ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ. 80ರಷ್ಟು ಗೆಲುವು: ಕಟೀಲ್ ವಿಶ್ವಾಸ


Team Udayavani, Aug 27, 2020, 5:49 PM IST

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ. 80ರಷ್ಟು ಗೆಲುವು: ಕಟೀಲ್ ವಿಶ್ವಾಸ

ಕಲಬುರಗಿ: ಮತಗಟ್ಟೆಯಿಂದ ರಾಜ್ಯದ ಮಟ್ಟದವರೆಗೂ ಬಿಜೆಪಿ ತಂಡ ಬಹಳ ಭದ್ರವಾಗಿದೆ. ಸಂಘಟನೆ ಅಧಾರದ ಮೇಲೆ ಮುಂದಿನ ದಿನಗಳಲ್ಲಿ ಬರುವ ಗ್ರಾಮ ಪಂಚಾಯತಿ, ತಾ.ಪಂ ಹಾಗೂ ಗ್ರಾಮ ಪಂಚಾಯತಿಯಲ್ಲಿ ಶೇ.80ರಷ್ಟು ಸ್ಥಾನಗಳಲ್ಲಿ ಗೆಲ್ಲಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ದೃಢ ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಸಂಘಟನೆಗಾಗಿ ಇಲ್ಲಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಂಘಟನೆಗಾಗಿ ಪೇಜ್ ಪ್ರಮುಖರನ್ನು ನೇಮಿಸಿದ್ದೇವೆ. ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯನ್ನು ಮಹಾಶಕ್ತಿ ಕೇಂದ್ರ ಎಂಬುದಾಗಿ ಮಾಡಿ ಅದಕ್ಕೆ ಪ್ರಮುಖರನ್ನು ನೇಮಿಸಲಾಗುವುದು. ಯಾವ ರೀತಿ ಗೆಲ್ಲಲಬೇಕೆಂಬುದನ್ನು ತಂತ್ರಗಾರಿಕೆ ರೂಪಿಸಲಾಗುವುದು ಎಂದರು.

ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಹಿರಿಯರ ಮಾರ್ಗದರ್ಶನದಿಂದ ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲದೆ ಸಂಘಟನೆ ಮಾಡಿದ್ದೇವೆ. ಸಾಕಷ್ಟು ಸವಾಲುಗಳನ್ನು ನಿಭಾಯಿಸಿದ್ದೇವೆ. ಮುಂದನ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಕಟೀಲ್ ಹೇಳಿದರು.

ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಹಿರಿಯರ ಮಾರ್ಗದರ್ಶನದಿಂದ ಒಂದು ವರ್ಷ ಯಶಸ್ವಿ ಯಾಗಿ ಪೂರ್ಣಗೊಳಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲದೆ ಸಂಘಟನೆ ಮಾಡಿದ್ದೇವೆ. ಸಾಕಷ್ಟು ಸವಾಲುಗಳನ್ನು ನಿಭಾಯಿಸಿದ್ದೇವೆ. ಮುಂದನ ದಿನಗಳಲ್ಲಿ ಬಿಜೆಪಿ ಮತ್ತಷ್ಟು ಗಟ್ಟಿಯಾಗಲಿದೆ ಎಂದರಲ್ಲದೇ ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆ ಎಂಬುದನ್ನು ಜತೆಗೆ ವಿಭಾಗೀಯ ಕೇಂದ್ರ ಹೊಂದಿರುವ ಕಲಬುರಗಿ ಗೆ ಸಚಿವ ಸ್ಥಾನ ಕಲ್ಪಿಸುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರು ನಿರ್ಧರಿಸುತ್ತಾರೆ. ಅವರೇ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಟೀಲ್ ವಿವರಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಗಿರುವ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜೇಯೇಂದ್ರ ಪರ್ಯಾಯ ಸರ್ಕಾರ ನಡೆಸುತ್ತಿದ್ದಾರೆ. ಹಗರಣ ನಡೆಸಿದ್ದಾರೆ ಎಂದೆಲ್ಲ ಬುಡವಿಲ್ಲದ ಆರೋಪವು ಕಾಂಗ್ರೆಸ್‍ನವರದ್ದಾಗಿದೆ. ಸುಳ್ಳು ಹೇಳೋವುದರಲ್ಲಿ, ಪತ್ರಗಳ ಸೃಷ್ಟಿಸುವಲ್ಲಿ ಕಾಂಗ್ರೆಸ್ಸಿನವರು ನಿಸ್ಸಿಮರು ಎಂದು ಟೀಕಿಸಿದರು.

ಬೆಂಕಿ ಹಚ್ಚುವ ಕೆಲಸವವನ್ನು ಕಾಂಗ್ರೆಸ್‍ನವರು ಇಂದು ನಿನ್ನೆಯದಲ್ಲ. ಇಂದಿರಾಗಾಂಧಿ ಕಾಲದಿಂದಲೂ ಮಾಡಿಕೊಂಡು ಬರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡಿಕೊಳ್ಳಲಿಕ್ಕಾಗುತ್ತಿಲ್ಲ. ಈಗ ವೃದ್ಧಾಶ್ರಮವಾಗುತ್ತಿದೆ. ಡಿಕೆಶಿ-ಸಿದ್ಧರಾಮಯ್ಯ ಬಣದ ತಿಕ್ಕಾಟ ನಡೆದಿದೆ. ಅದನ್ನು ಸರಿಪಡಿಸಿಕೊಂಡು ಬಿಜೆಪಿ ಹಾಗೂ ವಿಜೇಯೇಂದ್ರ ಕುರಿತಾಗಿ ಮಾತನಾಡಲಿ ಎಂದು ಕಟೀಲ್ ತಿರುಗೇಟು ನೀಡಿದರು.

ತದನಂತರ ಪಶುಸಂಗೋಪನೆ, ಹಜ್ ಹಾಗೂ ವಕ್ಫ್ ಸಚಿವ ಪ್ರಭು ಚವಾಣ್ ಅವರೊಂದಿಗೆ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ನಳಿನ್‍ಕುಮಾರ ಕಟೀಲ್, ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಕುರಿತಾಗಿ ಈಗಾಗಲೇ ಸಚಿವ ಸಂಪುಟ ಸಭೆ ಹಾಗೂ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿದೆ. ಮುಂದಿನ ದಿನಗಳಲ್ಲಿ ಕಾಯ್ದೆ ಜಾರಿಗೆ ಬರಲಿದೆ ಎಂಬುದಾಗಿ ದೃಢ ವಿಶ್ವಾಸ ಹೊಂದಲಾಗಿದೆ ಎಂದರು.

ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ, ಬಸವರಾಜ ಮತ್ತಿಮಡು ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.