Loksabha: ನರೇಂದ್ರ ಮೋದಿ ವಿರುದ್ಧ ಒಗ್ಗಟ್ಟಿನ ಅಭ್ಯರ್ಥಿ?

ಪ್ರಮುಖ ಪ್ರಾದೇಶಿಕ ಪಕ್ಷಗಳ ಅಭಿಮತ | ಜಾರಿಗೆ ಕಾಂಗ್ರೆಸ್‌ ನಿಲುವೇ ಅಡ್ಡಿ

Team Udayavani, May 31, 2023, 7:24 AM IST

MODI IMP

ಹೊಸದಿಲ್ಲಿ/ಕೋಲ್ಕತಾ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗಾಗಿ ವಿಪಕ್ಷಗಳ ಒಕ್ಕೂಟ ರಚನೆಗೆ ಸಿದ್ಧತೆ ಬಿರುಸಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಒಗ್ಗಟ್ಟಿನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಒಂದು ಹಂತದ ಸಹಮತವೂ ವ್ಯಕ್ತವಾಗಿದೆ. ಜೆಡಿಯು, ಟಿಎಂಸಿ, ಡಿಎಂಕೆ, ಎಸ್‌ಪಿ ಸೇರಿದಂತೆ ಹಲವು ಪಕ್ಷಗಳ ನಾಯಕರು ಈ ಬಗ್ಗೆ ಸಮ್ಮತಿಯನ್ನೂ ಸೂಚಿಸಿದ್ದಾರೆ. ಆದರೆ ಒಕ್ಕೂಟ ರಚನೆಗೆ ಪ್ರಧಾನವಾಗಿ ಪಾತ್ರ ವಹಿಸುತ್ತಿರುವ ಕಾಂಗ್ರೆಸ್‌ ತನ್ನ ಬಿಗಿ ನಿಲುವು ಸಡಿಲಿಸಿದರೆ, ಗೆಲುವು ಸಾಧ್ಯ ಎಂದು ಪ್ರತಿಪಾದಿಸುತ್ತಿದ್ದಾರೆ.

ತಾನು ಗೆಲ್ಲುವ ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು. ಇನ್ನುಳಿದಂತೆ ಪ್ರಾದೇಶಿಕ ಪಕ್ಷಗಳು ಬಲವಾಗಿರುವ ತಮಿಳುನಾಡು, ಬಿಹಾರ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶಗಳಲ್ಲಿ ಆಯಾ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್‌ ಸಹಕಾರ ನೀಡಬೇಕು ಮತ್ತು ಅಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬಾರದು. ಜತೆಗೆ ಕಾಂಗ್ರೆಸ್‌ ಬಲ ಹೊಂದಿರುವ ಕ್ಷೇತ್ರಗಳಲ್ಲಿ ಮಾತ್ರ ಕೇಂದ್ರೀಕರಿಸಿ ಉಳಿದೆಡೆ ಮಿತ್ರ ಪಕ್ಷಗಳಿಗೆ ನೆರವು ನೀಡಬೇಕು ಎಂಬ ಅಭಿಪ್ರಾಯವನ್ನು ಜೆಡಿಯು, ಡಿಎಂಕೆ, ಎಸ್‌ಪಿ ಮುಖಂಡರು ವ್ಯಕ್ತಪಡಿಸಿದ್ದಾರೆ.

ಜೂ.12ರಂದು ಪಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಗೆ ಮುನ್ನವೇ ಈ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಪರಾಮರ್ಶೆಯೂ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖೀಸಿ “ನ್ಯೂಸ್‌ 18′ ವರದಿ ಮಾಡಿದೆ. ಜತೆಗೆ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಕೂಡ ವಿಪಕ್ಷಗಳ ಒಗ್ಗಟ್ಟಿನ ಪ್ರಧಾನಮಂತ್ರಿ ಅಭ್ಯರ್ಥಿ      ಯನ್ನು ಆಯ್ಕೆ ಮಾಡಿ ಕಣಕ್ಕೆ ಇಳಿಸುವ ಪ್ರಯತ್ನಕ್ಕೂ ಸಹಮತ ಸೂಚಿಸಿದ್ದಾರೆ.

ಪಕ್ಷ ತ್ಯಜಿಸುವ ಸಾಧ್ಯತೆ: ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಬಣದಿಂದ 22 ಶಾಸಕರು, 9 ಸಂಸದರು ಹೊರಬರುವ ಸಾಧ್ಯತೆ. ಅಲ್ಲಿ ಅವರ ವಿರುದ್ಧ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು “ಸಾಮ್ನಾ’ ಸಂಪಾದಕೀಯದಲ್ಲಿ ಬರೆಯಲಾಗಿದೆ.

ಕಾಂಗ್ರೆಸ್‌ ವರ್ಸಸ್‌ ಟಿಎಂಸಿ
ಪಶ್ಚಿಮ ಬಂಗಾಳದಲ್ಲಿ ಇರುವ ಪಕ್ಷದ ಏಕೈಕ ಶಾಸಕ ಬೈರೋನ್‌ ಬಿಶ್ವಾಸ್‌ ಅವರನ್ನು ಸೆಳೆದುಕೊಂಡ ಟಿಎಂಸಿ ಕ್ರಮದ ಬಗ್ಗೆ ಕಾಂಗ್ರೆಸ್‌ ಪ್ರಬಲವಾಗಿ ಆಕ್ಷೇಪಿಸಿದೆ. ಇಂಥ ಕ್ರಮಗಳು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಕ್ಕೂಟ ರಚಿಸಬೇಕು ಎಂಬ ಮಹತ್ವಾಕಾಂಕ್ಷೆಗೆ ಪ್ರತಿಕೂಲ ಪರಿಣಾಮ ಉಂಟು ಮಾಡುತ್ತದೆ ಎಂದು ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯ ಜೈರಾಂ ರಮೇಶ್‌ ಕಟುವಾಗಿ ಟೀಕಿಸಿದ್ದಾರೆ. “ಬಿಜೆಪಿ ವಿರುದ್ಧ ಯಾವ ರೀತಿಯ ಹೋರಾಟ ನಡೆಸಬೇಕು ಎಂಬುದರ ಬಗ್ಗೆ ಕಾಂಗ್ರೆಸ್‌ನ ಪಾಠ ನಮಗೆ ಬೇಡ’ ಎಂದು ಟಿಎಂಸಿ ನಾಯಕ ಸುಖೇಂದು ರಾಯ್‌ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.