ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಶೇ.89ರಷ್ಟು ಅನುದಾನ ಬಳಕೆ ಮಾಡಿ ಹೂಡಿಕೆದಾರರನ್ನು ಸೆಳೆಯುವ ಹಾಗೂ ಹೊಸ ಉದ್ಯೋಗ ಸೃಷ್ಟಿಸುವ ಪ್ರಯತ್ನ ಮುಂದುವರಿಸಿದೆ.

ಜಾಗತಿಕ ಮಟ್ಟದ ಹೂಡಿಕೆದಾರರ ಆಕರ್ಷಣೆ. ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ. ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಜತೆಗೆ ಸಣ್ಣ ಕೈಗಾರಿಕೆಗಳ ಸ್ಥಾಪನೆ ಮತ್ತು ವಹಿವಾಟು ವಿಸ್ತರಣೆಗೆ ಉತ್ತೇಜನ ನೀಡುವ ಉದ್ದೇಶದ ಕೈಗಾರಿಕಾ ನೀತಿ ಜಾರಿಯಾಗಿದೆ. ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಜತೆಗೆ 20 ಲಕ್ಷ ಉದ್ಯೋಗ ಸೃಷ್ಟಿ ಗುರಿ ಹೊಂದಲಾಗಿದೆ. ಕೈಗಾರಿಕಾ ಸ್ನೇಹಿ ವಾತಾವರಣ ಸೃಷ್ಟಿ ಜತೆಗೆ ಉದ್ದಿಮೆದಾರರ ನಿರೀಕ್ಷೆಗಳಿಗೆ ಸ್ಪಂದಿಸುವ ಅಂಶಗಳನ್ನು ನೀತಿ ಒಳಗೊಂಡಿದ್ದು, ಉತ್ತಮ ಸ್ಪಂದನೆಯ ನಿರೀಕ್ಷೆಯಲ್ಲಿ ಇಲಾಖೆ ಇದೆ.

ಸುಗಮ ವ್ಯವಹಾರಕ್ಕೆ ಕಾಯ್ದೆ ಬಲ
ಪ್ರಸಕ್ತ ಸಾಲಿನಲ್ಲಿ ಜಾರಿಗೊಳಿಸಲಾಗಿರುವ “ಪ್ರಮಾಣಪತ್ರ ಆಧಾರಿತ ಅನುಮತಿ’ ಯೋಜನೆ ಅಡಿಯಲ್ಲಿ ಉದ್ದಿಮೆದಾರರು ಸ್ವಯಂ ಘೋಷಣೆ ಪತ್ರ ಮುಖೇನ ಅತ್ಯಂತ ಸರಳವಾಗಿ ಕೈಗಾರಿಕೆಗಳನ್ನು ಸ್ಥಾಪಿಸ ಬಹುದಾಗಿದೆ. ನಾನಾ ಇಲಾಖೆಗಳ ಆಯ್ದ 15 ಉದ್ಯಮ ಸೇವೆಗಳು ಇದರ ವ್ಯಾಪ್ತಿಗೆ ಬರಲಿವೆ. ಹಾಗೆಯೇ ಕರ್ನಾಟಕ ಕೈಗಾರಿಕಾ ಸೌಲಭ್ಯ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಕೈಗಾರಿಕೆ ಸ್ಥಾಪನೆಗೆ ಭೂಪರಿವರ್ತನೆ, ಕಟ್ಟಡ ನಕ್ಷೆ ಸೇರಿ ಇತರ ಅನುಮತಿ ಪಡೆಯುವವರೆಗೆ ಕೈಗಾರಿಕೆ ಸ್ಥಾಪನೆಗೆ ಕಾಯುವ ಅಗತ್ಯವಿಲ್ಲ. ಜಿಲ್ಲಾ ಹಾಗೂ ರಾಜ್ಯ ಸಮಿತಿಯಿಂದ ಅನುಮತಿ ದೊರೆತ ಕೂಡಲೇ ಕಾಮಗಾರಿ ಆರಂಭಿಸಬಹುದಾಗಿದೆ.

ಇದಕ್ಕೆ ಆದ್ಯತೆ ಸಿಗಲಿ
ಆಟೋಮೊಬೈಲ್‌ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಸೇವಾ ವಲಯಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವ ಅಗತ್ಯವಿದೆ.
ರಾಜ್ಯದ ದ್ವಿತೀಯ, ತೃತೀಯ ಹಂತದ ನಗರಗಳಲ್ಲಿ ಹೂಡಿಕೆದಾರರು ಕೈಗಾರಿಕೆ ಸ್ಥಾಪಿಸಲು ಪ್ರೋತ್ಸಾಹಿಸಬೇಕು.

ಆಗಲೇಬೇಕಾದ ಕೆಲಸ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹರಳೂರು- ಮುದ್ದೇನಹಳ್ಳಿಯ ಕೆಐಎಡಿಬಿ ಕೈಗಾರಿಕ ಪ್ರದೇಶದಲ್ಲಿ “ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಎಕ್ಯುಪ್‌ಮೆಂಟ್‌ ಮ್ಯಾನುಫ್ಯಾಕ್ಚರಿಂಗ್‌ ಕ್ಲಸ್ಟರ್‌’ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿ ನಲ್ಲಿ ಕೈಗಾರಿಕ ವಸಾಹತು ಸ್ಥಾಪನೆ., ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ತಂತ್ರಜ್ಞಾನ ಸೇವೆ ಕಲ್ಪಿಸಲು ಬೆಂಗಳೂರಿನಲ್ಲಿ “ಸೆಂಟರ್‌ ಫಾರ್‌ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌’ ಸಂಸ್ಥೆ ಸ್ಥಾಪನೆ “ಕಾಯರ್‌ ಎಕ್ಸ್‌ಪೀರಿಯನ್ಸ್‌ ಸೆಂಟರ್‌’ ಹಾಗೂ “ತೆಂಗು ಆಧಾರಿತ ಕೈಗಾರಿಕ ಪಾರ್ಕ್‌’

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.