ಎಲ್.ಕೆ.ಅಡ್ವಾಣಿ 94ನೇ ವರ್ಷಕ್ಕೆ ಪದಾರ್ಪಣೆ; ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ
ದೇಶದ ಜನರಲ್ಲಿ ಸಾಂಸ್ಕೃತಿಕ ಅಭಿಮಾನ ಬೆಳೆಸಲು ಅಡ್ವಾಣಿಜೀಯವರ ಪಟ್ಟ ಶ್ರಮ ಅಪಾರವಾದದ್ದು ಎಂದು ಶ್ಲಾಘಿಸಿದರು.
Team Udayavani, Nov 8, 2021, 11:55 AM IST
ನವದೆಹಲಿ: ದೇಶದ ಮಾಜಿ ಉಪ ಪ್ರಧಾನಿ, ಭಾರತೀಯ ಜನತಾ ಪಕ್ಷದ ದೀರ್ಘಾವಧಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಹೆಗ್ಗಳಿಕೆಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ಸೋಮವಾರ(ನವೆಂಬರ್ 08) 94ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಶುಭಾಶಯ ಕೋರಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ರಾಜ್ಯ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
ಗೌರವಾನ್ವಿತ ಅಡ್ವಾಣಿಜೀಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾವಧಿಯ ಉತ್ತಮ ಆರೋಗ್ಯ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ ಪ್ರಧಾನಿ ಮೋದಿ, ದೇಶದ ಜನರಲ್ಲಿ ಸಾಂಸ್ಕೃತಿಕ ಅಭಿಮಾನ ಬೆಳೆಸಲು ಅಡ್ವಾಣಿಜೀಯವರ ಪಟ್ಟ ಶ್ರಮ ಅಪಾರವಾದದ್ದು ಎಂದು ಶ್ಲಾಘಿಸಿದರು.
ದೇಶದ ಅಭಿವೃದ್ಧಿಯ ವಿಚಾರದಲ್ಲಿ ಎಲ್.ಕೆ.ಅಡ್ವಾಣಿಯವರ ಪಾತ್ರ ಪ್ರಮುಖವಾದದ್ದು ಎಂದು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಪಕ್ಷದ ಸಾವಿರಾರು ಕಾರ್ಯಕರ್ತರಿಗೆ ಅಡ್ವಾಣಿಜೀಯವರು ಸ್ಫೂರ್ತಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.